ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹದಲ್ಲಿ ವಿಜಯಪುರ ಜಿಲ್ಲೆಗೆ ಪ್ರಶಸ್ತಿ ಗರಿ

ಸಪ್ತಸಾಗರ ವಾರ್ತೆ,ವಿಜಯಪುರ,ಡಿ.7:2022ನೇ ಸಾಲಿನಲ್ಲಿ ಜಿಲ್ಲೆಗೆ ನಿಗದಿಪಡಿಸಿದ ಗುರಿಗಿಂತ ಅತಿ ಹೆಚ್ಚು ಸಶಸ್ತ್ರ ಪಡೆಗಳ ಧ್ವಜ ನಿಧಿ ಸಂಗ್ರಹ ಮಾಡಿದ ಹೆಗ್ಗಳಿಕೆಗೆ ವಿಜಯಪುರ ಜಿಲ್ಲೆಯು ಪ್ರಶಸ್ತಿಗೆ ಭಾಜನವಾಗಿದ್ದು, ಸಶಸ್ತ್ರ ಪಡೆಗಳ ದ್ವಜ ದಿನಾಚರಣೆ ಅಂಗವಾಗಿ ಬೆಂಗಳೂರಿನ ರಾಜಭವನದಲ್ಲಿ ಡಿಸೆಂಬರ್ 7ರಂದು ನಡೆದ ಸಮಾರಂಭದಲ್ಲಿ ಆಹಾರ ಇಲಾಖೆಯ ಉಪ ನಿರ್ದೇಶಕರೂ ಆದ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರೂ ಆದ ವಿನಯಕುಮಾರ ಪಾಟೀಲ ಅವರು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.ಕಳೆದ ವರ್ಷವೂ ಕೂಡಾ ವಿಜಯಪುರ ಜಿಲ್ಲೆಗೆ…

Read More

ವಿಜಯಪುರದಲ್ಲಿ ಚಳಿ ಲೆಕ್ಕಿಸದೇ ಓಡಿದ ಓಟಗಾರರು….!

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 7 :ಮೈ ಕೊರೆವ ಚಳಿ ಲೆಕ್ಕಿಸದೇ ನೂರಾರು ಓಟಗಾರರು ವಿಜಯಪುರದ ಪ್ರಮುಖ ಬೀದಿಗಳಲ್ಲಿ ಭಾನುವಾರ ಬೆಳ್ಳಂಬೆಳಗ್ಗೆಓಡುವ ಮೂಲಕ ಜನರಲ್ಲಿ ಪರಿಸರ ಜಾಗೃತಿ ಮೂಡಿಸಿದರು.ಪರಿಸರ ರಕ್ಷಣೆಯ ಧ್ಯೇಯದೊಂದಿಗೆ ನಡೆದ ಮ್ಯಾರಾಥಾನ್ ಯಶಸ್ವಿಯಾಗಿ ನಡೆಯಿತು.ಡಾ.ಬಿ.ಆರ್. ಅಂಬೇಡ್ಕರ ಜಿಲ್ಲಾ ಕ್ರೀಡಾಂಗಣದಿಂದ ಆರಂಭಗೊಂಡ ಮ್ಯಾರಾಥಾನ್‌ನಲ್ಲಿ ಪರಿಸರ ರಕ್ಷಣೆಯ ಕಾಳಜಿಯ ರಣ ಕಹಳೆ ಮೊಳಗಿತು.ಎಲ್ಲೆಡೆ ಹಳದಿ ವರ್ಣದ ಟೀ-ಶರ್ಟ್ ಧರಿಸಿ ಉತ್ಸಾಹದಿಂದ ಓಟದಲ್ಲಿ ಪಾಲ್ಗೊಂಡ ಯುವಕರ, ಹಿರಿಯ ದಂಡು ಕಂಡು ಬಂದಿತು. ಓಡು…ಓಡು….ಪರಿಸರಕ್ಕಾಗಿ ಓಡು ಎಂಬ ದಿವ್ಯ ಸಂದೇಶದೊಂದಿಗೆ…

Read More

ಮಹಿಳಾ ವಿವಿಯಲ್ಲಿ “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ವಿಭಾಗ ಹಾಗೂ ಯು.ಜಿ ಬ್ಲಾಕ್ ವತಿಯಿಂದ ಪ್ರಧಾನ ಮಂತ್ರಿ ಉಚ್ಚತರ ಶಿಕ್ಷಣ ಅಭಿಯಾನ, ಕೇಂದ್ರ ಸರ್ಕಾರದ ಉನ್ನತ ಶಿಕ್ಷಣ ಸಚಿವಾಲಯ, ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಸಹಯೋಗದಿಂದ ಇದೇ ಡಿ. ೫ ರಂದು “ಡಿಜಿಟಲ್ ಸುರಕ್ಷತೆ” ಮತ್ತು “ಸೈಬರ್ ಜಾಗೃತಿ” ಕುರಿತು ಒಂದು ದಿನದ ಉಚಿತ ತರಬೇತಿ ಕಾರ್ಯಾಗಾರವನ್ನು ಕನ್ನಡ ಸಭಾಭವನದಲ್ಲಿ ಆಯೋಜಿಸಲಾಗಿದೆ.ಮಹಿಳಾ…

