
ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ…