ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪ – ವಿ.ಬಿ. ಮರ್ತೂರ ಅಭಿಮತ
ಸಪ್ತಸಾಗರ ವಾರ್ತೆ, ವಿಜಯಪುರ,ಫೆ. 8: ವಚನ ಸಾಹಿತ್ಯ ಕನ್ನಡ ಸಾರಸ್ವತ ಲೋಕಕ್ಕೆ ಅತ್ಯಮೂಲ್ಯ ಕೊಡುಗೆ ನೀಡಿದೆ. ಬಸವಣ್ಣನವರ ಸಮಕಾಲೀನ ವಚನಕಾರರು ಈ ಸಮಾಜಕ್ಕೆ ಬಹುದೊಡ್ಡ ಸಂದೇಶ ನೀಡಿ ಹೋಗಿದ್ದು, ವಚನ ಸಾಹಿತ್ಯ ನಮ್ಮೆಲ್ಲರ ಬದುಕಿಗೆ ದಾರಿದೀಪವಾಗಿದೆ. ವಚನ ಸಾಹಿತ್ಯ ಸರ್ವಕಾಲಿಕ ಅನನ್ಯ. ವಚನ ಸಾಹಿತ್ಯ ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಬಸವನಬಾಗೇವಾಡಿ ತಾಲೂಕಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿ.ಬಿ. ಮರ್ತೂರ ಅಭಿಪ್ರಾಯಪಟ್ಟರು.ರವಿವಾರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಲಿಂ.ಪೂಜ್ಯ…


