ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 20:ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಪಂಗಡದ ಸಮುದಾಯದ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆ ಘಟಕ ಯೋಜನೆಯಡಿ1 ಲಕ್ಷ ರೂ. ಸಹಾಯಧನ ಹಾಗೂ 50 ಸಾವಿರ ರೂ. ಬೀಜಧನ (ಶೇ 4 ರಷ್ಟು ಬಡ್ಡಿ ದರ). ಹೈನುಗಾರಿಕೆ ಕೈಗೊಳ್ಳಲು ಎರಡು ಎಮ್ಮೆ-ಹಸುಗಳಿಗೆ ಘಟಕ ವೆಚ್ಚದ ಶೇ. 50 ರಷ್ಟು ಅಥವಾ ಗರಿಷ್ಟ 1.25ಲಕ್ಷ ರೂ.ಗಳ ಸಹಾಯಧನ….

Read More

ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ- ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 20: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿ ಶ್ರಮಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ ಹೇಳಿದರು.ಬುಧವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾದಕ ವ್ಯಸನ ಮುಕ್ತ ಕರ್ನಾಟಕ ಕುರಿತು ಕರಪತ್ರ ಬಿಡುಗಡೆ ಮಾಡಿ ಮಾತನಾಡಿದರು.ದೀನದಯಾಳ್ ಅಂತ್ಯೋದಯ ಯೋಜನೆಯಡಿ ವಿವಿಧ ಸರ್ಕಾರಿ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದಾದ್ಯಂತ ಎರಡು ತಿಂಗಳ ಕಾಲ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನು ಆರಂಭಿಸಲಾಗಿದ್ದು, ಅಭಿಯಾನದ ಭಾಗವಾಗಿ ಮಾದಕ ವಸ್ತುಗಳ ಬಳಕೆಯನ್ನು…

Read More

ಸಾಮಾಜಿಕ ಏಳಿಗೆಗೆ ಡಿ.ದೇವರಾಜ್ ಅರಸುರವರ ಕೊಡುಗೆ ಅಪಾರ: ಬಬಲೇಶ್ವರ

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 20: ಹಿಂದುಳಿದ ವರ್ಗಗಳ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ ಡಿ. ದೇವರಾಜ ಅರಸು ಅವರು ಉಳುವವನೇ ಭೂ ಒಡೆಯ ಎನ್ನುವ ಭೂ ಸುಧಾರಣಾ ಕಾಯಿದೆ ಜಾರಿಗೆ ತರುವ ಮೂಲಕ ಸಾಮಾಜಿಕ ಪರಿವರ್ತನೆ ಹಾಗೂ ಸಾಮಾಜಿಕ ಏಳಿಗೆಗೆ ಶ್ರಮಿಸಿದ್ದಾರೆ ಎಂದು ಧಾರವಾಡ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಬುಧವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ…

Read More

ಒಳ ಮೀಸಲಾತಿ ಕುರಿತು ಸಚಿವ ಸಂಪುಟ ನಿರ್ಧಾರ: ಆಮ್ ಆದ್ಮಿ ಪಾರ್ಟಿ ಸ್ವಾಗತ

ಸಪ್ತಸಾಗರ ವಾರ್ತೆ, ಆ. 20:ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಕೈಗೊಂಡ ನಿರ್ಧಾರವನ್ನು ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಬೋಗೇಶ ಸೋಲಾಪುರ ಸ್ವಾಗತಿಸಿದ್ದಾರೆ.ಈ ನಿರ್ಧಾರವು ಎಡಗೈ-ಬಲಗೈ ಸಮುದಾಯಗಳಿಗೆ ಶೇ. 6 ರಷ್ಟು ಹಾಗೂ ಕೊರಚ, ಕೊರಮ, ಭೋವಿ, ಲಂಬಾಣಿ ಜಾತಿಗಳನ್ನು ಒಳಗೊಂಡ ಸ್ಪ್ರಶ್ಯ ಗುಂಪುಗಳಿಗೆ ಶೇ. 5 ರಷ್ಟು ಮೀಸಲಾತಿಯನ್ನು ಒದಗಿಸುವ ಮೂಲಕ ಸಾಮಾಜಿಕ ನ್ಯಾಯ ಮತ್ತು ಸಮಾನತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಸಚಿವ ಸಂಪುಟದ…

Read More

ಮಳೆ ಸಂತ್ರಸ್ತರಿಗೆ ಸಚಿವ ಎಂ.ಬಿ. ಪಾಟೀಲ್ ವೈಯಕ್ತಿಕ ನೆರವು

ಸಪ್ತಸಾಗರ ವಾರ್ತೆ ವಿಜಯಪುರ, ಆ. 20: ಮಳೆಯಿಂದ ನಷ್ಟ ಅನುಭವಿಸಿದ ನಗರದ ಎರಡು ಕುಟುಂಬಗಳಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ವೈಯಕ್ತಿಕವಾಗಿ ಆರ್ಥಿಕ ನೆರವು ನೀಡಿದ್ಸಾರೆ.ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿಗೀಡಾದ ಸ್ಥಳಗಳಿಗೆ ಸಚಿವರು ಆಗಷ್ಟ 15ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಂದು ರಾಮನಗರ ಬಳಿಯ ನೆಹರು‌ ನಗರ ನಿವಾಸಿ‌ ಅಚ್ಯುತ್ ಆಚಾರ ಪುರೋಹಿತ ಮತ್ತು ರಾಜಾಜಿನಗರದ ನಿವಾಸಿ ಜಾಫರ್ ಅಹ್ಮದ್ ಇನಾಮದಾರ ಅವರ ಕುಟುಂಬಕ್ಕೆ ತಲಾ…

