ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಸ್ವರೂಪ: ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಪಂಚಪ್ಪ ಕಲಬುರಗಿ ಆಗ್ರಹ

ಹಿಂಗಾರು ಬೆಳೆಗಳಿಗೆ ನೀರು ನಿರಾಕರಿಸುವ ಐಸಿಸಿ ನಿರ್ಣಯ ಹಿಂಪಡೆಯಲು ಒತ್ತಾಯ ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:ಕಬ್ಬು ಬೆಳೆಗಾರರ ಸಮಸ್ಯೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರೈತರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರು ತಕ್ಷಣ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹಾಗೂ ರೈತ ಮುಖಂಡ ಪಂಚಪ್ಪ ಕಲಬುರಗಿ ಒತ್ತಾಯಿಸಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಒಂಬತ್ತು ವರ್ಷಗಳಿಂದ ಕಬ್ಬಿನ ಕನಿಷ್ಠ ಬೆಂಬಲ ಬೆಲೆ ಪರಿಷ್ಕರಣೆಯಾಗಿಲ್ಲ. ಇದೇ ಅವಧಿಯಲ್ಲಿ ಕೃಷಿ ಕಾರ್ಮಿಕರ…

Read More

ವಿಜಯಪುರದಲ್ಲಿ ಅಸ್ಮಿತಾ ಖೇಲೋ ಇಂಡಿಯಾ ರಾಜ್ಯಮಟ್ಟದ ಸೈಕ್ಲಿಂಗ್ ಟೂರ್ನಿಗೆ ಚಾಲನೆ

ಸೈಕ್ಲಿಂಗ್ ಅಸೋಸಿಯೇಷನ್‌ಗೆ ಎರಡು ಸೈಕಲ್ ಕೊಡಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ಸಪ್ತಸಾಗರ ವಾರ್ತೆ, ವಿಜಯಪುರ, ಅ. 17:ಜಿಲ್ಲೆಯ ಸೈಕ್ಲಿಸ್ಟ್‌ಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಲು ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ ರಾಜ್ಯ ಅಮೆಚೂರ್ ಸೈಕ್ಲಿಂಗ್ ಅಸೋಸಿಯೇಷನ್‌ಗೆ ಎರಡು ಸೈಕಲ್‌ಗಳನ್ನು ಕೊಡಿಸುವುದಾಗಿ ಸಂಸದ ರಮೇಶ ಜಿಗಜಿಣಗಿ ಭರವಸೆ ನೀಡಿದರು.ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆ ಬಳಿಯ ವೆಲೋಡ್ರೋಮ್‌ನಲ್ಲಿ ಶನಿವಾರ ಆರಂಭವಾದ ಅಸ್ಮಿತಾ ಖೇಲೋ ಇಂಡಿಯಾ ರಾಜ್ಯಮಟ್ಟದ ಮಹಿಳಾ ಟ್ರ್ಯಾಕ್ ಸೈಕ್ಲಿಂಗ್ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಸೈಕ್ಲಿಸ್ಟ್‌ಗಳ ಅಭ್ಯಾಸಕ್ಕೆ ಅನುಕೂಲವಾಗುವಂತೆ…

Read More

ಆರ್ಥಿಕ ಸಾಕ್ಷರತೆ ಪ್ರತಿಯೊಬ್ಬರಿಗೂ ಅಗತ್ಯ: ಸರ್ಕಾರಿ ಯೋಜನೆಗಳ ಸದ್ಬಳಕೆಗೆ ಕರೆ

ಸಪ್ತಸಾಗರ ವಾರ್ತೆ,ಕಂಬಾಗಿ, ಅ.17: ಗ್ರಾಮೀಣ ಜನರಲ್ಲಿ ಆರ್ಥಿಕ ಸಾಕ್ಷರತೆ ಹೆಚ್ಚಿಸುವುದು ಹಾಗೂ ಬ್ಯಾಂಕಿಂಗ್, ವಿಮೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಂಬಾಗಿ ಗ್ರಾಮದಲ್ಲಿ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಯಿತು.ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸಿದ್ದಯ್ಯ ಬಿ. ಅವರು ವಿವಿಧ ಬ್ಯಾಂಕಿಂಗ್, ವಿಮಾ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ನೀಡಿ, ಅರ್ಹರು ಸರ್ಕಾರಿ ಯೋಜನೆಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಮುಕುಂದ ಝಳಕಿ ಅವರು ಸ್ವಯಂ…

