7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ದಿ. ಶ್ರೀ ಬಿ.ಟಿ. ಪಾಟೀಲ್ ಮೆಮೋರಿಯಲ್ ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯು ರೋಪ ಸ್ಕಿಪ್ಪಿಂಗ್ ಅಸೋಸಿಯೇಶನ್ ಆಫ್ ಕರ್ನಾಟಕ ಇವರ ಸಹಯೋಗದೊಂದಿಗೆ ಇತೀಚೆಗೆ 7ನೇ ಕರ್ನಾಟಕ ರಾಜ್ಯ ರೋಪ್ ಸ್ಕಿಪ್ಪಿಂಗ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ನಂದಿ ಅಂತರರಾಷ್ಟ್ರೀಯ ವಸತಿ ಶಾಲೆಯ ರೋಪ ಸ್ಕಿಪ್ಪಿಂಗ್ ತರಬೇತುದಾರ ವಿಶ್ವನಾಥ ಸಿದ್ದಾಪೂರ ನೇತೃತ್ವದಲ್ಲಿ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಕೆ.ಎಚ್. ಪಾಟೀಲ ಸಭಾಭವನದಲ್ಲಿ ಏರ್ಪಡಿಸಿತ್ತು.ವಿವಿಧ ಜಿಲ್ಲೆಗಳಿಂದ ಸುಮಾರು 210 ವಿದ್ಯಾರ್ಥಿಗಳು ರೋಪ ಸ್ಕಿಪ್ಪಿಂಗ್…

Read More

ಗಣೇಶ ಮೂರ್ತಿ ವಿಸರ್ಜನೆ ವೇಳೆ ವಿದ್ಯುತ್ ತಗುಲಿ ಯುವಕ ಸಾವು, ಇಬ್ಬರಿಗೆ ಗಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 3:ಏಳನೇ ದಿನದ ಗಣೇಶ ಮೂರ್ತಿ ವಿಸರ್ಜನೆ ವೇಳೆ ಮಂಗಳವಾರ ರಾತ್ರಿ ವಿದ್ಯುತ್ ತಗುಲಿ ಯುವಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಅವಘಡ ನಗರದ ಗಾಂಧಿ ವೃತ್ತದ ಬಳಿ ಟಾಂಗಾ ನಿಲುಗಡೆ ಸ್ಥಳದಲ್ಲಿ ಸಂಭವಿಸಿದೆ.ನಗರದ ಡೋಬಲೆ ಗಲ್ಲಿ ನಿವಾಸಿಶುಭಂ ಸಂಕಳ (21) ಮೃತ ಯುವಕ.ಇದೇ ವೇಳೆ ಪ್ರಭಾಕರ ಜಂಗಲೆ ಹಾಗೂ ಲಖನ್ ಚವ್ಹಾಣ ಎಂಬ ಯುವಕರು ಗಾಯಗೊಂಡಿದ್ದು, ಈ ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಗಣೇಶ ಮೂರ್ತಿ ಮೆರವಣಿಗೆ ಸಾಗಲು ವಿದ್ಯುತ್ ತಂತಿ ಮೇಲೆತ್ತುವ ವೇಳೆ…

Read More

ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಕಟ್ಟಿಬದ್ಧ : ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2: ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು.ಇಲ್ಲಿಯ ಮಹಿಳಾ ವಿವಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿ ಕೌನ್ಸಿಲಿಂಗ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜ್ಞಾನಾರ್ಜನೆಗೆ ಬೇಕಾದ ಎಲ್ಲ ಬಗೆಯ ಅವಕಾಶಗಳನ್ನು ಮಹಿಳಾ ವಿವಿ ಸೃಷ್ಟಿಸುತ್ತದೆ ಎಂದರು.ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್…

