ಸಂಸದ ರಮೇಶ ಜಿಗಜಿಣಗಿ ವಿರುದ್ಧ ಸುಳ್ಳು ಆರೋಪ ಬೇಡ: ವಿವೇಕಾನಂದ ಡಬ್ಬಿ
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಸಾತ್ವಿಕ ರಾಜಕಾರಣಕ್ಕೆ ಹೆಸರಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವ ಪ್ರಯತ್ನವನ್ನು ವಿರೋಧಿಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ಧಿಗೆ ಲಕ್ಷ ಕೋಟಿ ರೂ.ಗೂ ಅಧಿಕ ಅನುದಾನ ತಂದು ರೈಲ್ವೆ ಓವರ್‌ಬ್ರಿಡ್ಜ್, ವಿಮಾನ ನಿಲ್ದಾಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ವಿಜಯಪುರ–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ…


