ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಅಂಗವಿಕಲರ ನೇಮಕಕ್ಕೆ ವಿಡಿಎ ಅನುಮೋದನೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 20 :ಲಿಫ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ ಅಂಗವಿಕಲರನ್ನು ನೇಮಿಸಬೇಕು ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಮಾಡಿದ ಪ್ರಸ್ತಾವಕ್ಕೆ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಯಿತು.ಸೋಮವಾರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಸುನೀಲಗೌಡ ಪಾಟೀಲ, ಮುಂಬರುವ ವಿಧಾನ ಪರಿಷತ ಅಧಿವೇಶನದಲ್ಲಿಯೂ ಈ ಕುರಿತು ಸರಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.ವಸತಿ ಸಮುಚ್ಛಯಗಳು, ವಾಣಿಜ್ಯ ಸಂಕೀರ್ಣಗಳು, ಆಸ್ಪತ್ರೆಗಳು, ಮಾಲ್ ಗಳು ಸೇರಿದಂತೆ ಬಹುಮಹಡಿ ಕಟ್ಟಡಗಳಲ್ಲಿ ಲಿಫ್ಟ್ ಬಳಸಲಾಗುತ್ತದೆ. ಈ ಲಿಪ್ಟ್ ಆಪರೇಟರ್ ಹುದ್ದೆಗಳಿಗೆ ಕಡ್ಡಾಯವಾಗಿ…


