ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ
ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…


