ಶಿವರಾತ್ರಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಎಸ್.ಎಂ.ವಿ.ಟಿ. ಬೆಂಗಳೂರು ಮತ್ತು ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಓಡಿಸಲು ನಿರ್ಧರಿಸಿದೆ.ರೈಲು ಸಂಖ್ಯೆ 06503 ಎಸ್.ಎಂ.ವಿ.ಟಿ. ಬೆಂಗಳೂರು – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು ಫೆ.13 ರಂದು ರಾತ್ರಿ 7.15 ಕ್ಕೆ ಎಸ್.ಎಂ.ವಿ.ಟಿ. ಬೆಂಗಳೂರಿನಿಂದ ಹೊರಟು ಮರುದಿನ ಬೆಳಿಗ್ಗೆ 7.15 ಗಂಟೆಗೆ ವಿಜಯಪುರವನ್ನು ತಲುಪಲಿದೆ.ರೈಲು ಸಂಖ್ಯೆ 06504 ವಿಜಯಪುರ – ಎಸ್.ಎಂ.ವಿ.ಟಿ. ಬೆಂಗಳೂರು ಎಕ್ಸ್‌ಪ್ರೆಸ್ ವಿಶೇಷ ರೈಲು…

Read More

ಜಿಲ್ಲಾಡಳಿತದಿಂದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಅರ್ಥಪೂರ್ಣ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ ಜ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸರಳವಾಗಿ ಹಾಗೂ ಅತ್ಯಂತ ಅರ್ಥಪೂರ್ಣವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿ ಆಚರಿಸಲಾಯಿತು.ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರಕ್ಕೆ ಪುಷ್ಪ ನಮನ ಅರ್ಪಿಸಿ,ಗೌರವ ಸಲ್ಲಿಸಿದರು. ಭವ್ಯ ಮೆರವಣಿಗೆ:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಚಾಲನೆ ನೀಡಿದರು.ಭವ್ಯ ಮೆರವಣಿಗೆಯು ವಿವಿಧ ಕಲಾ…

Read More

ಜ.27 ರಂದು ವಿಜಯಪುರದಲ್ಲಿ ಉದ್ಯೋಗ ಮೇಳ

ಸಪ್ತಸಾಗರ ವಾರ್ತೆ, ವಿಜಯಪುರ, ಜ.14: ಜನವರಿ 27ರಂದು ನಗರದ ದರ್ಬಾರ ಶಾಲೆಯ ಆವರಣದಲ್ಲಿ ನಡೆಯುವ ಉದ್ಯೋಗ ಮೇಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗದಾತ ಕಂಪನಿಗಳು ಭಾಗವಹಿಸುವಂತೆ ನೋಡಿಕೊಳ್ಳಬೇಕು ಹಾಗೂ ಜಿಲ್ಲೆಯ ನೀರುದ್ಯೋಗಿ ಯುವಕರಿಗೆ ಉದ್ಯೋಗ ದೊರಕಿಸುವ ನೀಟ್ಟಿನಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಮೇಳವನ್ನು ಆಯೋಜಿಸಬೇಕೆಂದು ಜಿಲ್ಲಾ ಕೌಶಲ್ಯ ಸಮಿತಿಯ ಅಧ್ಯಕ್ಷ, ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಉದ್ಯೋಗ ಮೇಳದ ಆಯೋಜನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಯುವನಿಧಿ ಸೌಲಭ್ಯ ಪಡೆಯುತ್ತಿರುವ…

Read More

ಎಂಟನೇ ವಿಜಯಪುರ ತಾಲೂಕ ಕನ್ನಡ ಸಾಹಿತ್ಯ ಸಮ್ಮೇಳನ: ಸವಾ೯ಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಜ11: ಜನೇವರಿ 20,21ರಂದು ವಿಜಯಪುರ ತಾಲೂಕ ಎಂಟನೇ ಕನ್ನಡ ಸಾಹಿತ್ಯ ಸಮ್ಮೇಳನ ಹಿಟ್ಟಿನಹಳ್ಳಿಯಲ್ಲಿ ಜರುಗಲಿದ್ದು, ಸಮ್ಮೇಳನದ ಸವಾ೯ಧ್ಯಕ್ಷರಾಗಿ ಸಾಹಿತಿ ಸೋಮಲಿಂಗ ಗೆಣ್ಣೂರ ಸವಾ೯ನುಮತದಿಂದ ಆಯ್ಕೆಯಾಗಿದ್ದಾರೆ.ಭಾನುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಕಾಯ೯ಕಾರಿ ಸಮಿತಿ ಪದಾಧಿಕಾರಿಗಳು ಚಚಿ೯ಸಿ ಸವಾ೯ನುಮತದಿಂದ ಸಾಹಿತಿ ಸೋಮಲಿಂಗ ಗೆಣ್ಣೂರ ಅವರನ್ನು ಸವಾ೯ಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.ಸೋಮಲಿಂಗ ಗೆಣ್ಣೂರ ಚಿಂತಕರು. ವಾಗ್ಮಿಗಳು. ಲೇಖಕರು ಹಾಗೂ ವಿಮರ್ಶಕರಾಗಿದ್ದು ದೇವರಗೆಣ್ಣೂರ ಎಂಬ ಆತ್ಮಕಥನ, ನಮ್ಮ ಸಂವಿಧಾನ…

