ಕರಡು ಮತದಾರರ ಪಟ್ಟಿ ಪ್ರಕಟ. ಹೆಸರು ಪರಿಶೀಲಿಸಿಕೊಳ್ಳಿ; ಸೆ.23ರೊಳಗೆ ಹಕ್ಕು-ಆಕ್ಷೇಪಣೆ ಸಲ್ಲಿಸಿ. ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ
ಸಪ್ತಸಾಗರ ವಾರ್ತೆ,ವಿಜಯಪುರ, ಸೆ.1: ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಅಡಿಯಲ್ಲಿ ಪ್ರಕಟಿಸಿರುವ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇರುವುದನ್ನು ಜಿಲ್ಲೆಯ ಪ್ರತಿಯೊಬ್ಬ ಮತದಾರರು ಪರಿಶೀಲಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಮನವಿ ಮಾಡಿದ್ದಾರೆ.ಚುನಾವಣಾ ಆಯೋಗದ ನಿರ್ದೇಶನದಂತೆ ಆ.24ರಂದು ಜಿಲ್ಲೆಯ ಎಲ್ಲ ತಹಶೀಲ್ದಾರರ ಕಚೇರಿ ಹಾಗೂ ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಅಲ್ಲದೆ, ಆಯಾ ಮತಕ್ಷೇತ್ರಗಳ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳ ಬಳಿಯೂ ಪಟ್ಟಿ ಲಭ್ಯವಿದ್ದು, ಮತದಾರರು ಪರಿಶೀಲಿಸಬಹುದಾಗಿದೆ.ಕರಡು ಪಟ್ಟಿಯಲ್ಲಿ ಅರ್ಹ…


