ಆಸ್ಪತ್ರೆ ಸಿಬ್ಬಂದಿ ದಿವ್ಯ ನಿರ್ಲಕ್ಷ್ಯ: ಆಸ್ಪತ್ರೆ ಆವರಣದಲ್ಲಿಯೇ ಗರ್ಭಿಣಿ ಹೆರಿಗೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 15:ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷದಿಂದ ಗರ್ಭಿಣಿ ಮಹಿಳೆಯೊಬ್ಬಳಿಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲೇ ಹೆರಿಗೆ ಆಗಿರುವ ಘಟನೆ ನಡೆದಿದೆ.ಬಸವನ ಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದ ಕಾವೇರಿ ಎಂಬುವರು ಆಸ್ಪತ್ರೆ ಆವರಣದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳದಿಂದ ವಿಜಯಪುರ ಜಿಲ್ಲಾಸ್ಪತ್ರೆ ಆವರಣಕ್ಕೆ ಗರ್ಭಿಣಿಯನ್ನು ಕರೆ ತಂದರೂ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿಗಳ ನಿರ್ಲಕ್ಷ್ಯದಿಂದಾಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗದೆ ಹೊರ ಆವರಣದಲ್ಲಿಯೇ ಹೆರಿಗೆ ಆಗಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.ಜಿಲ್ಲಾ ಆಸ್ಪತ್ರೆ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡು…

Read More

ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮಹಿಳಾ ವಿವಿ ಕಟ್ಟಿಬದ್ಧ : ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2: ವಿದ್ಯಾರ್ಥಿನಿಯರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ವ್ಯಕ್ತಿತ್ವದ ಬೆಳವಣಿಗೆಗೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕಟಿಬದ್ಧವಾಗಿದೆ ಎಂದು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಭರವಸೆ ನೀಡಿದರು.ಇಲ್ಲಿಯ ಮಹಿಳಾ ವಿವಿಯ ಆವರಣದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸ್ನಾತಕೋತ್ತರ ತರಗತಿಗಳ ಪ್ರವೇಶಾತಿ ಕೌನ್ಸಿಲಿಂಗ್ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿನಿಯರ ಜ್ಞಾನಾರ್ಜನೆಗೆ ಬೇಕಾದ ಎಲ್ಲ ಬಗೆಯ ಅವಕಾಶಗಳನ್ನು ಮಹಿಳಾ ವಿವಿ ಸೃಷ್ಟಿಸುತ್ತದೆ ಎಂದರು.ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅತ್ಯಾಧುನಿಕ ಬೋಧನಾ ತಂತ್ರಗಳು- ಸ್ಮಾರ್ಟಬೋರ್ಡ್ ಮತ್ತು ಡಿಜಿಟಲ್…

Read More

ಮಹಿಳೆಯರ ಮೇಲೆ ನಿಲ್ಲದ ದೌರ್ಜನ್ಯ: ಕುಲಪತಿ ವಿಜಯಾ ಕಳವಳ

ಸಪ್ತಸಾಗರ ವಾರ್ತೆ, ವಿಜಯಪುರ, ಆ23:“ಸ್ತ್ರೀಯರನ್ನು ದೇವಿಯೆಂದು ಪೂಜಿಸುವ ನಾಡಿನಲ್ಲಿ ಮಹಿಳೆಯರ ಮೇಲೆ ಪ್ರತಿದಿನವೂ ದೌರ್ಜನ್ಯ ನಡೆಯುತ್ತಿರುವುದು ದುರಂತ ಮತ್ತು ವಿಪರ‍್ಯಾಸ. ಕಾನೂನು ದೌರ್ಜನ್ಯವನ್ನು ಅಪರಾಧವೆಂದು ಘೋಷಿಸಿದರೂ, ಸಮಾಜದಲ್ಲಿ ಮಹಿಳೆಯ ಸುರಕ್ಷತೆ ಇನ್ನೂ ದೊಡ್ಡ ಪ್ರಶ್ನೆಯಾಗಿದೆ” ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ವಿಜಯಾ ಬಿ. ಕೋರಿಶೆಟ್ಟಿ ವಿಷಾದ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನೆ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಮಹಿಳೆಯರ ಮೇಲಿನ ಹೆಚ್ಚುತ್ತಿರುವ ದೌರ್ಜನ್ಯವನ್ನು ಖಂಡಿಸಿ ವಿಶ್ವವಿದ್ಯಾಲಯ ಆವರಣದಲ್ಲಿ…

Read More

ಕಲ್ಬುರ್ಗಿ ವಲಯ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿ: ಬಿ ಎಲ್ ಡಿ ಇ ಆಯುರ್ವೇದ ಕಾಲೇಜಿನ ಮಹಿಳಾ ತಂಡಕ್ಕೆ ಪ್ರಥಮ ಸ್ಥಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 5: ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್‌ ಆಯುರ್ವೇದ ಕಾಲೇಜಿನ‌ ಮಹಿಳಾ ತಂಡ ರಾಜೀವ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ‌ ಆಯೋಜಿಸಿದ್ದ ಕಲಬುರಗಿ ವಲಯ‌ ಮಟ್ಟದ ಮಹಿಳಾ ಚೆಸ್ ಪಂದ್ಯಾವಳಿಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.ರಾಯಚೂರಿನ ನವೋದಯ ಡೆಂಟಲ್ ಕಾಲೇಜಿನಲ್ಲಿ ಆಗಷ್ಟ 1 ಮತ್ತು 2 ರಂದು ನಡೆದ ಈ ಪಂದ್ಯಾವಳಿಯಲ್ಲಿ ಬಿ.ಎಲ್.ಡಿ.ಇ‌ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಾದ ದೀಪ್ತಿ ಮಂಗಲಗಿ, ಗೀತಾಂಜಲಿ ಮುದ್ನೂರ, ಸಾನಿಕಾ ದೇಶಪಾಂಡೆ, ಅನುರಾಧಾ ರೆಡ್ಡಿ ಮತ್ತು ಪೂಜಾ ಬಿರಾಜದಾರ ಅವರನ್ನೊಳಗೊಂಡ ತಂಡ…

Read More

ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More

ಡಿವಿಪಿ ಹೋರಾಟದ ಫಲಶೃತಿ : ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1 : ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್ ನ ಹೋರಾಟದ ಫಲವಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಆರಂಭವಾಗಿದ್ದು ಸಂತೋಷದ ಸಂಗತಿಯಾಗಿದೆ ಎಂದು ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹರ್ಷ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾಲಯದ ಅವರಣದ ನೂತನವಾಗಿ ಆರಂಭವಾದ ಎಸ್‌ಸಿ, ಎಸ್‌ಟಿ ಮಹಿಳಾ ವಸತಿ ನಿಲಯಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಹಿಳಾ ವಸತಿ ನಿಲಯಕ್ಕಾಗಿ…

Read More