
ಅಕ್ರಮ ಅಕ್ಕಿ ಸಾಗಾಟ: ಅಕ್ಕಿ ವಶ
ಸಪ್ತಸಾಗರ ವಾರ್ತೆ, ವಿಜಯಪುರ,ಸೆ.7:ನಗರ ಹೊರ ವಲಯದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760 ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ…