ಖಾಲಿ ಹುದ್ದೆಗಳ ಭರ್ತಿಗೆ ನಿರಾಣಿ ಪತ್ರ
ಸಪ್ತಸಾಗರ ವಾರ್ತೆ,ವಿಜಯಪುರ, 12 :ಮೀಸಲಾತಿ ಗೊಂದಲವನ್ನು ಆದಷ್ಟು ಬೇಗ ನಿವಾರಿಸಿ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಈ ಕೂಡಲೇ ಭರ್ತಿ ಮಾಡಬೇಕು ಹಾಗೂ ಕೂಡಲೇ ವಯೋಮಿತಿಯನ್ನು ಸಡಿಲಗೊಳಿಸುವಂತೆ ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಒತ್ತಾಯಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಲಿಖಿತ ಪತ್ರ ಬರೆದು ಒತ್ತಾಯಿಸಿರುವ ನಿರಾಣಿ ಅವರು, ಗ್ರಾಮೀಣ ಭಾಗದ ಬಡ ನಿರುದ್ಯೋಗಿಗಳು ಸರ್ಕಾರಿ ನೌಕರಿಯನ್ನು ಪಡೆದುಕೊಳ್ಳಬೇಕೆಂಬ ಮಹದಾಸೆಯೊಂದಿಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಸ್ವಂತ ಊರು, ವಯಸ ವಯಸ್ಸಾದ…


