ಸುಪ್ರೀಂಕೋರ್ಟ್ ತೀರ್ಪಿನಿಂದ ವಿಜಯಪುರ ವಿಮಾನ ನಿಲ್ದಾಣ ಆರಂಭಕ್ಕೆ ಹಸಿರು ನಿಶಾನೆ

ಪರಿಸರ ಅನುಮತಿ ದೊರೆತರೆ ಮೂರು ತಿಂಗಳಲ್ಲಿ ವಿಮಾನ ಹಾರಾಟ ಆರಂಭ: ಎಂ.ಬಿ. ಪಾಟೀಲ ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 29: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣ ಕಾರ್ಯಾರಂಭಕ್ಕೆ ಇದ್ದ ಪ್ರಮುಖ ಕಾನೂನು ತೊಡಕು ನಿವಾರಣೆಯಾಗಿದ್ದು, ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪಿನಿಂದ ಯೋಜನೆಗೆ ಹೊಸ ಚೈತನ್ಯ ಸಿಕ್ಕಿದೆ. ಪರಿಸರ ಸಂಬಂಧಿತ ಅಂತಿಮ ಅನುಮತಿ ನಿರೀಕ್ಷೆಯಂತೆ ದೊರೆತರೆ ಮುಂದಿನ ಮೂರು ತಿಂಗಳೊಳಗೆ ವಿಜಯಪುರ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸುವ ವಿಶ್ವಾಸವಿದೆ ಎಂದು ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…

Read More

ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಸೂಪರ್ ಮಾಮ್’ ಆಡಿಷನ್ ಆಗಸ್ಟ್ 1ರಂದು ವಿಜಯಪುರದಲ್ಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 29:ಜೀ ಕನ್ನಡ ವಾಹಿನಿಯ ಅತ್ಯಂತ ಜನಪ್ರಿಯ ನೃತ್ಯ ರಿಯಾಲಿಟಿ ಶೋ ‘ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್’ ಇದೀಗ ‘ಸೂಪರ್ ಮಾಮ್’ ವಿಶೇಷ ಆವೃತ್ತಿಯೊಂದಿಗೆ ಕನ್ನಡಿಗರ ಮುಂದೆ ಬರಲಿದ್ದು, ಇದರ ಆಡಿಷನ್‌ಗಳು ಆಗಸ್ಟ್ 1ರಂದು ವಿಜಯಪುರದಲ್ಲಿ ನಡೆಯಲಿವೆ.ಮನೆ, ಕುಟುಂಬ, ಉದ್ಯೋಗ ಹಾಗೂ ಮಕ್ಕಳ ಜವಾಬ್ದಾರಿಗಳ ನಡುವೆ ತಮ್ಮ ಪ್ರತಿಭೆಯನ್ನು ಮರೆಮಾಚಿಕೊಂಡಿರುವ ಅಮ್ಮಂದಿರಿಗೆ ವೇದಿಕೆ ಕಲ್ಪಿಸುವ ಉದ್ದೇಶದಿಂದ ಈ ವಿಶೇಷ ಆಡಿಷನ್ ಆಯೋಜಿಸಲಾಗಿದೆ. ನೃತ್ಯದ ಬಗ್ಗೆ ಆಸಕ್ತಿ ಹೊಂದಿರುವ ಹಾಗೂ ಉತ್ತಮವಾಗಿ ಹೆಜ್ಜೆ ಹಾಕಬಲ್ಲ ಅಮ್ಮಂದಿರು ಆಡಿಷನ್‌ನಲ್ಲಿ…

Read More

ವಿಶ್ವವಿಖ್ಯಾತ ವಿಜಯಪುರಕ್ಕೆ ಇನ್ನೂ ಇಲ್ಲ ನಗರ ಬಸ್ ಟರ್ಮಿನಲ್!

80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳು, ಸಾವಿರಾರು ದೇಶ-ವಿದೇಶಿ ಪ್ರವಾಸಿಗರು, 4 ಲಕ್ಷ ಜನಸಂಖ್ಯೆ… ಆದರೂ ರಸ್ತೆಯೇ ನಗರ ಬಸ್ ನಿಲ್ದಾಣ! ಮೂರು ಕೆಎಸ್‌ಆರ್‌ಟಿಸಿ ಡಿಪೋ, 50ಕ್ಕೂ ಹೆಚ್ಚು ನಗರ ಬಸ್‌ಗಳಿದ್ದರೂ ಮೂಲಸೌಕರ್ಯ ಶೂನ್ಯ; ಅಧಿಕಾರಿಗಳ ನಿರ್ಲಕ್ಷ್ಯ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಗೆ ಸಾರ್ವಜನಿಕರ ಆಕ್ರೋಶ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಶ್ವವಿಖ್ಯಾತ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಬಾರಾ ಕಮಾನ್, ಉಪ್ಪಲಿ ಬುರುಜ್, ಮಲಿಕ್-ಎ-ಮೈದಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳ ತವರೂರು ವಿಜಯಪುರ. ದೇಶ-ವಿದೇಶಗಳಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು…

