ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ…


