ವಾಹನ ಖರೀದಿಗೆ ಅರ್ಜಿ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ,ಜೂ.6:ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ, 2020-21 ರಿಂದ 2023-24ನೇ ಸಾಲಿನ ಜಿಲ್ಲೆಗೆ ಸಾಮಾನ್ಯ ವರ್ಗದಡಿ ಒಂದು ಇನ್ಸುಲೇಟೆಡ್ ವಾಹನ ಖರೀದಿಗೆ ಸಹಾಯಧನಕ್ಕಾಗಿ ಜಿಲ್ಲೆಯ ಅರ್ಹ ಆಸಕ್ತ ಮೀನುಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ. 40 ರಷ್ಟು ಸಹಾಯಧನ ದೊರೆಯಲಿದ್ದು, ಉಳಿದ ಶೇ. 60 ರಷ್ಟು ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗುತ್ತದೆ. ಅರ್ಹತೆಗಳೇನುಅರ್ಜಿದಾರರು ಕಡ್ಡಾಯವಾಗಿ ವಿಜಯಪುರ ಜಿಲ್ಲೆಯ ಖಾಯಂ ನಿವಾಸಿಯಾಗಿರಬೇಕು.ಮೀನುಗಾರಿಕೆ ಅಥವಾ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿರುವ ಆಸಕ್ತರು ಮೀನುಗಾರರ ಸಹಕಾರ ಸಂಘಗಳ ಸದಸ್ಯರಾಗಿರುವುದು ಕಡ್ಡಾಯವಾಗಿದೆ.ಅರ್ಜಿದಾರರು…


