ಸಿಎಂ ಸಿದ್ದರಾಮಯ್ಯ ರಾಜ್ಯವನ್ನು ಸಾಲದ ಸುಳಿಗೆ ನೂಕಿದ್ದಾರೆ- ಯತ್ನಾಳ್ ಕಿಡಿ
ಸಪ್ತಸಾಗರ ವಾರ್ತೆ,ವಿಜಯಪುರ, ಜು. 16: ಸಾರಿಗೆ ಸಂಸ್ಥೆಗಳನ್ನು ಆರ್ಥಿಕವಾಗಿ ಸದೃಢಗೊಳಿಸಬೇಕಾಗಿದ್ದ ಸರ್ಕಾರವು ತನ್ನ ವೋಟ್ ಬ್ಯಾಂಕ್ ರಾಜಕಾರಣಕ್ಕೆ ನಷ್ಟಕ್ಕೆ ನೂಕಿದೆ. ಭವಿಷ್ಯ ನಿಧಿ (ಪಿ.ಎಫ್) ಪಾವತಿ ಮಾಡುವುದಕ್ಕೂ ಹಣವಿಲ್ಲದೆ ಈಗ ಅದಕ್ಕೂ ಸಾಲ ಮಾಡಲು ನಿರ್ಧರಿಸಿದೆ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕಿಡಿಕಾರಿದ್ದಾರೆ.ಎರಡು ದಿನಗಳ ಹಿಂದೆಯಷ್ಟೇ ‘ಶಕ್ತಿ’ ಯೋಜನೆಯ ಬಗ್ಗೆ ಸರ್ಕಾರ ಎಲ್ಲಾ ಪತ್ರಿಕೆಗಳಲ್ಲಿ, ಜಾಲತಾಣಗಳಲ್ಲಿ ಯೋಜನೆಯ ಯಶಸ್ಸಿನ ಬಗ್ಗೆ ಜಾಹೀರಾತು ನೀಡಿತ್ತು. ಸಾರಿಗೆ ನೌಕರರಿಗೆ 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳ…


