SIR ವಿರುದ್ಧ ವಿವಿಧ ಸಂಘಟನೆಗಳ ಆಕ್ಷೇಪ: ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಕೆ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 30:ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್–Special Intensive Revision) ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಿ ಮರುಪರಿಶೀಲನೆ ನಡೆಸುವಂತೆ ಆಗ್ರಹಿಸಿ, ವಿಜಯಪುರದಲ್ಲಿ ವಿವಿಧ ಸಾಮಾಜಿಕ, ಪ್ರಗತಿಪರ ಹಾಗೂ ನಾಗರಿಕ ಸಂಘಟನೆಗಳ ಮುಖಂಡರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಮನವಿಯಲ್ಲಿ, ಚುನಾವಣಾ ಆಯೋಗ ಜಾರಿಗೊಳಿಸಿರುವ ಎಸ್ಐಆರ್ ಪ್ರಕ್ರಿಯೆಯಿಂದ ಕೋಟ್ಯಂತರ ಮತದಾರರ ಮತದಾನದ ಹಕ್ಕಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಲಾಗಿದೆ. ವಿಶೇಷವಾಗಿ ಬಡವರು, ಗ್ರಾಮೀಣ ಪ್ರದೇಶದ ಜನರು, ವಲಸೆ ಕಾರ್ಮಿಕರು,…


