ಸಚಿವ ಸ್ಥಾನ ಕೈತಪ್ಪಿದ ಬೇಸರ; ಜನರ ಒತ್ತಾಯಕ್ಕೆ ಮಣಿದು ರಾಜೀನಾಮೆ ವಾಪಸ್: ಯಶವಂತರಾಯಗೌಡ ಪಾಟೀಲ್
ಸಪ್ತಸಾಗರ ವಾರ್ತೆ,ವಿಜಯಪುರ, ಆ.6: ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ್, ಬೆಂಬಲಿಗರು, ಹಿತೈಷಿಗಳು ಹಾಗೂ ಕ್ಷೇತ್ರದ ಜನರ ಒತ್ತಾಯದ ಮೇರೆಗೆ ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವುದಾಗಿ ಸ್ಪಷ್ಟಪಡಿಸಿದರು.ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “2023ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್‌ಗೆ ಜನರು ಬಹುಮತ ನೀಡಿದ್ದರು. ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಉತ್ತಮ ಆಡಳಿತ ನೀಡಿದೆ. ಆದರೆ ಸಚಿವ ಸಂಪುಟ ವಿಸ್ತರಣೆಯ…