Read More

ವೃಕ್ಷಥಾನ್ ಹೆರಿಟೇಜ್ ರನ್: ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ -2025 ಗೆ ವಿಜಯಪುರ ಹೊಟೇಲ್ ಅಸೋಸಿಯೇಶನ್ ರೂ.1.50 ಲಕ್ಷ ದೇಣಿಗೆ ನೀಡಿದ್ದಾರೆ.ಗುರುವಾರ ನಗರದಲ್ಲಿ ರನ್ ಕಮಿಟಿಯ ಪದಾಧಿಕಾರಿಗಳನ್ನು ಭೇಟಿಯಾದ ಅಸೋಸಿಯೇಶನ್ ಅಧ್ಯಕ್ಷ ಚಂದ್ರಕಾಂತ ಶೆಟ್ಟಿ, ಮಾಜಿ ಉಪಮೇಯರ ದಿನೇಶ ಹಳ್ಳಿ, ನಾಗರಾಜ ಇಜೇರಿ, ರವಿ ಗಚ್ಚಿನಕಟ್ಟಿ, ಶುಭಂ ಶಿಂಧೆ, ಸಿದ್ದು ಚಿಕ್ಕೊಡಿ ಹಾಗೂ ವಿ.ಎಂ.ಗೌಡರ ದೇಣಿಗೆ ಚೆಕ್ ನೀಡಿದರು.ಈ ಸಂದರ್ಭದಲ್ಲಿ ರನ್ ಕಮಿಟಿಯ ಸಂತೋಷ ಔರಸಂಗ, ವೀರೇಂದ್ರ ಗುಚ್ಚಟ್ಟಿ,…

Read More

ವೃಕ್ಷಥಾನ್ ಹೆರಿಟೇಜ್ ರನ್: ರೂಟ್ ಮ್ಯಾಪ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 4: ನಗರದಲ್ಲಿ ಡಿಸೆಂಬರ್ 7 ರಂದು ರವಿವಾರ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಓಟದಲ್ಲಿ ಪಾಲ್ಗೋಳ್ಳಲಿರುವ ಕ್ರೀಡಾಪಟುಗಳು ಓಡಲಿರುವ ಮಾರ್ಗ ಮತ್ತು ಓಟ ಪ್ರಾರಂಭವಾಗಲಿರುವ ಸ್ಥಳ, ಸಮಯ ಮತ್ತಿತರ ಮಾಹಿತಿಯನ್ನು ರನ್ ಕೋರ್ ಕಮಿಟಿ ಪ್ರಕಟಿಸಿದೆ. ಬೆಳಿಗ್ಗೆ 5.30 ರಿಂದಲೇ ನಗರದಲ್ಲಿ ಓಟ ನಡೆಯುವ ಮಾರ್ಗದಲ್ಲಿ ಝಿರೋ ಟ್ರಾಫಿಕ್ ವ್ಯವಸ್ಥೆ ಇರುವುದರಿಂದ ಎಲ್ಲ ವಿಭಾಗಗಳ ಕ್ರೀಡಾಪಟುಗಳು ನಸುಕಿನ ಜಾವ 5.30 ಗಂಟೆಯೊಳಗೆ ಕ್ರೀಡಾಂಗಣಕ್ಕೆ ಆಗಮಿಸಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ. ಒಟ್ಟು…

Read More

ಬಿ. ಎಲ್. ಡಿ. ಇ. ಎಫ್. ಎಂ ರೆಡಿಯೋ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 3: ಶಿಕ್ಷಣ, ಆರೋಗ್ಯ, ಸಮಾಜ ಸೇವೆಯ ಮೂಲಕ ಮನೆಮಾತಾಗಿರುವ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಸಂಸ್ಥೆ ಇದೀಗ ಮಾಧ್ಯಮ ಕ್ಷೇತ್ರಕ್ಕೂ ಮುಂದಡಿ ಇಟ್ಟಿದೆ. ಜಿಲ್ಲೆಯ ಜನರಿಗೆ ಎಫ್. ಎಂ. ರೇಡಿಯೂ ಮೂಲಕ ಮತ್ತಷ್ಟು ಹತ್ತಿರವಾಗಲು ಸಂಸ್ಥೆ ಈಗ ಬಿ.ಎಲ್.ಡಿ.ಇ ಧ್ವನಿ 98.6 ಎಫ್‌.ಎಂ ಸಮುದಾಯ ರೇಡಿಯೋ ಕೇಂದ್ರ ಪ್ರಾರಂಭಿಸಿದೆ.ರೈತರು, ಮಹಿಳೆಯರು, ಯುವಕರು ಹಾಗೂ ಸಮಾಜದ ನಾನಾ ಸ್ತರದ ಜನರನ್ನು ಕೇಂದ್ರೀಕರಿಸಿ ಅನೇಕ ಕಾರ್ಯಕ್ರಮಗಳನ್ನೂ ಈ ಬಾನುಲಿ ಕೇಂದ್ರ ಸಿದ್ಧಪಡಿಸಿದ್ದು, ಇದೇ ಡಿಸೆಂಬರ್ 7…

