ಯತ್ನಾಳರು ಅಂಬೇಡ್ಕರ್ ಅನುಯಾಯಿ: ಅಪಪ್ರಚಾರ ಖಂಡನೀಯ-ಯಾಳವಾರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಡಾ.ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳದ ಅನೇಕರು ಕೇವಲ ತಮ್ಮ ಸ್ವಾರ್ಥಕ್ಕಾಗಿ ಅಂಬೇಡ್ಕರ್ ಹೆಸರನ್ನು ಬಳಸುತ್ತಿದ್ದಾರೆ. ಆದರೆ, ಯತ್ನಾಳರು ಅಂಬೇಡ್ಕರ್ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿ, ಅವರ ಜೀವನ ಚರಿತ್ರೆ, ದೇಶಕ್ಕೆ ನೀಡಿದ ಕೊಡುಗೆ, ಅವರ ಜೀವನದಲ್ಲಾದ ಅನ್ಯಾಯ ಬಗ್ಗೆ ವಿವರಿಸಿದಲ್ಲದೆ, ತಾವು ಅಂಬೇಡ್ಕರ್ ಅವರ ಅನುಯಾಯಿ ಎಂದು ಸದನದಲ್ಲೇ ಘೋಷಿಸಿದ್ದಾರೆ. ಅವರ ಏಳಿಗೆ ಸಹಿಸದೆ ಅಪಪ್ರಚಾರ ಮಾಡುತ್ತಿರುವುದಕ್ಕೆ ಪರಿಶಿಷ್ಟ ಸಮುದಾಯದ ಮುಖಂಡರು ಹಾಗೂ ವಿಡಿಎ ಮಾಜಿ ಸದಸ್ಯ ಮಡಿವಾಳ ಯಾಳವಾರ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಅನುದಾನಕ್ಕೆ ಒಪ್ಪಿಗೆ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 19: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಆ ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ…

Read More

ಟೈಕೊಂಡೊ ಸ್ಫರ್ಧೆ: ರಾಜ್ಯ ಮಟ್ಟಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18: ಇಲ್ಲಿನ ಕೆ.ಬಿ.ಎಸ್ ನಂ. ೫ರ ಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ಟೈಕೊಂಡೊ ಸ್ಫರ್ಧೆಯಲ್ಲಿ ಎಕ್ಸಲಂಟ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಗರ ಹೊರವಲಯದಲ್ಲಿ ಇರುವ ಇಟ್ಟಂಗಿಹಾಳ ರಸ್ತೆಯ ಎಕ್ಸಲಂಟ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆ ವಿದ್ಯಾರ್ಥಿನಿಯರಾದ ಕುಮಾರಿ ನೀಲವೇಣಿ ಕಾವೇಕರ ಅವರು ೩೮ ಕೆ.ಜಿ. ಟೈಕೊಂಡದಲ್ಲಿ ಪ್ರಥಮ ಸ್ಥಾನ, ೫೯ಕೆ.ಜಿ ಟೈಕೊಂಡದಲ್ಲಿ ಪುಷ್ಪಾ ರಾಠೋಡ ಪ್ರಥಮ ಸ್ಥಾನ ಪಡೆದು ಧಾರವಾಡದಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ…

Read More

ಸೆ. 26ರಂದು ಬೃಹತ್ ಉದ್ಯೋಗ ಮೇಳ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.18:ಅಂತರ್ ರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್, ವಿಜಯಪುರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಸೆ. 26ರಂದು ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಬೃಹತ್ ಉದ್ಯೋಗ ಮೇಳ ಆಯೋಜಿಸಿದೆ.2024 ಮತ್ತು 2025 ನೇ ಶೈಕ್ಷಣಿಕ ವರ್ಷದಲ್ಲಿ ಬಿ.ಇ ಮತ್ತು ಡಿಪ್ಲೋಮಾ ಪದವಿಯ ಮೆಕ್ಯಾನಿಕಲ್, ಇಲೇಕ್ಟ್ರಾನಿಕ್ಸ್ ಕಮ್ಯೂನಿಕೇಶನ್ ಮತ್ತು ಇಲೇಕ್ಟ್ರಾನಿಕ್ಸ್ ಇಲೆಕ್ಟ್ರೀಕಲ್ಸ್ ವಿಭಾಗಗಳಲ್ಲಿ ತೇರ್ಗಡೆ ಹೊಂದಿರುವ ವಿಜಯಪುರ ಹಾಗೂ ಸುತ್ತಲಿನ ಪ್ರದೇಶಗಳ ಎಲ್ಲ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡು, ಈ…

Read More

ಮಹರ್ಷಿ ವಾಲ್ಮೀಕಿ ಜಯಂತಿ ಅರ್ಥಪೂರ್ಣ ಆಚರಣೆೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ ಸೆ.18:ಜಿಲ್ಲಾಡಳಿತದ ಮೂಲಕ ಅ.7 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ವಿವಿಧ ಇಲಾಖೆಗಳಿಗೆ ವಹಿಸಿದ ಜವಾಬ್ದಾರಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.‌ ಆನಂದ ಕೆ. ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗುರುವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಕುರಿತು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಅ.7ರ ಬೆಳಿಗ್ಗೆ 9-30 ಗಂಟೆಗೆ ನಗರದ ಶ್ರೀ…

Read More

ವಿಶ್ವಕರ್ಮರ ಕೊಡುಗೆ ಅಪಾರ- ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More

