ಶಿಕ್ಷಣ ಕ್ರಾಂತಿಯ ಹರಿಕಾರರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು : ರಂಗನಾಥ
ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಸಮಾಜದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಾದರೆ ದೇಶ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತದೆ ಎಂಬ ಮಾತಿನಂತೆಸುತ್ತೂರು ಕ್ಷೇತ್ರದ ಲಿಂ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹುಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು ಆಚರಿಸಿದವರು ಎಂದು ಬರಹಗಾರ ರಂಗನಾಥ ಥೋರ್ಪೆ ಹೇಳಿದರು.ವಿಜಯಪುರ ನಗರದ ಬಿ ಎಲ್ ಡಿ ಈ ಸಂಸ್ಥೆಯ ಎಸ್. ಎಸ್.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ…