Read More

ವಿಜಯಪುರದಲ್ಲಿ ಡಿ. 6ರಂದು ಬೃಹತ್ ಕ್ಯಾಂಡಲ್ ಮಾರ್ಚ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ್ ಅಜಮನಿ ಹಾಗೂ ಮಾದೇಶ ಚಲವಾದಿ ಮಂಗಳವಾರ ಕಾರ್ಯಕ್ರಮದ ಪೋಸ್ಟರ್‌ನ್ನು ಬಿಡುಗಡೆ…

Read More

ಡಿ.೪, ೫ರಂದು ಎರಡು ದಿನಗಳ ಕಾಲಶ್ರೀ ದತ್ತ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2:ನಗರದ ಬಸ್ ನಿಲ್ದಾಣದ ಬಳಿ ಇರುವ ಪುರಾತನ ಶ್ರೀ ನರಸಿಂಹ ದೇವಾಲಯದಲ್ಲಿ ಡಿ.೪ ಹಾಗೂ ೫ ರಂದು ಎರಡು ದಿನಗಳ ಕಾಲ ಶ್ರೀ ದತ್ತ ಜಯಂತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಶ್ರೀ ದತ್ತ ಜಯಂತಿ ಉತ್ಸವ ಮಂಡಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಂಡಳ, ಡಿ.೪ ರಂದು ಬೆಳಿಗ್ಗೆ ಶ್ರೀ ಗುರುಚರಿತ್ರ ಪಾರಾಯಣ ನಡೆಯಲಿದ್ದು, ಸಂಜೆ ೪-೩೦ಕ್ಕೆ ಶ್ರೀ ಉಮೇಶ ಉಪಾಧ್ಯಾಯ ಇವರಿಂದ ಕೀರ್ತನ ಸೇವೆ, ಸಂಜೆ…

Read More

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡಿ- ಸಾವುಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 29:ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ನೀಡಬೇಕು ಎಂದು ಬಳ್ಳೊಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಸಿ. ಸಾವುಕಾರ ಅವರು ಮುಖ್ಯಮಂತ್ರಿ ಹಾಗೂ ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಯಶವಂತರಾಯಗೌಡ ಅವರುಒಬ್ಬ ಜಾತ್ಯಾತೀತ ನಾಯಕರಾಗಿದ್ದು, ಎಲ್ಲ ಸಮುದಾಯದವರ ಪ್ರೀತಿಗೆ ಪಾತ್ರರಾಗಿದ್ದಾರೆ. ಮತಕ್ಷೇತ್ರದಲ್ಲಿ ಅವರ ಅಧಿಕಾರಾವಧಿಯಲ್ಲಿ ಒಳ್ಳೆಯ ಅಭಿವೃದ್ಧಿ ಕಾರ್ಯಗಳು ನಡೆದಿರುತ್ತವೆ. ಇವರೊಬ್ಬ ತಳಮಟ್ಟದ ಹಾಗೂ ಸಜ್ಜನ ರಾಜಕಾರಣಿಯಾಗಿದ್ದು, ಅಂದರೆ ಮೂರು ಬಾರಿ…

Read More

ವೃಕ್ಷಥಾನ್ ಹೆರಿಟೇಜ್ ರನ್: ವಿದ್ಯಾರ್ಥಿಗಳಿಗೆ ನಿಬಂಧ ಸ್ಪರ್ಧೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 23: ಡಿಸೆಂಬರ್ 7 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ಅಂಗವಾಗಿ ಆಯೋಜಿಸಲಾಗಿದ್ದ ನಿಬಂಧ ಸ್ಪರ್ಧೆಗೆ ವಿದ್ಯಾರ್ಥಿಗಳಿಂದ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇಂದು ರವಿವಾರ ಬೆಳಿಗ್ಗೆ ಗಗನ್ ಮಹಲ್ದಲ್ಲಿ ನಿಬಂಧ ಸ್ಪರ್ಧೆಯಲ್ಲಿ 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೋಂಡು ಗಮನ ಸೆಳೆದಿದ್ದಾರೆ. ಕಳೆದ ವಾರ ನಗರದ ಪ್ರಾಚೀನ ಸ್ಮಾರಕಗಳನ್ನು ಕುಂಚದ ಮೂಲಕ ಬಿಡಿಸಿದ್ದ ಮಕ್ಕಳು ಇಂದು ಕಳೆದ ಒಂದು ದಶಕದಲ್ಲಿ ಬಸವನಾಡಿನ ಪರಿಸರದಲ್ಲಿ ಆಗಿರುವ ಅಮೂಲಾಗ್ರ ಬದಲಾವಣೆಯ ಕುರಿತು ನಿಬಂಧ ಬರೆಯುವ…

Read More