ಸಾರವಾಡಕ್ಕೆ ಎಲ್ಲ ಬಸ್‌ಗಳ ನಿಲುಗಡೆಗೆ ಕ್ರಮ: ಗ್ರಾಮಸ್ಥರಿಂದ ಹರ್ಷ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 25 : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ, ವಾಯವ್ಯ ಕರ್ನಾಟಕ ಸಾರಿಗೆ ಬಸ್‌ಗಳ ನಿಲುಗಡೆಗೆ ಆಗ್ರಹಿಸಿ ಸಾರ್ವಜನಿಕರಿಗೆ, ಶಾಲಾ ಮಕ್ಕಳಿಗೆ ಅನುಕೂಲ ಕಲ್ಪಿಸಲು ಕಳೆದ ಆಗಸ್ಟ್ 14 ರಂದು ಗ್ರಾಮಸ್ಥರು ಮೂರು ಗಂಟೆಗಳ ಕಾಲ ಸಾರವಾಡ ಗ್ರಾಮದಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಬಸ್ ನಿಲುಗಡೆಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಲಿಖಿತ ಭರವಸೆ ನೀಡಿದ್ದರು. ಭರವಸೆ ಈಡೇರಿಸಲು ವಿಫಲವಾದ ಹಿನ್ನೆಲೆಯಲ್ಲಿ ಆಗಷ್ಟೇ 26…