Read More

ಕಾನೂನು ಸುವ್ಯವಸ್ಥೆ ಕುಸಿತ ಆರೋಪ: ವಿಜಯಪುರದಲ್ಲಿ ಬಿಜೆಪಿ ಬೃಹತ್ ರ‍್ಯಾಲಿ

ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿ, ರಾಜ್ಯಪಾಲರು ಮಧ್ಯಪ್ರವೇಶಿಸಿ ರಾಜ್ಯ ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಿಲ್ಲಾ ಘಟಕದ ನೇತೃತ್ವದಲ್ಲಿ ಶುಕ್ರವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಯಿತು. ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪ್ರತಿಭಟನಾ ರ‍್ಯಾಲಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿತು. ಬಳಿಕ…

Read More

ರಾಷ್ಟ್ರಧ್ವಜ ಗೌರವವೇ ರಾಷ್ಟ್ರಗೌರವ: ರಾಷ್ಟ್ರೀಯ ಧ್ವಜ ದಿನ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಶ್ರೀ ಸಿದ್ದೇಶ್ವರ ಸಂಸ್ಥೆಯ ಸಂಗನಬಸವ ಪಿಯು ಕಾಲೇಜು, ಕವಲಗಿಯಲ್ಲಿ ರಾಷ್ಟ್ರೀಯ ಧ್ವಜ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.1947ರ ಜುಲೈ 22ರಂದು ಭಾರತದ ಸಂವಿಧಾನ ಸಭೆಯು ತ್ರಿವರ್ಣ ಧ್ವಜವನ್ನು ರಾಷ್ಟ್ರಧ್ವಜವಾಗಿ ಅಂಗೀಕರಿಸಿದ ಐತಿಹಾಸಿಕ ದಿನವನ್ನು ಸ್ಮರಿಸುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗಳನ್ನು ಹಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಕಾಲೇಜಿನ ಪ್ರಾಚಾರ್ಯರಾದ ಹೇಮಂತ್ ಕೃಷ್ಣ ಮಾತನಾಡಿ, “ರಾಷ್ಟ್ರಧ್ವಜವು ದೇಶದ ಏಕತೆ, ಅಖಂಡತೆ ಹಾಗೂ ಸ್ವಾತಂತ್ರ್ಯದ ಸಂಕೇತವಾಗಿದೆ. ಪ್ರತಿಯೊಬ್ಬ ನಾಗರಿಕರೂ ರಾಷ್ಟ್ರಧ್ವಜಕ್ಕೆ ಗೌರವ…

Read More

ವಿಜಯಪುರದಲ್ಲಿ ಎಐ-ಎಂಎಲ್ ಹಾಗೂ ರೋಬೋಟಿಕ್ಸ್ ಪ್ರಯೋಗಾಲಯ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ನಗರದ ವಿ.ಬಿ. ದರಬಾರ ಶಾಲೆಯಲ್ಲಿ ಸೋಮವಾರ ಅತ್ಯಾಧುನಿಕ ಎಐ (AI), ಮೆಷಿನ್ ಲರ್ನಿಂಗ್ (ML) ಹಾಗೂ ರೋಬೋಟಿಕ್ಸ್ ಪ್ರಯೋಗಾಲಯವನ್ನು ಉದ್ಘಾಟಿಸಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಕೆ.ಜಿ. ದೇಶಪಾಂಡೆ, ಇಂದಿನ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ಮಾನವನ ಸಾಮರ್ಥ್ಯವನ್ನು ವಿಸ್ತರಿಸುವ ಪ್ರಮುಖ ಸಾಧನವಾಗಿದೆ. ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದಲೇ ಎಐ, ಮೆಷಿನ್ ಲರ್ನಿಂಗ್ ಹಾಗೂ ರೋಬೋಟಿಕ್ಸ್‌ನಂತಹ ನವೀನ ತಂತ್ರಜ್ಞಾನಗಳ ಬಗ್ಗೆ ಅರಿವು ಮತ್ತು ಪ್ರಾಯೋಗಿಕ ಅನುಭವ ಹೊಂದಿದರೆ ಭವಿಷ್ಯದ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು…

Read More

ಚನ್ನಮ್ಮ ದೇವೇಗೌಡರಿಗೆ ಜೆಡಿಎಸ್ ಜಿಲ್ಲಾ ಘಟಕದಿಂದ ಭಾವಪೂರ್ಣ ಶ್ರದ್ಧಾಂಜಲಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಚನ್ನಮ್ಮ ದೇವೇಗೌಡ ಅವರಿಗೆ ವಿಜಯಪುರ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಕಾರ್ಯಾಲಯದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಮೌನಾಚರಣೆ ನಡೆಸಿ, ದಿವಂಗತರ ಆತ್ಮಕ್ಕೆ ಶಾಂತಿ ಕೋರಿದರು.ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಹಿರಿಯ ಮುಖಂಡ ಪಂಚಪ್ಪ ಕಲಬುರ್ಗಿ, ಚನ್ನಮ್ಮ ದೇವೇಗೌಡ ಅವರು ಸರಳತೆ, ಸೌಜನ್ಯ ಹಾಗೂ ಕುಟುಂಬ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಸ್ಮರಿಸಿದರು. ದೇವೇಗೌಡರ ರಾಜಕೀಯ…

