ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ
ಸಪ್ತಸಾಗರ ವಾರ್ತೆ,ವಿಜಯಪುರ: ನಗರದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಇರಿದು ದುಷ್ಕರ್ಮಿಗಳು ಕೊಲೆ ಮಾಡಿದ ಘಟನೆ ನಗರದ ಗ್ಯಾಂಗ್ ಬಾವಡಿ ಬಡಾವಣೆಯಲ್ಲಿ ಬುಧವಾರ ಸಂಜೆ ನಡೆದಿದೆ.ಫೈಸಲ್ ಇನಾಂದಾರ್ (24) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.ಅಪರಿಚಿತ ದುಷ್ಕರ್ಮಿಗಳಿಂದ ಈ ಕೃತ್ಯ ನಡೆದಿದ್ದು, ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಘಟನಾ ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ, ಎಎಸ್ಪಿ ಶಂಕರ ಮಾರಿಹಾಳ ಮತ್ತಿತರ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಯುವಕನ ಹತ್ಯೆಗೆ ಕಾರಣರಾದ ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಶ್ವಾನದಳ, ಬೆರಳಚ್ಚು ತಂಡದಿಂದ ಪರೀಕ್ಷೆ…


