ಗಣೇಶ ಉತ್ಸವ ನಿಮಿತ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ನಗರದ ಶ್ರೀ ಶಂಕರಲಿಂಗ ಗಜಾನನ ತರುಣ ಮಂಡಳಿ, “ಸಂಕಲ್ಪ ಸಿದ್ಧಿ’ ಗಣಪತಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿಯ ನಿಮಿತ್ತ ದೇವಸ್ಥಾನದ ಆವರಣದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣೆ ಶಿಬಿರವನ್ನು ಏರ್ಪಡಿಸಲಾಗಿತ್ತು.ವಿಜಯಪುರ ಮಹಾನಗರ ಪಾಲಿಕೆಯ ಸದಸ್ಯ ಶಿವರುದ್ರ ಬಾಗಲಕೋಟ ಅವರ ನೇತೃತ್ವದಲ್ಲಿ ಉಚಿತ ಮಧುಮೇಹ ಹಾಗೂ ರಕ್ತದೊತ್ತಡ ತಪಾಸಣಾ ಶಿಬಿರವನ್ನು ನಡೆಯಿತು.ಶಿಬಿರದಲ್ಲಿ ಖ್ಯಾತ ಮಧುಮೇಹ ತಜ್ಞ ವೈದ್ಯ ಡಾ. ಬಾಬುರಾಜೇಂದ್ರ ನಾಯಕ ಮತ್ತಿತರರಿಂದ ನೂರಾರು ಜನರ ಆರೋಗ್ಯ ತಪಾಸಣೆ ಮಾಡಲಾಯಿತು. ಮಂಡಳಿಯ ಅಧ್ಯಕ್ಷ…

Read More

ನಿರ್ವಹಣೆ ಕೊರತೆಯಿಃದ ವಿಜಯಪುರದಲ್ಲಿ ರಸ್ತೆಗಳು ಹಾಳು: ಪಟ್ಟಣಶೆಟ್ಟಿ ಆರೋಪ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29:ವಿಜಯಪುರ ನಗರ ಸೇರಿದಂತೆ ವಿಜಯಪುರ, ನಾಗಠಾಣ ಮತ ಕ್ಷೇತ್ರದಲ್ಲಿ ರಸ್ತೆಗಳು ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ ಎಂದು ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಆರೋಪಿಸಿದರು.ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಒಂದು ವರ್ಷದಲ್ಲಿ ರಸ್ತೆಗಳು ಹಾಳಾಗಿವೆ. ನಿರ್ವಹಣೆ ಕೊರತೆಯಿಂದ ರಸ್ತೆಗಳು ಹದಗೆಟ್ಟಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಗಮನ ಹರಿಸಿಲ್ಲ. ಇದರಿಂದ ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದರು.ಮಹಾನಗರ ಪಾಲಿಕೆಯಲ್ಲಿ ವ್ಯಾಪಕ ಭೃಷ್ಟಾಚಾರ ನಡೆದಿದೆ. ಇ-ಸ್ವತ್ತು ದಂಧೆಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಆಪಾದಿಸಿದರು.ಹಿಂದೂ ಮಹಿಳೆಯರ ಬಗ್ಗೆ ಅವಮಾನಕರವಾಗಿ…

Read More

ಸೆ. 1ರಿಂದ ಬಸವ ಸಂಸ್ಕೃತಿ ಅಭಿಯಾನ ಆರಂಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ಬಸವ ಸಂಸ್ಕೃತಿ ವಿಶ್ವ ಸಂಸ್ಕೃತಿ. ಈ ಸಂಸ್ಕೃತಿಯ ಶ್ರೇಷ್ಠತೆಯ ಪ್ರಸಾರಕ್ಕಾಗಿ ಬಸವ ಸಂಸ್ಕೃತಿ ಅಭಿಯಾನವನ್ನು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟಿಸಲಾಗಿದ್ದು, ಸೆ.೧ ರಿಂದ ಬಸವ ಜನ್ಮಭೂಮಿ ಬಸವನ ಬಾಗೇವಾಡಿಯಿಂದ ಈ ಅಭಿಯಾನ ಆರಂಭಗೊಳ್ಳಲಿದ್ದು ಅ.೧ರವರೆಗೆ ಬಸವ ಸಂಸ್ಕೃತಿ ಅಭಿಯಾನ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ತಲುಪಲಿದೆ ಎಂದು ಬಸವನ ಬಾಗೇವಾಡಿ ವಿರಕ್ತಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿಗಳು ಹೇಳಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರ ಆಶಯಗಳನ್ನು ಬಿತ್ತುವ ದೃಷ್ಟಿಯಿಂದ ಈ…