Read More

ಪತ್ರಿಕಾ ದಿನಾಚರಣೆ: ಪತ್ರಿಕೋದ್ಯಮ ಸತ್ಯ, ನ್ಯಾಯದ ಪರವಾಗಿರಲಿ – ಯತ್ನಾಳ

ಸಂಘಕ್ಕೆ ₹5 ಲಕ್ಷ ದೇಣಿಗೆ ಘೋಷಿಸಿದ ಶಾಸಕ ಕಟಕದೊಂಡ ಸಪ್ತಸಾಗರ ವಾರ್ತೆ,ವಿಜಯಪುರ, ಜು.19:ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕಾನಿಪ) ವಿಜಯಪುರ ಜಿಲ್ಲಾ ಘಟಕದ ವತಿಯಿಂದ ಭಾನುವಾರ ನಗರದ ಕಂದಗಲ್ಲ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಪತ್ರಿಕಾ ದಿನಾಚರಣೆ-2026 ಅಂಗವಾಗಿ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ, ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ಅಭಿನಂದನಾ ಸಮಾರಂಭ ವಿಜೃಂಭಣೆಯಿಂದ ನಡೆಯಿತು.ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಪತ್ರಿಕೋದ್ಯಮವು ಸಮಾಜದ ಸತ್ಯವನ್ನು ಅನಾವರಣಗೊಳಿಸುವ ಶಕ್ತಿಯಾಗಿದ್ದು, ಪತ್ರಕರ್ತರು ಸದಾ ಸತ್ಯ,…

Read More

ದಾಂಡೇಲಿ ಜಿಪ್‌ಲೈನ್ ದುರಂತ: 30–40 ಅಡಿ ಎತ್ತರದಿಂದ ಬಿದ್ದು ವಿಜಯಪುರದ ಯುವಕ ಗಂಭೀರ ಗಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಜು.18:ಪ್ರವಾಸದ ಸಂಭ್ರಮಕ್ಕಾಗಿ ದಾಂಡೇಲಿಯ ಸ್ಟರ್ಲಿಂಗ್ ರಿವರ್ ರೆಸಾರ್ಟ್‌ಗೆ ತೆರಳಿದ್ದ ವಿಜಯಪುರ ನಗರದ ಯುವಕ ಕುಬೇರ ಸುರಪುರ ಜಿಪ್‌ಲೈನ್ ಚಟುವಟಿಕೆ ವೇಳೆ ಸಂಭವಿಸಿದ ಭೀಕರ ಅವಘಡದಲ್ಲಿ ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ. ಜಿಪ್‌ಲೈನ್‌ನ ಲಾಕ್ ಕಟ್ ಆಗಿದ್ದರಿಂದ ಸುಮಾರು 30 ರಿಂದ 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಪರಿಣಾಮ ಅವರ ಎರಡೂ ಕೈ ಹಾಗೂ ಎರಡೂ ಕಾಲುಗಳ ಎಲುಬುಗಳು ಮುರಿದು, ನರಗಳಿಗೂ ಗಂಭೀರ ಹಾನಿಯಾಗಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.ಕಳೆದ ಜುಲೈ 3ರಂದು ಕುಬೇರ ಸುರಪುರ ಅವರು ತಮ್ಮ…

Read More

ವಿಜಯಪುರದಲ್ಲಿ ಜು.18-19ರಂದು ಶ್ರೀ ಅಂಬಾ ಭವಾನಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಜು.16:ವಿಜಯಪುರ ನಗರದ ಪ್ರಸಿದ್ಧ ಶ್ರೀ ಅಂಬಾ ಭವಾನಿ ವಾರ್ಷಿಕ ಜಾತ್ರಾ ಮಹೋತ್ಸವ ಜುಲೈ 18 ಹಾಗೂ 19ರಂದು ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ನಡೆಯಲಿದ್ದು, ಜಾತ್ರೆಗೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ ಎಂದು ರಾಷ್ಟ್ರೀಯ ಬಂಜಾರ ಪರಿಷದ ಅಧ್ಯಕ್ಷ ಪ್ರಕಾಶ ಬಾಳು ಚವ್ಹಾಣ ತಿಳಿಸಿದ್ದಾರೆ.ನಗರದಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜುಲೈ 18ರಂದು ಬೆಳಿಗ್ಗೆ 9 ಗಂಟೆಗೆ ಸೋಲಾಪುರ ರಸ್ತೆಯಲ್ಲಿರುವ ಮರಗಟ್ಟೆ ಓಣಿಯಿಂದ ಶ್ರೀ ಅಂಬಾ ಭವಾನಿ ದೇವಿಯ ಮೂರ್ತಿಯ ಭವ್ಯ ಮೆರವಣಿಗೆ…

Read More