ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…

Read More

ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…

Read More

ಬಿಎಲ್ ಡಿಇ ಆಸ್ಪತ್ರೆಯಲ್ಲಿ ನೇರ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ARK) ಯೋಜನೆ ಅಡಿಯಲ್ಲಿ ರೋಗಿಗಳು (AB-ArK) ಪ್ಯಾಕೇಜ್ ಗಳಲ್ಲಿ 900 (3A) ಕೋಡ್ ಗಳು ಮತ್ತು 254 (2B) ಕೋಡ್ ಗಳಲ್ಲಿ ಬರುವ ಕಾಯಿಲೆಗಳಿಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಂದ ಶಿಫಾರಸು ಇಲ್ಲದೇ ನೇರವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.ಈ ಮುಂಚೆ ಈ ಸ್ಕೀಂ ನಡಿ ನವಜಾತ…

Read More

ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಿಲ್ಲ :ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ‌ ಮರುಸಮೀಕ್ಷೆ ಕುರಿತು ಸೌಹಾರ್ದಯುತ ಚರ್ಚೆ ನಡೆದಿದೆ ಹೊರತು ಯಾವುದೇ ರೀತಿ ಗದ್ದಲ, ಗೊಂದಲ ಉಂಟಾಗಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಮೇಜು ಗುದ್ದಿ ಮಾತನಾಡಿದ್ದೇನೆ. ಪೇಪರ್ ಹರಿದು ಹಾಕಲಾಗಿದೆ. ಸಭೆಯಲ್ಲಿ ಸೌಹಾರ್ದಯುತವಾಗಿ ಚರ್ಚೆ ನಡೆದಿದೆ. ಸಚಿವ…

Read More

ಜಿಲ್ಲೆಯ ಅರಣ್ಯ ಪ್ರದೇಶ ಶೇ.10ರಷ್ಟು ಹೆಚ್ಚಿಸುವ ಗುರಿ -ಸಚಿವ ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ 0.17ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇಕಡಾ 2ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶುಕ್ರವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಕೈಗಾರಿಕೆ ಇಲಾಖೆ…

Read More

ಯತ್ನಾಳರು ಅಂಬೇಡ್ಕರ್ ಅನುಯಾಯಿ: ಅಪಪ್ರಚಾರ ಖಂಡನೀಯ-ಯಾಳವಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಡಾ.ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳದ ಅನೇಕರು ಕೇವಲ ತಮ್ಮ ಸ್ವಾರ್ಥಕ್ಕಾಗಿ ಅಂಬೇಡ್ಕರ್ ಹೆಸರನ್ನು ಬಳಸುತ್ತಿದ್ದಾರೆ. ಆದರೆ, ಯತ್ನಾಳರು ಅಂಬೇಡ್ಕರ್ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ, ಅವರ ಜೀವನ ಚರಿತ್ರೆ, ದೇಶಕ್ಕೆ ನೀಡಿದ ಕೊಡುಗೆ, ಅವರ ಜೀವನದಲ್ಲಾದ ಅನ್ಯಾಯ ಬಗ್ಗೆ ವಿವರಿಸಿದಲ್ಲದೆ, ತಾವು ಅಂಬೇಡ್ಕರ್ ಅವರ ಅನುಯಾಯಿ ಎಂದು ಸದನದಲ್ಲೇ ಘೋಷಿಸಿದ್ದಾರೆ. ಅವರ ಏಳಿಗೆ ಸಹಿಸದೆ ಅಪಪ್ರಚಾರ ಮಾಡುತ್ತಿರುವುದಕ್ಕೆ ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ವಿಡಿಎ ಮಾಜಿ ಸದಸ್ಯ ಮಡಿವಾಳ ಯಾಳವಾರ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಅನುದಾನಕ್ಕೆ ಒಪ್ಪಿಗೆ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 19: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ಸೆ. 26ರಂದು ಬೃಹತ್ ಉದ್ಯೋಗ ಮೇಳ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…

Read More