Read More

ವಿಡಿಸಿಸಿ ಬ್ಯಾಂಕ್ ಗೆ ೨೫.೧೮ ಕೋಟಿ ರೂ. ನಿವ್ವಳ ಲಾಭ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28 :ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಸಕ್ತ ಆರ್ಥಿಕ ವರ್ಷದಲ್ಲಿ ೨೫.೧೮ ಕೋಟಿ ರೂ. ನಿವ್ವಳ ಲಾಭ ಗಳಿಸಿದೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಹಾಗೂ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ಗುರುವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಸಕ್ತ ವರ್ಷ ಬ್ಯಾಂಕು ಗಳಿಸಿರುವ ನಿವ್ವಳ ಲಾಭದ ಪ್ರಮಾಣ ಬ್ಯಾಂಕಿನ ಇತಿಹಾಸದಲ್ಲಿಯೇ ಗರಿಷ್ಠವಾಗಿದ್ದು, ವಾಸ್ತವವಾಗಿ ಬ್ಯಾಂಕು ೩೩.೭೧ ಕೋಟಿ ರೂ. ಲಾಭ ಗಳಿಸಿದ್ದು, ಅದರಲ್ಲಿ ೮.೫೩…

Read More

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ವಿರೋಧಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 28:ಜಿಲ್ಲೆಗೆ ಖಾಸಗಿ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ಸಾಹಿತಿಗಳು, ಚಿಂತಕರು, ದಲಿತ ಮತ್ತು ಕನ್ನಡಪರ ಹೋರಾಟಗಾರರು, ಕಾರ್ಮಿಕ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಯ ಮುಖಂಡರುಗಳು ಸಭೆ ಸೇರಿ ಖಾಸಗಿ ಸಹಭಾಗಿತ್ವವನ್ನು ವಿರೋಧಿಸಬೇಕು ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಒಮ್ಮತದಿಂದ ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳನ್ನೊಳಗೊಂಡ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ, ವಿಜಯಪುರ’ ಸಮಿತಿಯನ್ನು ರಚಿಸಲಾಯಿತು….

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಸಾಂಸ್ಕೃತಿಕ ಪರಂಪರೆ-ಶೈಕ್ಷಣಿಕ ತಿಳಿವಳಿಕೆ ಹೇಳುವ ಗಣೇಶ ಹಬ್ಬ: ಶಂಕರ ಹುಣಶ್ಯಾಳ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಗಣೇಶ ಹಬ್ಬವು ವಿದ್ಯಾರ್ಥಿಗಳಲ್ಲಿ ಸಾಂಸ್ಕೃತಿಕ ಅರಿವು, ತಂಡದ ಭಾವನೆ ಮತ್ತು ಆಧ್ಯಾತ್ಮಿಕತೆಯನ್ನು ಬೆಳೆಸುತ್ತದೆ ಎಂದು ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಹೇಳಿದರು.ಬುಧವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಗಣೇಶ ಚತುರ್ಥಿ ಹಬ್ಬದ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳಿಗೆ ಈ ಹಬ್ಬವು ಆಧ್ಯಾತ್ಮಿಕತೆ, ಸಾಂಸ್ಕೃತಿಕ ಪರಂಪರೆ ಮತ್ತು ಶೈಕ್ಷಣಿಕ ತಿಳುವಳಿಕೆಯನ್ನು ಒದಗಿಸುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಸ್ವಾತಂತ್ರ್ಯ…

Read More

ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದ‌ರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…

Read More

ಅಸ್ಮಿತ ಖೇಲೋ ಇಂಡಿಯಾ ಯೋಗಸನ ಕ್ರೀಡಾಕೂಟದಲ್ಲಿ ಜಿಲ್ಲೆಗೆ ಬಂಗಾರ ಪದಕ

ಸಪ್ತಸಾಗರ ವಾರ್ತೆ ವಿಜಯಪುರ, ಆ. 27:ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ಆ.22 ಮತ್ತು 23 ರಂದು ನಡೆದ ಅಸ್ಮಿತ ಖೇಲೋ ಇಂಡಿಯಾ ಮಹಿಳಾ ಯೋಗಾಸನ ಕ್ರೀಡಾಕೂಟದಲ್ಲಿ ಜಿಲ್ಲೆಯ ಬಾಲಿಕೆಯರು ಚಿನ್ನದ ಪದಕ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.18 ವರ್ಷದ ಒಳಗಿನ ಬಾಲಕಿಯರ ಆಟಿಸ್ಟಿಕ್ಕ ವಿಭಾದಲ್ಲಿ ಬಂಗಾರ ಪದಕ ಪಡೆದಿದ್ದು, ಕುಮಾರಿಯರಾದ ಶ್ರೀ ಲಕ್ಷ್ಮಿ ಮ್ಯಾಗೇರಿ, ಮರಿಯಮ್ಮ ಹರಿಜನ, ಪ್ರಿಯಾ ಚವ್ಹಾಣ, ಸುಮನ ಪೋಹಿಟೆ, ಹರ್ಷಿತಾ ಹರಿಜನ ತಂಡದೊಂದಿಗೆ ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಾ….

Read More