ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ -ಅಶೋಕ ದಳವಾಯಿ
ಸಪ್ತಸಾಗರ ವಾರ್ತೆ ವಿಜಯಪುರ, ಆ. 25:ಅರಣ್ಯ ರಕ್ಷಣೆ ಮಾಡುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸುವ ಅರಣ್ಯ ಇಲಾಖೆಯ ಅಧಿಕಾರಿ-ಸಿಬ್ಬಂದಿಗಳು ತಮ್ಮ ಕರ್ತವ್ಯದೊಂದಿಗೆ ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಭಾಗವಹಿಸುವುದು ಅಗತ್ಯವಾಗಿದೆ. ಎಲ್ಲರೂ ಆಟೋಟಗಳಲ್ಲಿ ಪಾಲ್ಗೊಳ್ಳುವ ಮೂಲಕ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಂಡು ಕ್ರೀಡಾ ಸ್ಪೂರ್ತಿ ಮೆರೆಯಬೇಕು. ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ನಿವೃತ್ತ ಐಎಎಸ್ ಅಧಿಕಾರಿ ಅಶೋಕ ದಳವಾಯಿ ಅವರು ಹೇಳಿದರು.ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟಕ್ಕೆ ಚಾಲನೆ…