Read More

ಮಹಿಳಾ ಸಾಧಕಿಯರಿಗೆ “ಅಕ್ಷರದ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ” ಪ್ರದಾನ | 16ನೇ ವರ್ಷದ ಯಶಸ್ವಿ ಸಮಾರಂಭಕ್ಕೆ ಸಾಕ್ಷಿಯಾದ ವಿಜಯಪುರ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 4 : ಭಾರತದ ಮೊದಲ ಮಹಿಳಾ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಫುಲೆ ಅವರ 195ನೇ ಜನ್ಮದಿನದ ಅಂಗವಾಗಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ “ಅಕ್ಷರದ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿ” ಪ್ರದಾನ ಸಮಾರಂಭವನ್ನು ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ರಾಜ್ಯ ಸಮಿತಿ ವತಿಯಿಂದ ಶನಿವಾರ ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಯಶಸ್ವಿಯಾಗಿ ನೆರವೇರಿತು.ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ತಿನ ಸ್ಥಾಪಕ ರಾಜ್ಯಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಿ,…

Read More

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಹೋರಾಟಗಾರರ ಮೇಲಿನ ಪ್ರಕರಣ ರದ್ದುಗೊಳಿಸಿ- ಎನ್. ರವಿಕುಮಾರ್ ಒತ್ತಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 3: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಎಂದು ಟೀಕಿಸಿದ್ದಾರೆ.ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ…

Read More

ಸಂಕ್ರಾಂತಿ: ವಿಜಯಪುರ-ಬೆಂಗಳೂರು ಮಧ್ಯೆ ವಿಶೇಷ ರೈಲು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 2: ವಿಜಯಪುರ ಜಿಲ್ಲೆಯ ಪ್ರಯಾಣಿಕರ ಅನುಕೂಲಕ್ಕಾಗಿ ವಿಜಯಪುರ-ಬೆಂಗಳೂರಿಗೆ ಸಕ್ರಾಂತಿ ಹಬ್ಬದ ಸಂದರ್ಭದಲ್ಲಿ ವಿಶೇಷ ರೈಲು ಸೇವೆ ಒದಗಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಈ ರೈಲು ಸಂಚಾರ ಆರಂಭಿಸಲಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ವಿಜಯಪುರದಿಂದ ಬೆಂಗಳೂರು ಪ್ರಯಾಣ ಬೆಳೆಸುವವರ ಸಂಖ್ಯೆ ಅಧಿಕ, ಸಂಕ್ರಾಂತಿ ಸೇರಿದಂತೆ ಬರುವ ಹಬ್ಬಗಳಿಗೆ ಅನೇಕರು ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಜನತೆಗೆ ಅನುಕೂಲ ಕಲ್ಪಿಸುವ ದೃಷ್ಟಿಯಿಂದ ವಿಶೇಷ ರೈಲು ಸೇವೆ ಆರಂಭಿಸಲು…

Read More

ಸಚಿವ ಎಂ.ಬಿ. ಪಾಟೀಲರಿಗೆ ಜಿಗಜಿಣಗಿ ಟಾಂಗ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಗೋಲಗುಂಬಜ್ ಎಕ್ಸಪ್ರೆಸ್ ರೈಲಿನ ಅವಧಿ ಕಡಿಮೆ ಮಾಡಲು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಮೂಲಕ ಸಂಚರಿಸುವಂತೆ ಮಾಡುವಲ್ಲಿ ಸಚಿವ ಎಂ. ಬಿ. ಪಾಟೀಲರ ಪಾತ್ರವಿಲ್ಲ. ನಾನು ಮಾಡಿದ್ದನ್ನು ತಾವೇ ಮಾಡಿದ ಕೆಲಸ ಎಂದು ಸಚಿವ ಪಾಟೀಲ ಬಿಂಬಿಸಿಕೊಳ್ಳುವುದು ಸರಿಯಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಗೋಲಗುಂಬಜ್ ಎಕ್ಸಪ್ರೆಸ್ ರೈಲಿನ ಅವಧಿ ಕಡಿಮೆ ಮಾಡಲು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಮೂಲಕ ಸಂಚರಿಸುವಂತೆ ಮಾಡಲು ಕಳೆದ ಮೂರು ವರ್ಷಗಳ ನನ್ನ…

Read More

ಹೋಟೆಲ್ ಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ನಗರ ಹೊರ ವಲಯದ ಸೊಲ್ಲಾಪುರ ರಸ್ತೆಯಲ್ಲಿನ ಹೋಟೆಲವೊಂದಕ್ಕೆ ಭಾನುವಾರ ತಡರಾತ್ರಿ ಆಕಸ್ಮಿಕ ಬೆಂಕಿ ತಗುಲಿ ಧಗಧಗನೇ ಹೊತ್ತಿ ಉರಿದು ಅಪಾರ ಹಾನಿಯಾಗಿದೆ.ಕೃಷ್ಣ ಪ್ಯಾಲೇಸ್ ಹೋಟೆಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಹೋಟೆಲ್ ಮುಂಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಧಗಧಗನೇ ಹೊತ್ತಿ ಉರಿಯುತ್ತಿರುವುದನ್ನು ಸಾರ್ವಜನಿಕರು ಗಮನಿಸಿ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕದಳದ ಸಿಬ್ಬಂದಿ ಘಟನಾಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಸುಮಾರು 1 ತಾಸಿಗೂ ಹೆಚ್ಚು ಕಾಲ ಹರ ಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ…

Read More

ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಸ್ಥಾಪನೆ ಮಾಡಲು ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26 :ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಮುಂದೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡುವಂತೆ ಒತ್ತಾಯಿಸಿ ವಿಜಯಪುರ ನಗರ ಘಟಕ ಕುರುಬರ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು ಸಂತೋಷದ ಸಂಗತಿ. ಆದರೆ ಸ್ವಾತಂತ್ರ್ಯ ಸಮರವನ್ನು ಸಾರಿದ ಕೀರ್ತಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಅವರ ಎಡಭಾಗದಲ್ಲಿ ಪ್ರತಿಷ್ಠಾಪನೆ…

Read More