
ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿರುವ ಜಿಲ್ಲೆ-ಶಾಸಕ ವಿಠ್ಠಲ ಕಟಕದೊಂಡ
ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.27:ಬರಗಾಲ ಜಿಲ್ಲೆ ಎಂದು ಪ್ರಸಿದ್ಧಿ, ನೀರಿಗೂ ತತ್ವಾರ ಇದ್ದ ವಿಜಯಪುರ ಇಂದು ಹಸರಿನಿಂದ ಕಂಗೋಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ನಗರದ ಶಿವಗಿರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ವಿಶ್ವವಿಖ್ಯಾತ ಗೋಳಗುಮ್ಮಟದೊಂದಿಗೆ ಐತಿಹಾಸಿಕ ತಾಣಗಳುಳ್ಳ ವಿಜಯಪುರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆ. ಸಚಿವ ಎಂ.ಬಿ.ಪಾಟೀಲರು ನೀರಾವರಿ ಸಚಿವರಾಗಿದ್ದ…