ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ: ಕೆವಿಪಿ

ಸಪ್ತಸಾಗರ ವಾರ್ತೆ,ಬೆಂಗಳೂರು ಮೇ 22:ಮಾಧ್ಯಮ‌ ಸಲಹೆಗಾರ ಹೊಣೆಗಾರಿಕೆ ಸವಾಲಿನದ್ದು. ಸದಾ ಎಚ್ಚರದ ಸ್ಥಿತಿಯಲ್ಲಿ ಗಮನಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟರು.ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಬಳಿಕ “ಮಾಧ್ಯಮ ಸಂವಾದ”ದಲ್ಲಿ ಮಾತನಾಡಿದರು.ಮಾಧ್ಯಮ ಸಲಹೆಗಾರ ಹುದ್ದೆ ಪ್ರತೀ ದಿನ ಸವಾಲಿನದ್ದು. ಬೆಳಗ್ಗೆ ಎದ್ದು ಪತ್ರಿಕೆಗಳನ್ನು ತಿರುವಿ ಹಾಕುವವರೆಗೂ ನನಗೆ ದುಗುಡ ಇದ್ದೇ ಇರುತ್ತದೆ. ಈ ಸವಾಲುಗಳನ್ನು ಪ್ರತೀ ದಿನ ನಿರ್ವಹಿಸುತ್ತಿದ್ದೇನೆ…

Read More

ಡಾ. ರಾಘವೇಂದ್ರ ಕುಲಕರ್ಣಿ, ಪ್ರೊ. ಡಾ. ಕುಶಾಲದಾಸರಿಗೆ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 21 : ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ ಮತ್ತು ಶರೀರ ರಚನಾಶಾಸ್ತ್ರ ವಿಜ್ಞಾನ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊಫೆಸರ್ ಡಾ. ಕುಸಾಲ ದಾಸ ಅವರಿಗೆ 2025ನೇ ವರ್ಷದ ವಿಶ್ವದ ಶ್ರೇಷ್ಠ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಲಭಿಸಿದೆ.ಡಾ. ರಾಘವೇಂದ್ರ ಕುಲಕರ್ಣಿ ಅವರು ಔಷಧ ವಿಜ್ಞಾನ ಮತ್ತು ಪಾಲಿಮರ್ ಕ್ಷೇತ್ರ ಹಾಗೂ ಡಾ. ಕುಸಾಲ ದಾಸ ಅವರು ಶರೀರ ರಚನಾಶಾಸ್ತ್ರ ಕ್ಷೇತ್ರದಲ್ಲಿ ಕೈಗೊಂಡಿರುವ ಸಂಶೋಧನೆಯನ್ನು ಪರಿಗಣಿಸಿ ಈ ಸ್ಥಾನ…

Read More