Read More

ಬೆಳೆ ಹಾನಿ ಕುರಿತು ಒಂದು ವಾರದಲ್ಲಿ ರೈತರಿಗೆ ಪರಿಹಾರ ನೀಡದಿದ್ದರೆ ಉಗ್ರ ಹೋರಾಟ: ನಡಹಳ್ಳಿ ಎಚ್ಚರಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 19:ರಾಜ್ಯದಲ್ಲಿ ಭಾರೀ ಮಳೆಯಿಂದ ರೈತರ ಬೆಳೆಗಳು ಹಾಳಾಗಿವೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವರು ಇತ್ತ ಗಮನ ಹರಿಸುತ್ತಿಲ್ಲ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಆರೋಪಿಸಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಸಿಎಂ ಹಾಗೂ ಸಚಿವರ ನಡೆ ಖಂಡನೀಯ. ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.2019 ರಲ್ಲಿ ಯಡಿಯೂರಪ್ಪ ಸಿಎಂ ಆಗಿ ಅಧಿಕಾರ ಸ್ವೀಕಾರ ಮಾಡಿದಾಗ ತುರ್ತಾಗಿ ಪರಿಹಾರ ನೀಡಿದ್ದರು.ಆಗ ಯಡಿಯೂರಪ್ಪ ಒಂಟಿಯಾಗಿ 14 ಜಿಲ್ಲೆಗಳ ಪ್ರವಾಹ…

Read More

ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಪಾಟೀಲ್ ನೇಮಕ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 18:ವಿಜಯಪುರ ಬಿಜೆಪಿ ನಗರ ಮಂಡಲ ಅಧ್ಯಕ್ಷರಾಗಿ ಸಂದೀಪ್ ರಾಮನಗೌಡ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯದ್ಯಕ್ಷರ ಸೂಚನೆ ಮೇರೆಗೆ ಪಕ್ಷದ ಸಂಘಟನೆ ಹಿತ ದೃಷ್ಟಿಯಿಂದ ಪಾಟೀಲ್ ಅವರನ್ನು ನೇಮಕ ಮಾಡಿ ಜಿಲ್ಲಾ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಬಿ ಎಂ ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 17: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ ಶನಿವಾರ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು.ಪ್ರಾಥಮಿಕ ಹಂತದ ಮಕ್ಕಳು ರಾಧಾ ಕೃಷ್ಣನ ವೇಷದಲ್ಲಿ ಬಂದು ನರ್ತಿಸಿದರೆ, ದ್ವಾಪರ ಯುಗವೇ ಧರೆಗಿಳಿದಂತಾಗಿತ್ತು. ನಂತರ ಪ್ರೌಢಶಾಲೆ ವಿಭಾಗದ ನಾಲ್ಕೂ ಸದನಗಳ ವಿದ್ಯಾರ್ಥಿಗಳಿಗೆ ಮೊಸರಿನ ಮೊಡಕೆ ಒಡೆಯುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪಿರಾಮಿಡ್ ಆಕೃತಿಯಲ್ಲಿ ಒಬ್ಬರ ಮೇಲೊಬ್ಬರು ನಿಂತು, ಮೊಸರಿನ ಮೊಡಕೆ ಒಡೆಯುವ ಸನ್ನೀವೇಶವಂತೂ ಮೈನವಿರೇಳುವಂತೆ ಮಾಡಿತು. ಮೊಸರಿನ…

Read More

ಪ್ರತಿ ಗಣೇಶ ಮಹಾಮಂಡಳಿಗೆ ರೂ.5001 ನೆರವು: ಶಾಸಕ ಯತ್ನಾಳ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ನಗರದ ಪ್ರತಿ ಗಣೇಶ ಮಹಾಮಂಡಳಿಗಳಿಗೆ ವೈಯುಕ್ತಿಕವಾಗಿ ರೂ.5001 ನೀಡಲಾಗುವುದು. ತಮ್ಮ ತಮ್ಮ ಮಹಾಮಂಡಳಿಗಳ ವೇದಿಕೆಗೆ ಆಗಮಿಸಿ ಹಣ ನೀಡಲಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಘೋಷಣೆ ಮಾಡಿದರು.ನಗರದ ಸಿದ್ದೇಶ್ವರ ದೇವಸ್ಥಾನ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶ್ರೀ ಶಿವಾನುಭವ ಸಮುದಾಯ ಭವನದಲ್ಲಿ ಶನಿವಾರ ಸಂಜೆ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳ ವತಿಯಿಂದ ಹಮ್ಮಿಕೊಂಡಿದ್ದ ವಿಜಯಪುರ ನಗರದ ಎಲ್ಲ ಗಜಾನನ ಮಹಾಮಂಡಳಿಗಳ ಸಭೆಯಲ್ಲಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ…

Read More

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More