Read More

ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.2:ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡದಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆಅಲೆಮಾರಿ ಸಮುದಾಯದವರ ಆರ್ಥಿಕ ಅಭಿವೃದ್ಧಿಗಾಗಿವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಭೂ ರಹಿತ ಮಹಿಳಾ ಕೃಷಿ ಕಾರ್ಮಿಕರಿಗಾಗಿ ಭೂ ಒಡೆತನ ಯೋಜನೆ,ಗಂಗಾ ಕಲ್ಯಾಣ ಯೋಜ‌ನೆ, ಬ್ಯಾಂಕಿನ ಸಹಯೋಗದೊಂದಿಗೆ ಉದ್ಯಮಶೀಲತಾ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಹಾಗೂ ಪ್ರೇರಣಾ ಮ್ಯಕ್ರೋ ಕ್ರೆಡಿಟ್ ಯೋಜನೆಗಳಡಿ ಅರ್ಜಿಯನ್ನು ಆನಲೈನ್ ಮೂಲಕ ಸಲ್ಲಿಸಬಹುದಾಗಿದೆ.ಸೆಪ್ಟೆಂಬರ್ 17ಕೊನೆಯ ದಿನವಾಗಿದೆ.2023-24 ಮತ್ತು 2024-25ನೇ ಸಾಲಿನಲ್ಲಿ ಆನಲೈನ್ ಮೂಲಕ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ…

Read More

ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.2:2025-26ನೇ ಸಾಲಿಗೆ ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರು ಆರ್ಥಿಕ ಅಭಿವೃದ್ಧಿಯನ್ನು ಹೊಂದಲು ವಿವಿಧ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಅನುಷ್ಠಾನ ಸಮಿತಿ ರಚಿಸಬೇಕಾಗಿದ್ದು, ಸಮಿತಿಯ ನಾಮನಿರ್ದೇಶಿತ ಸದಸ್ಯತ್ವಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೇದಾರ ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯಕ್ಕೆ ಸೇರಿದ ಅರ್ಹ ಆಸಕ್ತರು ಸೆ. 20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ…

Read More

ಐತಿಹಾಸಿಕ ಸ್ಮಾರಕಗಳ ದುರಸ್ತಿಗೆ ಮಹಾ ನಿರ್ದೇಶಕರಿಗೆ ಕಲಾಲ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…

Read More

ಸಾಹಿತ್ಯ ಹರಿಯುವ ನೀರಿನಂತಾಗಬೇಕು- ಜಿಲ್ಲಾಧಿಕಾರಿ ಡಾ.ಕೆ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಸಾಹಿತ್ಯದ ಬರವಣಿಗೆ ನಿರಂತರವಾಗಿರಬೇಕು ಮತ್ತು ಸಾಹಿತ್ಯ ಯಾವಾಗಲೂ ಹರಿಯುವ ನೀರಿನಂತಾಗಬೇಕು. ಒತ್ತಡದ ಸೇವೆಯ ಮಧ್ಯೆದಲ್ಲಿ ಸಾಹಿತ್ಯ ಕೃಷಿ ಮಾಡುತ್ತಿರುವ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಕಾಯ೯ ಅತ್ಯಂತ ಶ್ಲಾಘನೀಯ ಎಂದು ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ.ಆನಂದ ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಉದ್ಘಾಟನೆಗೊಂಡ ನಮ್ಮ ಸಂವಿಧಾನ ನಮ್ಮ ಹೆಮ್ಮೆ ಹಾಗೂ ದೇವರಗೆಣ್ಣೂರ ಎಂಬ ಎರಡು ಕೃತಿಗಳ ಲೋಕಾರ್ಪಣೆ ಸಂದರ್ಭದಲ್ಲಿ ಮಾತನಾಡುತ್ತ ಕೃತಿಗಳು ಯುವಕರಿಗೆ ಸ್ಫೂರ್ತಿ ಮತ್ತು ಪ್ರೇರಣೆಯಾಗಲಿ ಎಂದರು.ಜಿಲ್ಲಾ…

Read More