Read More

ಶಾಸಕರಿಂದ ಜೀವ ಬೆದರಿಕೆ ಆರೋಪ: ಸ್ವಯಂಪ್ರೇರಿತ ದೂರು ದಾಖಲಿಸಿ; ಎಸ್‌ಐಟಿ ತನಿಖೆಗೆ ಪರಶುರಾಮಸಿಂಗ್ ರಜಪೂತ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 15: ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಾರ್ವಜನಿಕವಾಗಿ ತಮ್ಮ ವಿರುದ್ಧ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿರುವ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಹಾಗೂ ನಗರಸಭೆ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ, ಈ ಕುರಿತು ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮನ್ನು ಉದ್ದೇಶಿಸಿ ‘ಮಟಾಶ್ ಮಾಡುವೆ’ ಎಂಬ ರೀತಿಯಲ್ಲಿ ಯತ್ನಾಳರು ಹೇಳಿಕೆ ನೀಡಿದ್ದಾರೆ. ಇದರಿಂದ ಜೀವ ಭೀತಿ ಎದುರಾಗಿದ್ದು, ಪೊಲೀಸ್ ರಕ್ಷಣೆ…

Read More

ವಿಜಯಪುರ ತಹಶೀಲ್ದಾರ ಕಚೇರಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ಸಾರ್ವಜನಿಕ ಸೇವೆ, ಕಡತ ವಿಲೇವಾರಿ, ದಾಖಲೆ ನಿರ್ವಹಣೆ ಪರಿಶೀಲನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 14 : ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ವಿಜಯಪುರ ತಹಶೀಲ್ದಾರ್ ಕಚೇರಿಗೆ ದಿಢೀರ್ ಭೇಟಿ ನೀಡಿ, ಆಡಳಿತಾತ್ಮಕ ಕಾರ್ಯವೈಖರಿ, ಸಾರ್ವಜನಿಕ ಸೇವೆ, ಕಡತಗಳ ವಿಲೇವಾರಿ ಹಾಗೂ ದಾಖಲೆಗಳ ನಿರ್ವಹಣಾ ವ್ಯವಸ್ಥೆಯನ್ನು ಪರಿಶೀಲಿಸಿದರು.ತಹಶೀಲ್ದಾರ್ ಕಚೇರಿಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸಾರ್ವಜನಿಕರಿಂದ ಸ್ವೀಕರಿಸಲಾಗುವ ಅರ್ಜಿಗಳು, ಅವುಗಳ ವಿಲೇವಾರಿ ಪ್ರಕ್ರಿಯೆ ಹಾಗೂ ಬಾಕಿ ಇರುವ ಕಡತಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.ಸರ್ಕಾರಿ…

Read More

ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:ವಿಜಯಪುರ ಜಿಲ್ಲೆಗೆ ಸಂವಿಧಾನದ 371(ಜೆ) ಅಡಿಯಲ್ಲಿ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿ ಜಿಲ್ಲಾ 371(ಜೆ) ಹೋರಾಟ ಸಮಿತಿ ಮುಖಂಡರು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವಸಂತ ಹೊನಮೋಡೆ ಅವರಿಗೆ ಮನವಿ ಸಲ್ಲಿಸಿದರು.371(ಜೆ) ಮೀಸಲಾತಿ ಜಾರಿಗೊಳಿಸುವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದರಿಂದ ಶಿಕ್ಷಣ, ಉದ್ಯೋಗ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ. ಹೀಗಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು, ವಿಜಯಪುರ ಜಿಲ್ಲೆಯನ್ನು 371(ಜೆ) ವ್ಯಾಪ್ತಿಗೆ ಸೇರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಬೇಕು…

Read More

ಜಯಪ್ರಕಾಶ ನಾರಾಯಣರ ಆದರ್ಶಗಳು ಇಂದಿಗೂ ಪ್ರಸ್ತುತ

ಜೆಡಿಎಸ್ ಕಚೇರಿಯಲ್ಲಿ ಲೋಕನಾಯಕನ 124ನೇ ಜಯಂತಿ ಆಚರಣೆ ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:ಅನ್ಯಾಯ, ಭ್ರಷ್ಟಾಚಾರ ಹಾಗೂ ಶೋಷಣೆಯ ವಿರುದ್ಧ ನಿರಂತರ ಹೋರಾಡಿದ ಲೋಕನಾಯಕ ಜಯಪ್ರಕಾಶ ನಾರಾಯಣ ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ರೈತ ನಾಯಕ ಪಂಚಪ್ಪ ಕಲಬುರಗಿ ಹೇಳಿದರು.ನಗರದ ಜನತಾದಳ (ಜಾತ್ಯತೀತ) ಪಕ್ಷದ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಜಯಪ್ರಕಾಶ ನಾರಾಯಣ ಅವರ 124ನೇ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜೆ.ಪಿ. ಅವರು ದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಮಹತ್ವದ ಪಾತ್ರ ವಹಿಸಿದ ಮಹಾನ್ ಜನನಾಯಕ ಹಾಗೂ ದೇಶಪ್ರೇಮಿಯಾಗಿದ್ದರು…

