ಗಜಾನನ ಮಹಾಮಂಡಳಿಗಳ ಸಭೆ ಇಂದು

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 16:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟಪದಲ್ಲಿ ಅ.16 ರಂದು ಸಂಜೆ 5 ಗಂಟೆಗೆ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಶ್ರೀ ಗಜಾನನ ಮಹಾಮಂಡಳಿಗಳ ಸಭೆ ಹಮ್ಮಿಕೊಳ್ಳಲಾಗಿದೆ.ಕಾರಣ ಎಲ್ಲಾ ಗಜಾನನ ಮಹಾಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಗಣ್ಯರು,…

Read More

ಶೀಘ್ರವೇ ವಿಜಯಪುರದಲ್ಲಿ ಉಕ್ಕಿನಹಕ್ಕಿ ಹಾರಾಟ ಆರಂಭ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15:ನಮಗೆ ಸಿಕ್ಕಿರುವ ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು ಮತ್ತು ಈ ಸಂದೇಶವನ್ನು ನಮ್ಮ ಕಿರಿಯ ತಲೆಮಾರಿಗೂ ಮುಟ್ಟಿಸಬೇಕು. ಇದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದರು.ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ…

Read More

ಮೂರು ದಿನಗಳ ಆಶಾಗಳ ಹೋರಾಟ ಅಂತ್ಯ

ಸಪ್ತಸಾಗರ ವಾರ್ತೆ, ವಿಜಯಪುರ,ಆ.14:ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಕಳೆದ ಮೂರು ದಿನಗಳಿಂದ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೈಗೊಂಡಿದ್ದ ಅಹೋರಾತ್ರಿ ಧರಣಿ ಸತ್ಯಾಗ್ರಹ ಗುರುವಾರ ಮುಕ್ತಾಯಗೊಂಡಿತು.ವಿದ್ಯಾರ್ಥಿ,ಯುವಜನ, ದಲಿತ ಸಂಘಟನೆ, ಸರ್ಕಾರಿ ನಿವೃತ್ತಿ ಅಧಿಕಾರಿಗಳ ಸಂಘಟನೆ, ಕರ್ನಾಟಕ ರಾಜ್ಯ ಸಂಯುಕ್ತ ಅಂಗನವಾಡಿ ಕಾರ್ಯಕರ್ತೆಯರ ಸಂಘಟನೆ, ಸಿಐಟಿಯು ಕಾರ್ಮಿಕ ಸಂಘಟನೆ ಹಾಗೂ ಜಿಲ್ಲೆಯ ಹಿರಿಯ ಸಾಹಿತಿಗಳಿಂದ ಹೋರಾಟಕ್ಕೆ ಬೆಂಬಲ ವ್ಯಕ್ತವಾಯಿತು.ಈ ಸಂದರ್ಭದಲ್ಲಿ ಸರ್ಕಾರಿ ನೌಕರರ ಸಂಘದ ನಿವೃತ್ತ ಅಧಿಕಾರಿ ಸುರೇಶ ಜೆ.ಬಿ ಮಾತನಾಡಿ, ಕನಿಷ್ಠ ಜೀವನ ನಡೆಸಲು ೧೫೦೦೦ ಸಂಬಳ…

Read More

ವಿಜಯಪುರದಲ್ಲಿ 300 ಮೀಟರ್ ಉದ್ದದ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 14: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಗರದಲ್ಲಿ 79 ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ 300 ಮೀ ಉದ್ದದ ಬೃಹತ್ ತಿರಂಗಾ ಯಾತ್ರೆಯನ್ನು ಗುರುವಾರ ಏರ್ಪಡಿಸಿತ್ತು.ಯಾತ್ರೆಯಲ್ಲಿ ನೂರಾರು ವಿದ್ಯಾರ್ಥಿಗಳು “ಭಾರತ್ ಮಾತಾ ಕೀ ಜೈ” “ವಂದೇ ಮಾತರಂ” ದೇಶ ಮೊದಲು ಎನ್ನುವ ಘೋಷಣೆಗಳನ್ನು ಕೂಗುತ್ತಾ ತಿರಂಗವನ್ನು ಹಿಡಿದು ನಗರದ ಶಿವಾಜಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ಸಿದ್ದೇಶ್ವರ ದೇವಸ್ಥಾನದವರೆಗೆ ತಿರಂಗಾ ಯಾತ್ರೆಯಲ್ಲಿ ಭಾಗವಹಿಸಿದ್ದರು.ಈ ಸಂದರ್ಭದಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ…

