ವಿಜಯಪುರದಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ನಗರದ ಖಾಸಗಿ ಹೊಟೇಲ್ ನಲ್ಲಿ ಎರಡು ದಿನದ ರಾಷ್ಟ್ರೀಯ ಮಟ್ಟದ ಡೈಕಾನ್ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು.ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಸಂಶೋದನೆ ಕೇಂದ್ರದ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್, ಬಿ.ಎಲ್.ಡಿ ವಿಶ್ವವಿದ್ಯಾಲಯ, ಎ.ಸಿ.ಪಿ ಇಂಡಿಯಾ ಚಾಪ್ಟರ್, ರಾಜ್ಯ ಮಧುಮೇಹ ಸಂಶೋಧನಾ ಕೇಂದ್ರ (RSSDI) ಹಾಗೂ ವಿಜಯಪುರದ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ‌(ಡೈಕಾನ್) ಭಾರತದ ವಿವಿಧ ಕಡೆಯಿಂದ ಹಾಗೂ ಕರ್ನಾಟಕದ ವಿವಿಧ…

Read More

ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…

Read More

ವಿಜಯಪುರ ಜಿಲ್ಲೆಯಲ್ಲಿ ಹಲವೆಡೆ ಭೂಕಂಪನ

ಸಪ್ತಸಾಗರ ವಾರ್ತೆ ,ವಿಜಯಪುರ,ಅ.ll:ಜಿಲ್ಲೆಯ ತಿಕೋಟ ಹಾಗೂ ವಿಜಯಪುರ ತಾಲೂಕಿನ ಹಲವೆಡೆ ಜನರಿಗೆ ಭೂಕಂಪನದ ಅನುಭವವಾಗಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.ಹೊನ್ನುಟಗಿ, ಕವಲಗಿ, ಕಗ್ಗೋಡ, ಮಧಬಾವಿ, ದ್ಯಾಬೇರಿ ಭಾಗಗಳು ಸೇರಿದಂತೆ, ತಿಕೋಟ ತಾಲೂಕಿನ ಹಲವೆಡೆ ಭೂಮಿ ಕಂಪಿಸಿದೆ.ಶುಕ್ರವಾರ ರಾತ್ರಿ 10:01 ಕ್ಕೆ ಭೂಕಂಪನ ಅನುಭವ ಆಗಿದೆ.ಭಾರೀ ಸದ್ದಿನೊಂದಿಗೆ ಭೂಮಿ ಕಂಪಿಸಿದ ಅನುಭವ ಆಗಿದ್ದು, ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತಮುತ್ತ ಭೂಕಂಪನದ ಅನುಭವ ಆಗಿದೆ. ಭೂಕಂಪನ ಆಪ್‌ಗಳಲ್ಲೂ ಭೂಕಂಪನ ತೀವ್ರತೆ ದಾಖಲಾಗಿದೆ. 2.8 ರಷ್ಟು ಭೂಕಂಪನದ ತೀವ್ರತೆ ದಾಖಲಾಗಿದ್ದು, ಮೇಲಿಂದ…

Read More

ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 10: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಪ್ರತಿಷ್ಠಿತ ಟೋಯೋಟಾ ಕಿರ್ಲೋಸ್ಕರ ಪ್ರೈ. ಲಿ. ಸಂಸ್ಥೆ ಆಯೋಜಿಸಿದ್ದ ನೇರ ಸಂದರ್ಶನ ಉದ್ಯೋಗ ಮೇಳದಲ್ಲಿ 120 ಯುವಕರು ಆಯ್ಕೆಯಾಗಿದ್ದಾರೆ.ಅಕ್ಟೋಬರ್ 9 ಗುರುವಾರ ನಡೆದ ಈ ಸಂದರ್ಶನದಲ್ಲಿ 280ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಿರ್ಲೋಸ್ಕರ್ ಸಂಸ್ಥೆಯ ವತಿಯಿಂದ ಮಾನವ ಸಂಪನ್ಮೂಲ ಅಧಿಕಾರಿ ಅಭಿಷೇಕ ಮತ್ತು ಹಿರಿಯ ತರಬೇತಿ ಅಧಿಕಾರಿಗಳು ಸಂದರ್ಶನ ನಡೆಸಿದ್ದರು.ಈ ಸಂದರ್ಶನದಲ್ಲಿ ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಹಾಗೂ ಆಟೋಮೋಬೈಲ್ ಎಂಜಿನೀಯರಿಂಗ್…

