ಬೆಳಗಾವಿ ಎಪಿಎಂಸಿಗೆ ತರಕಾರಿ ಮಾರುಕಟ್ಟೆ ಸ್ಥಳಾಂತರ- ಸಚಿವ ಶಿವಾನಂದ ಪಾಟೀಲರಿಗೆ ರೈತರಿಂದ ಸನ್ಮಾನ
ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 30 :ಬೆಳಗಾವಿ ನಗರದಲ್ಲಿ ಖಾಸಗಿ ಹಿಡಿತದಲ್ಲಿದ್ದ ತರಕಾರಿ ಮಾರುಕಟ್ಟೆಯನ್ನು ಕೃಷಿ ಉತ್ಪನ್ನ ಮಾರುಕಟ್ಟೆಗೆ ಸ್ಥಳಾಂತರಿಸಲು ಕ್ರಮ ಕೈಗೊಂಡ ಕಾರಣ ರೈತರು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿದರು.ಮಂಗಳವಾರ ನಗರದಲ್ಲಿರುವ ಸಚಿವರ ಗೃಹ ಕಛೇರಿಗೆ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಚುನ್ನಪ್ಪ ಪೂಜಾರಿ ಬಣ) ಕೊಲ್ಹಾರ ತಾಲೂಕ ಅಧ್ಯಕ್ಷ ಸೋಮು ಬಿರಾದಾರ ನೇತೃತ್ವದಲ್ಲಿ ರೈತರು ಸಚಿವ ಶಿವಾನಂದ ಪಾಟೀಲ ಅವರನ್ನು ಸನ್ಮಾನಿಸಿ, ಸಿಹಿ…