Read More

ಶಾಸಕ ಯತ್ನಾಳ್ ವಿರುದ್ಧ ದೂರು ದಾಖಲು

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಬುಧವಾರ ದೂರು ದಾಖಲಾಗಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ನಡೆದ ಗವಿಸಿದ್ದಪ್ಪ ನಾಯಕ್ ಎಂಬ ಯುವಕನ ಕೊಲೆ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಸಾಂತ್ವನ ಹೇಳಲು ಹೋದ ಸಂದರ್ಭದಲ್ಲಿ ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಶಾಸಕ ಯತ್ನಾಳ್ ಹೇಳಿಕೆ ನೀಡಿದ್ದರು. ಈ ಹೇಳಿಕೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ಕದಡುವಂತಿದೆ. ಹಾಗಾಗಿ ಶಾಸಕರ ವಿರುದ್ಧ ಕಾನೂನು…

Read More

ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯಕ್ಕೆ ಎಬಿವಿಪಿ ನಿಯೋಗ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 13:ಇಲ್ಲಿನ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ,ಎಬಿವಿಪಿ ನಿಯೋಗವು ಭೇಟಿ ನೀಡಿತು.ವಿಶ್ವವಿದ್ಯಾಲಯಕ್ಕೆ ಬೇರೆ ಬೇರೆ ಜಿಲ್ಲೆಗಳಿಂದ ಬರುವ ವಿದ್ಯಾರ್ಥಿನಿಯರಿಗೆ ಅವರ ಅಂಕ ಪಟ್ಟಿ ಹಾಗೂ ಅವರ ಶೈಕ್ಷಣಿಕ ಸಮಸ್ಯೆಗಳು ಒಂದೇ ದಿನದಲ್ಲಿ ಪರಿಹರಿಸಿ ಕೊಡಲು ವಿದ್ಯಾರ್ಥಿ ಪರಿಷತ್ ಆಗ್ರಹಿಸಿತು.ವಿಶ್ವ ವಿದ್ಯಾಲಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಎಬಿವಿಪಿ ರಾಜ್ಯ ವಿಶ್ವವಿದ್ಯಾಲಯಗಳ ಸಂಚಾಲಕ ವಿದ್ಯಾನಂದ ಸ್ಥಾವರಮಠ ಹಾಗೂ ಎಬಿವಿಪಿ ರಾಜ್ಯ ಕಾರ್ಯಕಾರಿಣಿ…

Read More

ಸಂಭ್ರಮದಿಂದ ನಡೆದ ರಾಯರ ಉತ್ತಾರಾರಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 12 : ಗುರು ಸಾರ್ವಭೌಮರ 354 ನೇ ಆರಾಧನಾ ಮಹೋತ್ಸವದ ಅಂಗವಾಗಿ ಇಲ್ಲಿನ ದಿವಟಗೇರಿ ಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ವೃಂದಾವನ ಸನ್ನಿಧಾನದಲ್ಲಿ ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ಗುರು ರಾಯರ ಆರಾಧನಾ ಮಹೋತ್ಸವವು ಮಂಗಳವಾರ ಉತ್ತಾರಾರಾಧನೆ ಮೂಲಕ ಸಂಪನ್ನಗೊಂಡಿತು.ಬೆಳಗ್ಗೆ ಸುಪ್ರಭಾತ, ವಿವಿಧ ಅರ್ಚಕರ ನೇತೃತ್ವದಲ್ಲಿ ರಥಾಂಗ ಹವನ, ಶ್ರೀಹರಿ-ವಾಯುಸ್ತುತಿ ಪುನಶ್ಚರಣ, ಶ್ರೀಗುರುಸ್ತೋತ್ರ ಅಷ್ಟೋತ್ತರ ಶತಃಪಠಣಪೂರ್ವಕ ಶ್ರೀಗುರುಸಾರ್ವಭೌಮರಿಗೆ 108 ಕಲಶದಿಂದ ವಿವಿಧ ಹಣ್ಣು ಹಂಪಲಗಳ ಕ್ಷೀರಾಭಿಷೇಕ ಹಾಗೂ ಮಹಾಪಂಚಾಮೃತಾಭಿಷೇಕ ನೆರವೇರಿಸಲಾಯಿತು.ನಂತರ ಶ್ರೀಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ…