Read More

12ರಂದು ಸಿದ್ದೇಶ್ವರ ಸಹಕಾರಿ ಬ್ಯಾಂಕ್ ಚುನಾವಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 10:ನಗರದ ಪ್ರತಿಷ್ಠಿತ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆ ಅ. 12ರಂದು ನಡೆಯಲಿದೆ.೨೦೨೫ ರಿಂದ ೨೦೩೦ ರ ಅವಧಿಗೆ ಶ್ರೀ ಸಿದ್ದೇಶ್ವರ ಸಹಕಾರಿ ಬ್ಯಾಂಕಿನ ಚುನಾವಣೆ ಬಿ.ಎಲ್.ಡಿ.ಇ. ರಸ್ತೆಯ ಎಸ್. ಎಸ್. ಹೈಸ್ಕೂಲ್ ಕಟ್ಟಡದಲ್ಲಿ ಅ.೧೨ರಂದು ಬೆಳಿಗ್ಗೆ ೯ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ಮತದಾನ ನಡೆಯಲಿದೆ.ಹೈಸ್ಕೂಲ್ ಆವರಣದ ಸುತ್ತಮುತ್ತಲಿನ ೧೦೦ ಮೀಟರ್ ಸ್ಥಳ ಬಿಟ್ಟು ವಾರದ ಸಂತೆಯನ್ನು ಸ್ಥಳಾಂತರಿಸಿ, ಕ್ರಮವಿಡಲು ಜಿಲ್ಲಾಧಿಕಾರಿಗಳು ಆದೇಶಿಸಿದ್ದರಿಂದ ಅ. ೧೨ ರಂದು…

Read More

ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್ ನಗರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಈ ಕಂಪನಿಯ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ…

Read More

ಜಗತ್ತಿನ ಮಹಾನ್ ಜ್ಞಾನಿ ಮಹರ್ಷಿ ವಾಲ್ಮೀಕಿ – ಸಾಹಿತಿ ಪ್ರೊ. ಎ.ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ ವಿಜಯಪುರ,ಅ. 8:ಹಿಂದೂ ಧರ್ಮದ ಪವಿತ್ರಗ್ರಂಥವಾದ ರಾಮಾಯಣವನ್ನು ರಚಿಸುವುದರ ಮೂಲಕ ಹಿಂದೂ ಧರ್ಮಕ್ಕೆ ಅಪಾರ ಕೊಡುಗೆಯನ್ನು ನೀಡಿದ ಜಗತ್ತಿನ ಮಹಾನ್ ಜ್ಞಾನಿ ವಾಲ್ಮೀಕಿ ಋಷಿ ಎಂದು ಸಾಹಿತಿ ಪ್ರೊ. ಎ.ಎಚ್. ಕೊಳಮಲಿ ಹೇಳಿದರು.ಮಂಗಳವಾರ ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ವಾಲ್ಮೀಕಿ ಋಷಿಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ವಿಶೇಷ ಉಪನ್ಯಾಸವನ್ನು ನೀಡಿದರು. ರತ್ನಾಕರನಾಗಿ ಜನಿಸಿದ ಋಷಿ…