ಗುಣಮಟ್ಟದ ಸೇವೆ ನೀಡುವಲ್ಲಿ ಬಿ ಎಲ್ ಡಿ ಇ ಆಸ್ಪತ್ರೆ ಮುಂಚೂಣಿಯಲ್ಲಿ: ಬಸನಗೌಡ ಪಾಟೀಲ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 17: ಬಿ.ಎಲ್.ಡಿ.ಇ ಆಸ್ಪತ್ರೆ ಬಡವರು ಮತ್ತು ಮಹಿಳೆಯರಿಗೆ ಗುಣಮಟ್ಟದ ಸೇವೆ ನೀಡುವಲ್ಲಿ ಮುಂಚೂಣಿಯಲ್ಲಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಹೇಳಿದ್ದಾರೆ.ಬುಧವಾರ ನಗರದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿವಿಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನದ ಅಡಿಯಲ್ಲಿ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಉಚಿತವಾಗಿ…

Read More

ಚಡಚಣದಲ್ಲಿ ಎಸ್ ಬಿ ಐ ಬ್ಯಾಂಕ್ ದರೋಡೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 16:ಮುಸುಕುಧಾರಿ ದರೋಡೆಕೋರರ ಗುಂಪೊಂದು ಜಿಲ್ಲೆಯ ಚಡಚಣ ಪಟ್ಟಣದ ಎಸ್ ಬಿ ಐ ಬ್ಯಾಂಕಿಗೆ ಮಂಗಳವಾರ ರಾತ್ರಿ 8ಗಂಟೆ ಸುಮಾರಿಗೆ ನುಗ್ಗಿ ನಗದು, ಚಿನ್ನಾಭರಣ ದೋಚಿಕೊಂಡು ಪರಾರಿಯಾಗಿದೆ.ಐದಕ್ಕೂ ಹೆಚ್ಚು ಮುಸುಕುಧಾರಿ ದರೋಡೆಕೋರರಿಂದ ಈ ಕೃತ್ಯ ನಡೆದಿದ್ದು, ಮಿಲಿಟರಿ ಮಾದರಿ ಬಟ್ಟೆಯಲ್ಲಿ ಕೈಯಲ್ಲಿ ಕಂಟ್ರಿ ಪಿಸ್ತೂಲ್ ಹಾಗೂ ಮಾರಕಾಸ್ತ್ರಗಳನ್ನು ತೋರಿಸಿ ಎಸ್ ಬಿ ಐ ಬ್ಯಾಂಕ್ ನಲ್ಲಿನ‌ ಮ್ಯಾನೇಜರ್, ಕ್ಯಾಶಿಯರ್ ಹಾಗೂ ಇತರೆ ಸಿಬ್ಬಂದಿಗಳಿಗೆ ಹೆದರಿಸಿ ಕೈಕಾಲು ಕಟ್ಟಿ ಕೂಡಿ ಹಾಕಿ ದರೋಡೆ ನಡೆಸಲಾಗಿದೆ.ಬ್ಯಾಂಕಿನಲ್ಲಿದ್ದ…

Read More

ವಿಜಯಪುರ- ಚಿಕ್ಕಲಕಿ ಬಸ್ ಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 16: ನಗರದಿಂದ ಚಿಕ್ಕಲಕಿ ಕ್ರಾಸ್ ವರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹೊಸದಾಗಿ ಎರಡು ಗ್ರಾಮೀಣ ಸಾರಿಗೆ ಬಸ್ ಸಂಚಾರಕ್ಕೆ ಇಂದು ಮಂಗಳವಾರ ಯಕ್ಕುಂಡಿ‌ ಗ್ರಾಮದಲ್ಲಿ ಚಾಲನೆ ನೀಡಲಾಯಿತು.ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಂಗರಿಸಲಾಗಿದ್ದ ಎರಡು ಬಸ್ಸುಗಳ ಸಂಚಾರಕ್ಕೆ ತಾಲೂಕು ಗ್ಯಾರಂಟಿ ಯೋಜನೆಗಳ‌ ಸಮಿತಿ‌ ಅಧ್ಯಕ್ಷ ಮಲ್ಲು ದಳವಾಯಿ ಮತ್ತು ಬ್ಲಾಕ್ ಕಾಂಗ್ರೆಸ್ ಈರಗೊಂಡ ಬಿರಾದಾರ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲು ದಳವಾಯಿ, ಸಚಿವ ಎಂ. ಬಿ. ಪಾಟೀಲ‌ ಅವರ…

Read More

ಯುಕೆಪಿ 3ನೇ ಹಂತದ ಯೋಜನೆ: ಮುಳುಗಡೆಯಾಗುವ ಪ್ರತಿ ಎಕರೆ ಭೂಮಿಗೆ 30-40 ಲಕ್ಷ ಪರಿಹಾರ ನಿಗದಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.16:“ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆಯಡಿ ಮುಳುಗಡೆಯಾಗುವ ಪ್ರತಿ ಎಕರೆ ನೀರಾವರಿ ಜಮೀನಿಗೆ ರೂ.40 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.30 ಲಕ್ಷ. ಕಾಲುವೆಗಾಗಿ ಸ್ವಾಧೀನಪಡಿಸಿಕೊಳ್ಳುವ ಭೂಮಿ ಪೈಕಿ ನೀರಾವರಿ ಜಮೀನಿಗೆ ಪ್ರತಿ ಎಕರೆಗೆ ರೂ.30 ಲಕ್ಷ ಹಾಗೂ ಒಣ ಜಮೀನಿಗೆ ಪ್ರತಿ ಎಕರಿಗೆ ರೂ.25 ಲಕ್ಷ ಪರಿಹಾರ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ…

Read More