ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯತ್ನಾಳರಿಂದ ಭೂಮಿಪೂಜೆ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 19:ನಗರದಲ್ಲಿ ಸೋಮವಾರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ, ಸಾರ್ವಜನಿಕರ ಅಹವಾಲು ಆಲಿಸಿದರು.ನಗರದ ವಾರ್ಡ್ ನಂ.33 ರಲ್ಲಿ ಬರುವ ಶಹಾಪೇಟೆ ಲೇಔಟ್ ದಲ್ಲಿ 2025-26ನೇ ಸಾಲಿನ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಮಂಜೂರಿಸಲಾದ ರೂ.10 ಲಕ್ಷ ಅನುದಾನದಲ್ಲಿ ವಿಜಯಲಕ್ಷ್ಮೀ ಸರ್ವೋತ್ತಮ ದೇಶಪಾಂಡೆ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಬನಶಂಕರಿ ದೇವಸ್ಥಾನದ ಆವರಣದಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ…


