ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷು (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಟಿಐನಲ್ಲಿನ ಫಿಟ್ಟರ್, ಟರ್ನರ್, ಮಷಿನಸ್ಟ್, ಇಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ ಕಂ ಆಪರೇಟರ್ ಮತ್ತು ಎಮ್.ಆರ್.ಎಸಿ ಟ್ರೇಡಗಳಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು, ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು https://apprenticeshipindia.gov.in ವೆಬ್‌ಸೈಟ್ ಮೂಲಕ…

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮ ದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.16:ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.ಆಸಕ್ತ…

Read More

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More

ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…

Read More

ಕಾನೂನ ಪದವಿ ಪಡೆದ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ತರಬೇತಿ : ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕಾನೂನು ಪದವಿ ಪಡೆದಿರುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ಸರ್ಕಾರಿ ಅಡ್ವೋಕೇಟ್ ಅಥವಾ 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತಿದ್ದು, ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿಸಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ.3.50ಲಕ್ಷಕ್ಕೆ ಮೀರಿರಬಾರದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 30 ವರ್ಷದೊಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿಬೇಕು.ಅರ್ಜಿ ಸಲ್ಲಿಸಲು…

Read More