ದೇಶದ ಏಕತೆ, ಅಖಂಡತೆ ಹಾಗೂ ರಾಷ್ಟ್ರಭಕ್ತಿಯ ಸಂದೇಶ ಸಾರಿದ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 14:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ವಿಜಯಪುರ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಗಾಂಧಿ ವೃತ್ತ, ಬಸವೇಶ್ವರ ವೃತ್ತದ ಮಾರ್ಗವಾಗಿ ಶಿವಾಜಿ ವೃತ್ತದವರೆಗೆ ಬೃಹತ್ ತಿರಂಗಾ ಯಾತ್ರೆ ನಡೆಯಿತು.ಸುಮಾರು 300 ಮೀಟರ್ ಉದ್ದದ ರಾಷ್ಟ್ರಧ್ವಜ ಯಾತ್ರೆಯ ಪ್ರಮುಖ ಆಕರ್ಷಣೆಯಾಗಿತ್ತು. ನೂರಾರು ವಿದ್ಯಾರ್ಥಿಗಳು ಹಾಗೂ ಯುವಕರು ಕೈಯಲ್ಲಿ ರಾಷ್ಟ್ರಧ್ವಜ ಹಿಡಿದು ಶಿಸ್ತಿನಿಂದ ಯಾತ್ರೆಯಲ್ಲಿ ಪಾಲ್ಗೊಂಡರು. ಯಾತ್ರೆಯುದ್ದಕ್ಕೂ ‘ಭಾರತ ಮಾತಾ ಕೀ ಜೈ’, ‘ವಂದೇ ಮಾತರಂ’ ಸೇರಿದಂತೆ ದೇಶಭಕ್ತಿ ಘೋಷಣೆಗಳು…

Read More