ವಿಜಯಪುರ ಜಿಲ್ಲಾದ್ಯಂತ ರೌಡಿಶೀಟರ್‌ಗಳ ಮನೆಗಳ ಮೇಲೆ ಪೊಲೀಸರ ವಿಶೇಷ ತಪಾಸಣೆ

482 ರೌಡಿಶೀಟರ್‌ಗಳ ಮನೆಗಳ ಪರಿಶೀಲನೆ; ದಾಖಲೆ ಇಲ್ಲದ ವಾಹನ, ಆಸ್ತಿ ದಾಖಲೆ ಪತ್ತೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.30:ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಮಾಜದಲ್ಲಿ ಶಾಂತಿಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪೊಲೀಸರು ರೌಡಿ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ.ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಪೊಲೀಸ್ ಠಾಣೆ ಹಾಗೂ ವೃತ್ತ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ (Anti Rowdy Squad) ರಚಿಸಲಾಗಿದ್ದು, ರೌಡಿಶೀಟರ್‌ಗಳ ಚಟುವಟಿಕೆಗಳ ಮೇಲೆ ನಿಗಾ ಇರಿಸಲಾಗಿದೆ.ಇದರ ಭಾಗವಾಗಿ ಆ.30ರಂದು…

Read More

ಸಪ್ತಸಾಗರ ವರದಿಗೆ ಫಲಶ್ರುತಿ: ಭವ್ಯ ರೂಪ ಪಡೆಯಲಿದೆ ವಿಜಯಪುರದ ಗಾಂಧಿ ವೃತ್ತ!

ಸಪ್ತಸಾಗರ ವಾರ್ತೆ,ವಿಜಯಪುರ, ಆ. 30:ನಗರದ ಹೃದಯ ಭಾಗದಲ್ಲಿರುವ ಗಾಂಧಿ ಚೌಕ್‌ ನಲ್ಲಿ ಮಹಾತ್ಮ ಗಾಂಧೀಜಿ ಅವರ ಮೂರ್ತಿ ಚಿಕ್ಕದಾಗಿದ್ದು, ಸಂಚಾರದ ಒತ್ತಡದ ನಡುವೆ ಸಮರ್ಪಕವಾಗಿ ಅಭಿವೃದ್ಧಿಪಡಿಸಿ, ಐತಿಹಾಸಿಕ ವಿಜಯಪುರದ ಘನತೆಗೆ ತಕ್ಕಂತೆ ಸುಂದರ ಹಾಗೂ ಭವ್ಯ ಗಾಂಧಿ ವೃತ್ತ ಹಾಗೂ ಪುತ್ಥಳಿ ನಿರ್ಮಿಸಬೇಕೆಂಬ ಕುರಿತು ಸಪ್ತಸಾಗರ ಕನ್ನಡ ದಿನಪತ್ರಿಕೆ ವರದಿ ಪ್ರಕಟಿಸಿತ್ತು.ಈ ವರದಿಗೆ ಇದೀಗ ಫಲಶ್ರುತಿ ದೊರೆತಿದ್ದು, ಗಾಂಧಿ ವೃತ್ತದ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. ಅಕ್ಟೋಬರ್ 2ರಂದು ಜಿಲ್ಲಾ ಉಸ್ತುವಾರಿ ಸಚಿವರು ನೂತನ ಗಾಂಧಿ ವೃತ್ತದ ನಿರ್ಮಾಣಕ್ಕೆ…

Read More

ದಲಿತರು, ಶೋಷಿತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಅಪ್ಪುರಾಜ್ ನಿಮಾದಾರ ಎಚ್ಚರಿಕೆ

ಸರಣಿ ದೌರ್ಜನ್ಯ ಖಂಡಿಸಿ ರಾಜ್ಯಮಟ್ಟದ ಹೋರಾಟ, ಹೆದ್ದಾರಿ ತಡೆಗೆ ಸಿದ್ಧತೆ ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ರಾಜ್ಯದಲ್ಲಿ ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರ ಸೇರಿದಂತೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಖಂಡನೀಯ ಎಂದು ಭೀಮರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯ ಉಗಲವಾಟದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದು,…

Read More

ಸರಣಿ ದೌರ್ಜನ್ಯ ಖಂಡಿಸಿ ಬೃಹತ್ ಹೋರಾಟದ ಎಚ್ಚರಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ.23:ರಾಜ್ಯಾದ್ಯಂತ ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ ಹಾಗೂ ಸಾಮಾಜಿಕ ಬಹಿಷ್ಕಾರದಂತಹ ಘಟನೆಗಳು ಸರಣಿಯಾಗಿ ನಡೆಯುತ್ತಿದ್ದರೂ ಸರ್ಕಾರ ಮೌನ ವಹಿಸಿರುವುದು ಖಂಡನೀಯ ಎಂದು ಮುಖಂಡ ಗೌಡಪ್ಪ ಬಡಿಗೇರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯ ಉಗಲವಾಟದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ, ಕೊಪ್ಪಳ ಹಾಗೂ ಚಿಕ್ಕಬಳ್ಳಾಪುರದಲ್ಲಿ ಕಳವು ಶಂಕೆಯಿಂದ ಬಾಲಕನನ್ನು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆಗಳು ನಡೆದಿವೆ. ರಾಯಚೂರಿನಲ್ಲಿ ಬಿಎಸ್‌ಪಿ ಮುಖಂಡ ಭೂಮಾನಂದ ಅವರ ಹತ್ಯೆ ಹಾಗೂ…

Read More

ಈದ್ ಮಿಲಾದ್ ಮೆರವಣಿಗೆ: ಭಾವೈಕ್ಯತೆಯ ಸಂದೇಶ ಸಾರಲು ಸಜ್ಜಾಗಿರುವ ವಿಜಯಪುರ

ಸರ್ವಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮುಖಂಡರ ಕರೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.21:ಐತಿಹಾಸಿಕ ವಿಜಯಪುರದ ಸೌಹಾರ್ದತೆ, ಸಹಬಾಳ್ವೆ ಹಾಗೂ ಸರ್ವಧರ್ಮೀಯ ಭಾವೈಕ್ಯತೆಯ ಪ್ರತೀಕವಾಗಿ ಆ.25ರಂದು ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಗೆ ಸರ್ವಧರ್ಮೀಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಧಾರ್ಮಿಕ ಹಾಗೂ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.ಈದ್ ಮಿಲಾದ್ ಮೆರವಣಿಗೆ ಕೇವಲ ಧಾರ್ಮಿಕ ಆಚರಣೆಗೆ ಸೀಮಿತವಲ್ಲ. ಶತಮಾನಗಳಿಂದ ವಿಜಯಪುರದಲ್ಲಿ ಬೆಳೆದು ಬಂದಿರುವ ಪ್ರೀತಿ, ಸಹೋದರತ್ವ, ಮಾನವೀಯತೆ ಮತ್ತು ಸೌಹಾರ್ದ ಪರಂಪರೆಯನ್ನು ಸಾರುವ ಮಹತ್ವದ ಸಂದರ್ಭವಾಗಿದೆ ಎಂದು ಹಾಶಿಂಪೀರ ದರ್ಗಾದ ಜೈನುಲ್…

Read More

2027ರ ಜನವರಿ ಅಂತ್ಯದೊಳಗೆ ವಿಜಯಪುರದಿಂದ ವಿಮಾನ ಹಾರಾಟ

ಅಂತಿಮ ಹಂತ ತಲುಪಿದ ವಿಮಾನ ನಿಲ್ದಾಣ ಕಾಮಗಾರಿ ಸಪ್ತಸಾಗರ ವಾರ್ತೆ,ವಿಜಯಪುರ, ಆ.21: ಬಹುನಿರೀಕ್ಷಿತ ವಿಜಯಪುರ ವಿಮಾನ ನಿಲ್ದಾಣದಿಂದ 2027ರ ಜನವರಿ ಅಂತ್ಯದೊಳಗೆ ವಿಮಾನ ಹಾರಾಟ ಆರಂಭಿಸುವ ಪ್ರಯತ್ನ ನಡೆಯುತ್ತಿದೆ ಎಂದು ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ (ಕೆಎಸ್‌ಐಐಡಿಸಿ) ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಹೇಳಿದರು.ಶುಕ್ರವಾರ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದ ಬಳಿಕ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.ಪರಿಸರ ಇಲಾಖೆಯ ಅನುಮತಿ ವಿಳಂಬ ಹಾಗೂ ಸುಪ್ರೀಂ ಕೋರ್ಟ್‌ನ ತಡೆಯಾಜ್ಞೆಯಿಂದ…

Read More

ಆ. 23ರಂದು ವಿಜಯಪುರದಲ್ಲಿ ಸಂಗೊಳ್ಳಿ ರಾಯಣ್ಣನ ಬೃಹತ್‌ ಜಾತ್ರೆ

ವಿಜಯಪುರದಲ್ಲಿ ಮೊದಲ ಬಾರಿಗೆ ಆಯೋಜನೆ; 12 ಅಡಿ ಎತ್ತರದ ರಾಯಣ್ಣನ ಮೂರ್ತಿಯ ಭವ್ಯ ಮೆರವಣಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಆ. 20:ನಗರದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವ ಸಮಿತಿ ವತಿಯಿಂದ ಇದೇ ಮೊದಲ ಬಾರಿಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಬೃಹತ್‌ ಜಾತ್ರಾ ಮಹೋತ್ಸವವನ್ನು ಆ. 23ರಂದು ನಗರದ ದರಬಾರ ಪ್ರೌಢಶಾಲೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಹುಲಿಜಂತಿ ಪಟ್ಟದ ಶ್ರೀ ಮಹಾಳಿಂಗರಾಯ ಮಹಾರಾಜರು ತಿಳಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುವಕರಲ್ಲಿ ದೇಶಭಕ್ತಿ, ಶೌರ್ಯ, ಪರಾಕ್ರಮ, ಧೈರ್ಯ ಹಾಗೂ ಸ್ಥೈರ್ಯ ಬೆಳೆಸುವ…

Read More

ಸಂಗೊಳ್ಳಿ ರಾಯಣ್ಣನವರ ಧೈರ್ಯ, ಸ್ಥೈರ್ಯ ಜೀವನದಲ್ಲಿ ಅಳವಡಿಸಿಕೊಳ್ಳಿ : ಜಿಲ್ಲಾಧಿಕಾರಿ ಡಾ. ಆನಂದ ಕೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.15 :ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಧೈರ್ಯ, ದೇಶಪ್ರೇಮ, ಸ್ವಾಭಿಮಾನ ಹಾಗೂ ಹೋರಾಟದ ಮನೋಭಾವವನ್ನು ಇಂದಿನ ಯುವಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ ನೀಡಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ರಾಯಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.ಸ್ವಾತಂತ್ರ್ಯ ಹೋರಾಟದಲ್ಲಿ ಸಂಗೊಳ್ಳಿ ರಾಯಣ್ಣ ಅವರು ಅಪ್ರತಿಮ ಸಾಹಸ,…

Read More

ವಿಜಯಪುರ ಜಿಲ್ಲೆಗೆ 371 ಜೆ ಮೀಸಲಾತಿ ತಕ್ಷಣ ಒದಗಿಸಲು ಆಗ್ರಹ

ಸಪ್ತಸಾಗರ ವಾರ್ತೆ,ಮುದ್ದೇಬಿಹಾಳ, ಆ. 14:371 ಜೆ ಮೀಸಲಾತಿ ವ್ಯಾಪ್ತಿಯಿಂದ ಹೊರಗುಳಿದಿರುವ ವಿಜಯಪುರ ಜಿಲ್ಲೆಯನ್ನು ಕಲ್ಯಾಣ ಕರ್ನಾಟಕ ಮೀಸಲಾತಿ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ವಿಕಲಚೇತನರ ವಿವಿಧೋದ್ದೇಶ, ಗ್ರಾಮೀಣ ಪುನರ್ವಸತಿ, ನಗರ ಪುನರ್ವಸತಿ ರಾಜ್ಯ ಒಕ್ಕೂಟ ಹಾಗೂ ತಾಲೂಕು ವಿಕಲಚೇತನರ ಸಂಘ-ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು. ಬಳಿಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ವಿಶೇಷ ಚೇತನರ ವಿವಿಧೋದ್ದೇಶಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎಸ್.ಕೆ. ಘಾಟಿ…

Read More

ವಿಜಯಪುರದಲ್ಲಿ ಮೊಳಗಿದ ದೇಶಭಕ್ತಿಯ ಘೋಷಣೆ: 300 ಮೀಟರ್ ತಿರಂಗಾ ಯಾತ್ರೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 13:‘ಹರ್ ಘರ್ ತಿರಂಗಾ’ ಅಭಿಯಾನದ ಅಂಗವಾಗಿ ವಿಜಯಪುರ ನಗರದಲ್ಲಿ ಗುರುವಾರ ದೇಶಭಕ್ತಿಯ ಸಂಭ್ರಮ ಮನೆಮಾಡಿತು. 300 ಮೀಟರ್ ಉದ್ದದ ಬೃಹತ್ ತ್ರಿವರ್ಣ ಧ್ವಜ ಹಿಡಿದು ನೂರಾರು ವಿದ್ಯಾರ್ಥಿಗಳು, ಮಾಜಿ ಸೈನಿಕರು, ಯುವಕರು ಹಾಗೂ ಸಾರ್ವಜನಿಕರು ನಗರದ ಪ್ರಮುಖ ಬೀದಿಗಳಲ್ಲಿ ಹೆಜ್ಜೆ ಹಾಕಿದರು. ಯಾತ್ರೆಯುದ್ದಕ್ಕೂ ‘ಭಾರತ ಮಾತಾ ಕಿ ಜೈ’, ‘ವಂದೇ ಮಾತರಂ’ ಘೋಷಣೆಗಳು ಮೊಳಗಿದವು.ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದ ಆವರಣದ ಮುಂಭಾಗದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆ ಮಹಾಪೌರ ಎಂ.ಎಸ್….

Read More