Read More

16 ಕಿ.ಮಿ ಓಟದ ಮೂಲಕ ಸಚಿವ ಎಂಬಿಪಿ ಹುಟ್ಟುಹಬ್ಬ ಆಚರಣೆ

ಸಪ್ತ ಸಾಗರ ವಾರ್ತೆ,ವಿಜಯಪುರ, ಅ.7: ವಿಜಯಪುರ ಹೊರವಲಯದ ಮಾನವ ನಿರ್ಮಿತ ಅರಣ್ಯ ಪ್ರದೇಶದಲ್ಲಿ 16 ಕಿ.ಮೀ ಓಡುವ ಮೂಲಕ ವಿಜಯಪುರ ಸೈಕ್ಲಿಂಗ್ ಗ್ರುಪ್ ಸದಸ್ಯರು ಸಚಿವ ಎಂ.ಬಿ.ಪಾಟೀಲ ಅವರ ಹುಟ್ಟುಹಬ್ಬವನ್ನು ವಿಶಿಷ್ಟ ರೀತಿಯಲ್ಲಿ ಆಚರಿಸಿದರು.ಇಂದು ಬೆಳಗ್ಗೆ 6 ಗಂಟೆಗೆ ಬಿ.ಎಂ. ಪಾಟೀಲ ವೃತ್ತದಿಂದ ಓಟ ಆರಂಭಿಸಿದ ಸದಸ್ಯರು, ಸೋಲಾಪುರ, ಅರಕೇರಿ ರಸ್ತೆ ಮೂಲಕ ಭೂತನಾಳ ಕೆರೆ ಪರಿಸರದಲ್ಲಿ, ಕರಾಡ ದೊಡ್ಡಿ ಅರಣ್ಯದಲ್ಲಿ ಓಡುತ್ತ, ಬಿ.ಎಂ.ಪಾಟೀಲ ವೃತ್ತಕ್ಕೆ ಮರಳಿದರು. ಒಟ್ಟು 16 ಕಿ.ಮೀ ಓಟದಲ್ಲಿ 15 ಕ್ಕೂ ಹೆಚ್ಚು…

Read More

ವಾಲ್ಮೀಕಿ ಮಹರ್ಷಿ ರಚನೆಯ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಅಡಗಿವೆ-ಶಾಸಕ ಕಟಕದೊಂಡ

ಸಪ್ತಸಾಗರ ವಾರ್ತೆ ವಿಜಯಪುರ, ಅ.8: ರಾಮಾಯಣದ ಮಹಾಕಾವ್ಯದಲ್ಲಿ ಮಾನವೀಯ ಹಾಗೂ ಸಾಮಾಜಿಕ ಮೌಲ್ಯಗಳು ಒಳಗೊಂಡಿದ್ದು ಆ ಜೀವನ ಮೌಲ್ಯಗಳನ್ನು ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರು ಜಗತ್ತಿಗೆ ನೀಡಿದ್ದಾರ ಎಂದು ಶಾಸಕ ವಿಠ್ಠಲ ಕಟಕದೊಂಡ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ವಿಜಯಪುರ ಇವರ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶ್ರೀ…

Read More

ವಿಜಯಪುರದಲ್ಲಿ ಕವಿಗಳು ಏನು ಮಾಡಿದರು ಗೊತ್ತಾ?

ಸಪ್ತಸಾಗರ ವಾರ್ತೆ, ವಿಜಯಪುರ, ಅ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನೆಗೆ ಆಗ್ರಹಿಸಿ ನಗರದ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಭಾನುವಾರ ೧೮ನೇ ದಿನಕ್ಕೆ ಕಾಲಿಟ್ಟಿದೆ. ಕವಿಗಳು ಹೋರಾಟದ ವೇದಿಕೆಯಲ್ಲಿಯೇ ಕವಿಗೋಷ್ಠಿ ನಡೆಸಿ ಹೋರಾಟಕ್ಕೆ ವಿನೂತನ ರೀತಿಯಲ್ಲಿ ಬೆಂಬಲ ವ್ಯಕ್ತಪಡಿಸಿದರು.ಜಿಲ್ಲೆಯ ೨೦ಕ್ಕೂ ಹೆಚ್ಚು ಕವಿಗಳು ಕವಿತೆಗಳನ್ನು ವಾಚನ ಮಾಡುವ ಮೂಲಕ ಪಿಪಿಪಿ ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜು ಬೇಕು ಎಂದು ಅರ್ಥವತ್ತಾದ ಕವಿತೆಗಳನ್ನು ಓದುವ ಮೂಲಕ ಸರ್ಕಾರದ ಗಮನ ಸೆಳೆದರು.ಕವಿತೆ ಓದುವ ಮೂಲಕ…

Read More