ಬಿ ಎಲ್ ಡಿ ಇ ಡೀಮ್ಡ್ ವಿವಿಯಲ್ಲಿ ಶಿಕ್ಷಕ ದಿನಾಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 5: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನ ಆಚರಿಸಲಾಯಿತು.ಶುಕ್ರವಾರ ಡೀಮ್ಡ್ ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿವಿಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಶಿಕ್ಷಕರು ಸಮಾಜದ ನಿಜವಾದ ದಾರಿದೀಪ. ಅವರ ಮಾರ್ಗದರ್ಶನವಿಲ್ಲದೆ ಉತ್ತಮ ವಿದ್ಯಾರ್ಥಿಗಳನ್ನು ತಯಾರಿಸುವುದು ಅಸಾಧ್ಯ. ಶಿಕ್ಷಕರು ಕೇವಲ ಪಾಠ ಕಲಿಸುವವರಲ್ಲ. ಅವರು ಮೌಲ್ಯಗಳನ್ನು ಬೆಳೆಸುತ್ತ ವಿದ್ಯಾರ್ಥಿಗಳ ಜೀವನವನ್ನು ರೂಪಿಸುತ್ತಾರೆ. ಬಿ.ಎಲ್.ಡಿ.ಇ ವಿವಿ ಶ್ರೇಷ್ಠ ಶಿಕ್ಷಣ, ಗುಣಮಟ್ಟದ…


