
ವಿಜಯಪುರಕ್ಕೆ ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಬೇಡ : ಡಾ. ಬಾಬುರಾಜೇಂದ್ರ ನಾಯಿಕ
ಸಪ್ತಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸೂಕ್ತವಾಗುತ್ತದೆ. ಪಿಪಿಪಿ ಮಾದರಿ ಕಾಲೇಜ್ ಬೇಡ ಎಂದು ಶ್ರೀ ತುಳಸಿಗಿರೀಶ್ ಫೌಂಡೇಶನ್ ಅಧ್ಯಕ್ಷ ಡಾ. ಬಾಬುರಾಜೇಂದ್ರ ನಾಯಿಕ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಮುಂಗಾರು ಅಧಿವೇಶನದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರು ವಿಜಯಪುರ ಜಿಲ್ಲೆಗೆ ವೈದ್ಯಕೀಯ ಕಾಲೇಜನ್ನು ಖಾಸಗಿ ಮತ್ತು ಸಾರ್ವಜನಿಕ ಸಹಭಾಗಿತ್ವದಲ್ಲಿ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಿರುವುದು ದುರದೃಷ್ಟಕರ.ಇಡೀ ರಾಜ್ಯದಲ್ಲಿ ಅಚ್ಚುಕಟ್ಟಾಗಿ ರೋಗಿಗಳ ಸೇವೆಗೆ ಹೆಸರುವಾಸಿಯಾಗಿರುವ ನಮ್ಮ ವಿಜಯಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಖಾಸಗಿ…