ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ KRS ಸೈನಿಕರಿಗೆ ನಾಯಕತ್ವದ ತರಬೇತಿ

ರವಿ ಕೃಷ್ಣಾರೆಡ್ಡಿ ನೇತೃತ್ವದಲ್ಲಿ ವಿಜಯಪುರದಲ್ಲಿ ಕಾರ್ಯಾಗಾರ ಸಪ್ತಸಾಗರ ವಾರ್ತೆ,ವಿಜಯಪುರ, ಸೆ.13:ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ಸೈನಿಕರಿಗೆ ನಾಯಕತ್ವ, ಸಂಘಟನೆ ಹಾಗೂ ಜನಪರ ಹೋರಾಟದ ಕುರಿತು ಮಾರ್ಗದರ್ಶನ ನೀಡುವ ನಾಯಕತ್ವ ತರಬೇತಿ ಕಾರ್ಯಾಗಾರವು ವಿಜಯಪುರ ನಗರದಲ್ಲಿ ರಾಜ್ಯ ಗೌರವಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ನಡೆಯಿತು. ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದ ರವಿ ಕೃಷ್ಣಾರೆಡ್ಡಿ, ರಾಜಕೀಯವನ್ನು ಕೇವಲ ಅಧಿಕಾರ ಮತ್ತು ಚುನಾವಣೆಗಳ ದೃಷ್ಟಿಕೋನದಿಂದ ನೋಡದೆ, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಹಾಗೂ ಪ್ರಾಮಾಣಿಕ ಆಡಳಿತಕ್ಕಾಗಿ ನಿರಂತರವಾಗಿ ಶ್ರಮಿಸುವ ಜನಸೇವೆಯ ಕ್ಷೇತ್ರವನ್ನಾಗಿ ರೂಪಿಸಬೇಕು…

Read More

ಕೃಷಿ ಉದ್ಯಮಿ ತರಬೇತಿಗೆ ಗ್ರಾಮೀಣ ಯುವಕರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:ಗ್ರಾಮೀಣ ಪ್ರದೇಶದ ಯುವಕರಿಗೆ ಕೃಷಿಯನ್ನೇ ಉದ್ಯೋಗವನ್ನಾಗಿ ರೂಪಿಸಿಕೊಂಡು ಸ್ವಾವಲಂಬಿಗಳಾಗಲು ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ವಿಜಯಪುರದ ರುಡ್‌ಸೆಟ್ ಸಂಸ್ಥೆ ವತಿಯಿಂದ 13 ದಿನಗಳ ಉಚಿತ ಕೃಷಿ ಉದ್ಯಮಿ ತರಬೇತಿ ಆಯೋಜಿಸಲಾಗಿದೆ.ರುಡ್‌ಸೆಟ್ ಸಂಸ್ಥೆ ಹಾಗೂ ಕೆನರಾ ಬ್ಯಾಂಕ್‌ನ ಪ್ರಾಯೋಜಕತ್ವದಲ್ಲಿ ನಡೆಯಲಿರುವ ಈ ತರಬೇತಿಯು ಆ.17ರಿಂದ 13 ದಿನಗಳ ಕಾಲ ನಡೆಯಲಿದೆ. ಸ್ವಯಂ ಉದ್ಯೋಗ ಮಾಡಲು ಆಸಕ್ತಿ ಹೊಂದಿರುವ ಗ್ರಾಮೀಣ ಯುವಕರಿಗೆ ತರಬೇತಿ ನೀಡುವ ಉದ್ದೇಶದಿಂದ ಕಾರ್ಯಕ್ರಮ ರೂಪಿಸಲಾಗಿದೆ.ತರಬೇತಿಯಲ್ಲಿ ಹೈನುಗಾರಿಕೆ, ಕುರಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ…

Read More

ಜೂ. 16,17 ಅಪ್ರೆಂಟಿಸ್ ತರಬೇತಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 13:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆಯಲ್ಲಿ ಜೂನ್ 16 ಮತ್ತು 17 ರಂದು ಅಪ್ರೆಂಟಿಸ್ ತರಬೇತಿಗಾಗಿ ಕ್ಯಾಂಪಸ್ ಸಂದರ್ಶನ ನಡೆಯಲಿದೆ.ಧಾರವಾಡದಲ್ಲಿರುಬ ನಿಡೆಕ್ ಇಂಡಿಯಾ ಪ್ರೈ. ಲಿ.‌ ಕಂಪನಿ ತರಬೇತುದಾರ(Production Trainee) ಮತ್ತು ಅಪ್ರಂಟಿಸ್ ತರಬೇತಿಗಾಗಿ ಈ‌ ಕ್ಯಾಂಪಸ್ ಸಂದರ್ಶನ ನಡೆಸಲಿದೆ.ಐಟಿಐನ‌ ನಾನಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಜಿಲ್ಲೆಯ ನಾನಾ ಐಟಿಐ ಕಾಲೇಜಿನ…

Read More

ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯ: ಡಾ. ಇನಾಮದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 11:ನವಜಾತ ಶಿಶುಗಳ ಜೀವಿತಾವಧಿ ಹೆಚ್ಚಿಸಲು ಮತ್ತು ಗುಣಮಟ್ಟದ ಆರೋಗ್ಯ ಸೇವೆಯನ್ನು ಮತ್ತಷ್ಟು ಬಲಪಡಿಸಲು ಸಂರಚಿತ ನವಜಾತ ಶಿಶು ಪುನರುಜ್ಜೀವನ ತರಬೇತಿ ಅತ್ಯಂತ ಅಗತ್ಯವಾಗಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ.‌ಅರುಣ ಚಂ. ಇಮಾಮದಾರ ಹೇಳಿದ್ದಾರೆ.ರವಿವಾರ ನಗರದ ಬಿ.ಎಲ್‌.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ‌ ನಡೆದ ರಾಷ್ಟ್ರವ್ಯಾಪಿ ನವಜಾತ ಶಿಶು ಪುನರುಜ್ಜೀವನ ತರಬೇತಿ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಕ್ಕಳಶಾಸ್ತ್ರ ವಿಭಾಗದ ಸೇವಾ ಮನೋಭಾವ ಮತ್ತು ಶೈಕ್ಷಣಿಕ ಕಾರ್ಯಚಟುವಟಿಕೆಗಳು‌ ಈ ನಿಟ್ಟಿನಲ್ಲಿ ಪ್ರಮುಖವಾಗಿವೆ ಎಂದು ಅವರು…

Read More

ಟೆಲೆಸ್ಕೋಪ ತರಬೇತಿಗೆ ಮುಳವಾಡ ಶಾಲೆಯ ವಿದ್ಯಾರ್ಥಿ ಕೃಷ್ಣ ಕುಂಬಾರ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 1: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನ ಪರಿಷತ್ ಬೆಂಗಳೂರ ವತಿಯಿಂದ ಪ್ರೌಢಶಾಲಾ ಮತ್ತು ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ದಿನಗಳ ಕಾಲ “ನಾನು ವಿಜ್ಞಾನಿ 2025” ಶೀರ್ಷಿಕೆಯಡಿಯಲ್ಲಿ ಶಾಲೆಗೊಂದು ಟೆಲೆಸ್ಕೋಪ ತಯಾರಿಸುವ ತರಬೇತಿಯನ್ನು ನುರಿತ ತಜ್ಞರಿಂದ ನೀಡಲಾಗುತ್ತದೆ.ಇದೊಂದು ಗಿನ್ನಿಸ್ ದಾಖಲೆಗೆ ಸೇರ್ಪಡೆಯಾಗುವ ಸದಾವಕಾಶ ಒದಗಿ ಬಂದಿದೆ. ಈ ತರಬೇತಿಯನ್ನು ದೊಡ್ಡಬಳ್ಳಾಪುರ ಬಳಿಯಿರುವ ಬ್ಯಾಸೆಂಟ್ ಉದ್ಯಾನವನ ಸ್ಕೌಟ್ ಕ್ಯಾಂಪಿನಲ್ಲಿ ನೀಡಲಾಗುವುದು.ವಿಜಯಪುರ ಜಿಲ್ಲೆಯ ಮುಳವಾಡ ಪ್ರೌಢಶಾಲೆಯ ಹತ್ತನೇ ವರ್ಗದ ವಿದ್ಯಾರ್ಥಿ ಕುಮಾರ ಕೃಷ್ಣ ಬಸಪ್ಪ…

Read More

ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ಹಿಂದೂಸ್ತಾನ್ ಏರೋನಾಟಿಕ್ಸ್ ಲಿ.ಬೆಂಗಳೂರು ಇವರ ಮೂಲಕ ಶಿಶಿಕ್ಷು (ಅಪ್ರೆಂಟಿಶಿಪ್) ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಐಟಿಐನಲ್ಲಿನ ಫಿಟ್ಟರ್, ಟರ್ನರ್, ಮಷಿನಸ್ಟ್, ಇಲೆಕ್ಟ್ರಿಷಿಯನ್, ವೆಲ್ಡರ್, ಕೋಪಾ, ಕಾರ್ಪೆಂಟರ್, ಫೌಂಡ್ರಿಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕರ್, ಸಿಎನ್‌ಸಿ ಪ್ರೋಗ್ರಾಮರ ಕಂ ಆಪರೇಟರ್ ಮತ್ತು ಎಮ್.ಆರ್.ಎಸಿ ಟ್ರೇಡಗಳಲ್ಲಿ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು, ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದು https://apprenticeshipindia.gov.in ವೆಬ್‌ಸೈಟ್ ಮೂಲಕ…

Read More

ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮ ದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.16:ಕರ್ನಾಟಕ ಮಾಧ್ಯಮ ಅಕಾಡೆಮಿಯು Infosys Springboard ಸಿ.ಎಸ್.ಆರ್.‌ ಕಾರ್ಯಕ್ರಮದಡಿ ಪತ್ರಕರ್ತರ ತರಬೇತಿಗೆ ಅರ್ಜಿ ಆಹ್ವಾನಿಸಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕನಿಷ್ಠ 5 ವರ್ಷ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಗಣಿಸಿರುವ ರಾಜ್ಯಮಟ್ಟದ ಪತ್ರಿಕೆಗಳು ಹಾಗೂ ಇಲಾಖೆಯಡಿ ನೋಂದಾಯಿತ ಉಪಗ್ರಹ ಸುದ್ದಿ ವಾಹಿನಿಗಳ ಸಂಪಾದಕರು ಶಿಫಾರಸು ಮಾಡುವ ಪತ್ರಕರ್ತರನ್ನು ತರಬೇತಿಗೆ ಪರಿಗಣಿಸಲಾಗುವುದು. ಈ ಕುರಿತು ಸಂಪಾದಕರನ್ನು ನೇರವಾಗಿ ಸಂಪರ್ಕಿಸಲಾಗುವುದು.ಆಸಕ್ತ…

Read More

ರೈತರಿಗೆ ಕುರಿ, ಆಡು ಹಾಗೂ ಕೋಳಿ ಸಾಕಾಣಿಕೆ ತರಬೇತಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30: ಜಿಲ್ಲಾ ಕೃಷಿ ತರಬೇತಿ ಕೇಂದ್ರದ ವತಿಯಿಂದ ಜಿಲ್ಲೆಯ ರೈತ-ರೈತ ಮಹಿಳೆಯರಿಗೆ ಸೆ.8ರಿಂದ 13ರವರೆಗೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕುರಿ-ಆಡು ಹಾಗೂ ಕೋಳಿ ಸಾಕಾಣಿಕ ತರಬೇತಿ ಆಯೋಜಿಸಲಾಗಿದೆ.6 ದಿನಗಳ ಕಾಲ ನಡೆಯುವ ಈ ತರಬೇತಿಯಲ್ಲಿ ಭಾಗವಹಿಸುವ ಆಸಕ್ತ ರೈತರು ಸೆ. 6ರೊಳಗೆ ನೋಂದಾಯಿಸಿಕೊಳ್ಳಬೇಕು. ನೋಂದಣಿ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಕೃಷಿ ಅಧಿಕಾರಿ ಗೀತಾ ಭಜಂತ್ರಿ ಮೊ: 9986054750 ಅವರನ್ನು ಸಂಪರ್ಕಿಸುವಂತೆ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಉಪ…

Read More

ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ,ಆ. 18 : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ತರಬೇತಿಯ ಅವಧಿ ಎರಡು ವರ್ಷದಾಗಿದ್ದು, ತರಬೇತಿಯಲ್ಲಿ ಅಭ್ಯರ್ಥಿಗಳಿಗೆ ಮಾಸಿಕ ಆದಾಯ 10,000 ಶಿಷ್ಯ ವೇತನ ನೀಡಲಾಗುವುದು.ಅರ್ಜಿ ಸಲ್ಲಿಸುವ ಅಭ್ಯರ್ಥಿಯು ವಿಜಯಪುರ ಜಿಲ್ಲೆಯವರಾಗಿಬೇಕು. 40 ವರ್ಷ ವಯಸ್ಸು ಹಾಗೂ ಕುಟುಂಬದ ವಾರ್ಷಿಕ ಆದಾಯ 2ಲಕ್ಷ 50ಸಾವಿರ ರೂ. ಮೀರಿರಬಾರದು. ಎರಡು ವರ್ಷದ ಒಳಗೆ…

Read More