Read More

ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಗೌರವಧನ ಹೆಚ್ಚಳ ಕುರಿತು ಚರ್ಚೆಗೆ ಒಪ್ಪಿಗೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 12:ನಗರ ಸ್ಥಳೀಯ ಸಂಸ್ಥೆಗಳ ಮೇಯರ್, ಉಪಮೇಯರ್, ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರ ಗೌರವಧನ ಹೆಚ್ಚಿಸುವ ಕುರಿತು ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಅವರ ಮನವಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಅಧಿವೇಶನದಲ್ಲಿ ಇಂದು ಮಂಗಳವಾರ ನಡೆದ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಸುನೀಲಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂ ಖಾನ್…

Read More

ಇಬ್ರಾಹಿಂಪುರ ಸುಸಜ್ಜಿತ ರೈಲು ನಿಲ್ದಾಣ ಕಟ್ಟಡಕ್ಕೆ 1.50 ಕೋಟಿ ಮಂಜೂರು

ಸಪ್ತಸಾಗರ ವಾರ್ತೆ,ವಿಜಯಪುರ,ಆ. 11 : ನಗರದಲ್ಲಿರುವ ಇಬ್ರಾಹಿಂಪೂರ ರೈಲ್ವೆ ನಿಲ್ದಾಣದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಅಂದಾಜು 1.50 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲಿಯೇ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಮಾಹಿತಿ ನೀಡಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರ ನಗರದ ಇಬ್ರಾಹಿಂಪೂರ ಭಾಗದ ಜನತೆಯ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣ ಇರಬೇಕು ಎನ್ನುವ ಕಾರಣಕ್ಕೆ ಆಗ ನಿಲ್ದಾಣ ಆರಂಭಿಸಲು ವಿಶೇಷ ಪ್ರಯತ್ನ ವಹಿಸಿ ಯಶಸ್ವಿಯಾಗಿದ್ದೆನು. ಈ ಇಬ್ರಾಹಿಂಪೂರ ರೈಲ್ವೆ ನಿಲ್ದಾಣ…

Read More

ಪಾಲಿಕೆ ನೂತನ ಮೇಯರ್ ಉಪಮೇಯರ್ ಬಿಜೆಪಿ ಕಚೇರಿ ಭೇಟಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 11: ಮಹಾನಗರ. ಪಾಲಿಕೆಯಲ್ಲಿ ಕಮಲ‌ ಅರಳಿದ್ದು, ನೂತನ ಮೇಯರ್ ಆಗಿ ಆಯ್ಕೆಯಾದ ಎಂ.ಎಸ್. ಕರಡಿ ಹಾಗೂ ಉಪಮೇಯರ್ ಆಗಿ ಆಯ್ಕೆಯಾದ ಸುಮಿತ್ರಾ ಜಾಧವ ಅವರು ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದರು.ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾಂಜಲಿ ಸಲ್ಲಿಸಿದರು. ಈ ವೇಳೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಪಾಲಿಕೆಯ ಬಿಜೆಪಿ ಸದಸ್ಯರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.ಸನ್ಮಾನ ಸ್ವೀಕರಿಸಿದ ನೂತನ ಮೇಯರ್ ಎಂ.ಎಸ್. ಕರಡಿ ಮಾತನಾಡಿ, ಬಿಜೆಪಿ ದೇಶಾಭಿಮಾನ ಉಸಿರಾಗಿಸಿಕೊಂಡ ಪಕ್ಷ, ಈ ಪಕ್ಷದ ಸದಸ್ಯನಾಗಿರುವುದೇ…

Read More