Read More

371(ಜೆ) ವ್ಯಾಪ್ತಿಗೆ ವಿಜಯಪುರ ಸೇರ್ಪಡೆಗೆ ಆಗ್ರಹ

ಲೋಣಿ ಅವರಿಗೆ 371(ಜೆ) ಹೋರಾಟ ಸಮಿತಿಯಿಂದ ಮನವಿ ಸಪ್ತಸಾಗರ ವಾರ್ತೆ,ವಿಜಯಪುರ, ಅ. 10:ಸಂವಿಧಾನದ 371(ಜೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ದೊರೆಯುತ್ತಿರುವ ವಿಶೇಷ ಸೌಲಭ್ಯಗಳಿಂದ ವಿಜಯಪುರ ಜಿಲ್ಲೆಯನ್ನು ಹೊರಗಿಟ್ಟಿರುವುದನ್ನು ಸರಿಪಡಿಸಿ, ಜಿಲ್ಲೆಯನ್ನು 371(ಜೆ) ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಎಂದು ವಿಜಯಪುರ ಜಿಲ್ಲಾ 371(ಜೆ) ಹೋರಾಟ ಸಮಿತಿ ಆಗ್ರಹಿಸಿದೆ.ಈ ಕುರಿತು ಹೋರಾಟ ಸಮಿತಿ ಮುಖಂಡರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.371(ಜೆ) ಮೀಸಲಾತಿ ಜಾರಿಗೊಳಿಸುವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯನ್ನು ಕೈಬಿಟ್ಟಿರುವುದರಿಂದ ಜಿಲ್ಲೆಯ ಜನರಿಗೆ ಅನ್ಯಾಯವಾಗಿದೆ….

Read More

ಸಿಂದಗಿಯಲ್ಲಿ ಧರಣಿ: ವಿಜಯಪುರ ಜಿಲ್ಲೆಗೆ 371(ಜೆ) ಮೀಸಲಾತಿ ಕಲ್ಪಿಸಲು ಧರಣಿ ನಿರತರ ಆಗ್ರಹ

ಸಪ್ತಸಾಗರ ವಾರ್ತೆ,ಸಿಂದಗಿ, ಅ. 10: ವಿಜಯಪುರ ಜಿಲ್ಲೆಯನ್ನು ಸಂವಿಧಾನದ 371(ಜೆ) ಕಲಂ ವ್ಯಾಪ್ತಿಗೆ ಒಳಪಡಿಸಿ, ಜಿಲ್ಲೆಯ ಯುವಜನರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ವಿಶೇಷ ಮೀಸಲಾತಿ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ನಗರದ ಬಸವೇಶ್ವರ ವೃತ್ತದ ಬಳಿ ಕಳೆದ ಎಂಟು ದಿನಗಳಿಂದ ನಡೆಯುತ್ತಿರುವ ಧರಣಿ ಸತ್ಯಾಗ್ರಹಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿದವು.ಗೋಕಾಕ ಚಳವಳಿಯ ರೂವಾರಿ ಶ್ರೀ ರೇ.ಚ. ರೇವಡಿಗಾರ ಪ್ರತಿಷ್ಠಾನ ಹಾಗೂ 371(ಜೆ) ಹೋರಾಟ ಸಮಿತಿ ನೇತೃತ್ವದಲ್ಲಿ ಧರಣಿ ನಡೆಯುತ್ತಿದ್ದು, ಕರ್ನಾಟಕ ಸರ್ಕಾರಿ ಹಾಗೂ ಅರೆ ಸರ್ಕಾರಿ ನಿವೃತ್ತ…

Read More

ಮೋದಿ 25 ವರ್ಷಗಳ ಸಾರ್ವಜನಿಕ ಸೇವೆ: ವಿಜಯಪುರದಲ್ಲಿ ‘ಸೇವಾ ಸಂಕಲ್ಪ’ ಅಭಿಯಾನ

ಸೇವಾ ಜ್ಯೋತಿ ಯಾತ್ರೆಗೆ ಚಾಲನೆ; ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಪ್ತಸಾಗರ ವಾರ್ತೆ,ವಿಜಯಪುರ, ಅ.7: ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಅಭಿನಂದಿಸುವ ಉದ್ದೇಶದಿಂದ ವಿಜಯಪುರದ ನಾಗೂರ ಕಾಲೇಜು ಬಳಿಯ ವೃತ್ತದಲ್ಲಿ ಆಯೋಜಿಸಿದ್ದ ‘ಸೇವಾ ಸಂಕಲ್ಪ ಅಭಿಯಾನ ಹಾಗೂ ವಿಕಸಿತ ಭಾರತ ಸಂಕಲ್ಪ ಸಭೆ’ ಯಶಸ್ವಿಯಾಗಿ ನಡೆಯಿತು.ಇತ್ತೀಚೆಗೆ ನಿಧನರಾದ ಬಿಜೆಪಿ ಕಟ್ಟಾ ಕಾರ್ಯಕರ್ತ ಬಸವರಾಜ ಕುಂಬಾರ ಅವರ ಸ್ಮರಣಾರ್ಥ ಕಾರ್ಯಕ್ರಮದ ವೇದಿಕೆಗೆ ಅವರ ಹೆಸರನ್ನಿಟ್ಟು ಗೌರವ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ…

Read More