
ರಾಣಿ ಚೆನ್ನಮ್ಮ ವಿಜಯೋತ್ಸವ ರಥ ಯಾತ್ರೆಗೆ ಅದ್ಧೂರಿ ಸ್ವಾಗತ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 22:ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಅವರ 200 ನೇ ವಿಜಯೋತ್ಸವ ಹಾಗೂ ರಾಣಿ ಅಬ್ಬಕ್ಕ ಅವರ 500 ನೇ ಜಯಂತೋತ್ಸವ ಶ್ರದ್ದೆ, ಭಕ್ತಿಯಿಂದ ಆಚರಿಸಲಾಯಿತು.ಇದರ ಅಂಗವಾಗಿ ಹಮ್ಮಿಕೊಂಡಿದ್ದ ರಥಯಾತ್ರೆಯ ನಗರಕ್ಕೆ ಆಗಮಿಸಿದಾಗ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗ ಮಂದಿರದವರೆಗೆ ಹಮ್ಮಿಕೊಂಡಿದ್ದ ಶೋಭಾಯಾತ್ರೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ “ಭಾರತ ಮಾತ ಕೀ ಜೈ”, “ಕಿತ್ತೂರು ರಾಣಿ ಚೆನ್ನಮ್ಮಗೆ ಜೈ “, “ರಾಣಿ ಅಬ್ಬಕ್ಕ ಅವರಿಗೆ ಜೈ…