
ಆ. 24ರಂದು ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆ ಕುರಿತು ಕಾರ್ಯಗಾರ, ಪೋಸ್ಟರ್ ಬಿಡುಗಡೆ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 18: ಜಿಲ್ಲೆಯಲ್ಲಿ ಸರಕಾರಿ ಉದ್ಯೋಗದ ಅಭಿಲಾಷೆಯಿಂದ ಓದುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಉದ್ದೇಶದಿಂದ ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಹೇಗೆ ? ಎಂಬ ಒಂದು ದಿನದ ಕಾರ್ಯಾಗಾರವನ್ನು ಆ. 24ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ ಅವರು ಕಾರ್ಯಗಾರದ ಪೋಸ್ಟರ್ ಬಿಡುಗಡೆ ಮಾಡಿದರು.ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಅವರು ಮಾತನಾಡಿ,…