ಬರ ಘೋಷಣೆಗೆ ಜೆಡಿಎಸ್ ಒತ್ತಾಯ:ರೈತರ ಸಾಲಮನ್ನಾ, ಕಾಲುವೆಗಳಿಗೆ ನೀರು ಹರಿಸದಿದ್ದರೆ ಹೋರಾಟದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 8:ಮಳೆ ಕೈಕೊಟ್ಟು ಮುಂಗಾರು ಬೆಳೆ ಸಂಪೂರ್ಣ ನೆಲಕಚ್ಚಿರುವ ಬೆನ್ನಲ್ಲೇ ವಿಜಯಪುರ ಜಿಲ್ಲೆಯಲ್ಲಿ ರೈತರ ಸಂಕಷ್ಟ ತೀವ್ರಗೊಂಡಿದೆ. ಕೂಡಲೇ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ ರೈತರ ಸಾಲ ಮನ್ನಾ ಮಾಡಬೇಕು, ಜಾನುವಾರುಗಳಿಗೆ ಮೇವು ಒದಗಿಸಬೇಕು ಹಾಗೂ ಆಲಮಟ್ಟಿ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಡಿಗೇರಿ ಸರ್ಕಾರವನ್ನು ಒತ್ತಾಯಿಸಿದರು.ನಗರದ ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷದ ಮುಖಂಡರು ಹಾಗೂ ತಾಲೂಕು ವೀಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, “ರೈತರು ಸಂಕಷ್ಟದಲ್ಲಿರುವಾಗ…

Read More

ಬುರಣಾಪುರದ 5 ಎಕರೆ ಜಮೀನಿನಲ್ಲಿ ನೀರು, ವಿದ್ಯುತ್, ಹಕ್ಕುಪತ್ರ ಸೇರಿ ಮೂಲಸೌಕರ್ಯ ಕಲ್ಪಿಸಲು ಆಗ್ರಹಿಸಿ ಸ್ವರಾಜ್ಯ ಸೇನೆ ಡಿಸಿಗೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 28:ನಗರದ ಖಾಜಾ ನಗರ ಹಾಗೂ ಟಿಪ್ಪು ನಗರದ ಕೊಳಚೆ ಪ್ರದೇಶದ ನಿವಾಸಿಗಳ ಪುನರ್ವಸತಿಗಾಗಿ ಬುರಣಾಪುರ ಗ್ರಾಮದ ಸರ್ವೆ ನಂ. 67/1ರಲ್ಲಿ 5 ಎಕರೆ ಜಮೀನನ್ನು ಮಂಜೂರು ಮಾಡಿರುವ ಜಿಲ್ಲಾಡಳಿತದ ಕ್ರಮವನ್ನು ದಲಿತ ಸ್ವರಾಜ್ಯ ಸೇನೆ–ಕರ್ನಾಟಕ ಸಂಘಟನೆ ಸ್ವಾಗತಿಸಿದೆ.ಆದರೆ, ಜಮೀನು ಮಂಜೂರಾದರೂ ಪುನರ್ವಸತಿ ಕಾಮಗಾರಿ ವಿಳಂಬವಾಗದಂತೆ ತಕ್ಷಣವೇ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಿ ಸ್ಥಳಾಂತರ ಪ್ರಕ್ರಿಯೆಗೆ ಚಾಲನೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ.ಮನವಿಯಲ್ಲಿ, ಪುನರ್ವಸತಿ ಪ್ರದೇಶದಲ್ಲಿ ನಿವಾಸಿಗಳು ಕೂಡಲೇ ನೆಲೆಸಲು ಅಗತ್ಯವಾದ ಕುಡಿಯುವ ನೀರು, ವಿದ್ಯುತ್,…

Read More

ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಆದ್ಯತೆ: ಜಲ ಜೀವನ ಮಿಷನ್ ಕಾಮಗಾರಿ ಡಿಸೆಂಬರ್ ಒಳಗೆ ಪೂರ್ಣಗೊಳಿಸಲು ಜಿಪಂ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜುಲೈ 18:ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು, ಸಮಸ್ಯೆ ಇರುವ ಗ್ರಾಮಗಳಿಗೆ ಅಗತ್ಯವಿದ್ದರೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮುಂದಿನ 2–3 ತಿಂಗಳು ಮಳೆಯ ಅಭಾವ ಇರುವ ಸಾಧ್ಯತೆ ಇರುವುದರಿಂದ…

Read More

ಅನಗತ್ಯ ನೀರು ಪೋಲು ಮಾಡಿದರೆ 2 ಸಾವಿರ ರೂ. ದಂಡ: ಅನಧಿಕೃತ ಸಂಪರ್ಕ ಹೊಂದಿದ್ದರೆ 5 ಸಾವಿರ ರೂ. ದಂಡ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 4: ಅನವಶ್ಯಕವಾಗಿ ಕುಡಿಯುವ ನೀರು ಪೋಲು ಮಾಡುವರಿಗೆ 2 ಸಾವಿರ ರೂ. ಹಾಗೂ ಅನಧಿಕೃತ ನಳ ಸಂಪರ್ಕ ಪಡೆದುಕೊಳ್ಳುವ ಹಾಗೂ ಪಡೆದುಕೊಂಡವರಿಗೆ ಹೊಸ ನಳದ ಶುಲ್ಕದ ಜೊತೆಗೆ ಹೆಚ್ಚುವರಿ 5 ಸಾವಿರ ರೂ. ದಂಡ ವಿಧಿಸಲಾಗುವುದು ಕರ್ನಾಟಕ ನಗರ ನೀರು‌ ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.ನಗರದ ವಿವಿಧ ವಲಯ, ವಾರ್ಡಗಳಲ್ಲಿ ಪೂರೈಕೆಯಾಗುವ ನೀರನ್ನು ಕುಡಿಯುವ ಸಲುವಾಗಿ ಮಾತ್ರ ಪರಿಗಣಿಸಿ ನೀರಿನ ಪ್ರಮಾಣವನ್ನು ಅಂದಾಜಿಸಲಾಗಿರುತ್ತದೆ.ದಿನಂಪ್ರತಿ ಪ್ರತಿಯೊಬ್ಬರಿಗೆ ತಲಾ 135…

Read More

ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಪ್ರಭಾವದ ಭೀತಿಯಲ್ಲಿ ಜನರು

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 24:ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ನದಿ ದಂಡೆ ಗ್ರಾಮಗಳ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ನದಿ ದಂಡೆ ಗ್ರಾಮದ ಜನತೆಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ.ಕರ್ನಾಟಕ, ಮಹಾರಾಷ್ಟ ಸರ್ಕಾರಗಳುಭೀಮಾ ನದಿಗೆ ಅಡ್ಡಲಾಗಿ ಸಮಾನಾಂತರವಾಗಿ ನಿರ್ಮಾಣ…

Read More

ಧಾರಾಕಾರ ಮಳೆ: ಮನೆ ಕುಸಿದು ಮೂವರಿಗೆ ಗಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಜಿಲ್ಲೆಯಲ್ಲಿ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದಲ್ಲಿ ಮನೆ ಕುಸಿದು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.ಮಲ್ಲವ್ವ ರುದ್ರಪ್ಪ ಗುಂಡುಪಲ್ಲೆ, ರುದ್ರಪ್ಪ ತಮ್ಮಣ್ಣ ಗುಂಡುಪಲ್ಲೆ ಹಾಗೂ ಶಾರದಾ ರುದ್ರಪ್ಪ ಗುಂಡುಪಲ್ಲೆ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಿರೇಮುರಾಳ ಗ್ರಾಮದಲ್ಲಿ ಸುಮಾರು ರಾತ್ರಿ 12-30 ಗಂಟೆ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಜನರ ಮೇಲೆ ಮನೆ ಕುಸಿದಿದೆ. ಮೂವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ಜಮೀನುಗಳಿಗೆ ನೀರು, ಐತಿಹಾಸಿಕ ಕೆರೆಗಳಿಗೆ ಮರುಜೀವ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನೀರಾವರಿ ಯೋಜನೆಗಳಿಂದ ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಅಸಾಧ್ಯವಾದ ಕೆಲಸವನ್ನು…

Read More