
ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ: ಕುಲಪತಿ ವಿಜಯಾ ಕಳವಳ
ಸಪ್ತಸಾಗರ ವಾರ್ತೆ, ವಿಜಯಪುರ, ಆ23:“ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ‍್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಶ್ವವಿದ್ಯಾಲಯ ಆವರಣದಲ್ಲಿ…