ಪ್ರಗತಿ ಹಂತದ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ: ಜಿಪಂ ಉಪಕಾರ್ಯದರ್ಶಿ ಪ್ರಕಾಶ ಅಧಿಕಾರಿಗಳಿಗೆ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 15 :ಜಿಲ್ಲೆಯ ತಿಕೋಟಾ, ಬಬಲೇಶ್ವರ ಹಾಗೂ ವಿಜಯಪುರ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಆವರು ರಸ್ತೆ ಕಾಮಗಾರಿ ಹಾಗೂ ಬ್ರಿಡ್ಜ್ ಕಾಮಗಾರಿ ಪರಿಶೀಲಿಸಿದರು.ತಿಕೋಟಾ ತಾಲೂಕಿನ ಹರನಾಳ ಗ್ರಾಮದ ಪೂರ್ಣಗೊಂಡಿರುವ ಡೋಣಿ ನದಿಯ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲನೆ ನಡೆಸಿದರು. ಬಳಿಕ ಬಬಲೇಶ್ವರ ತಾಲೂಕಿನ ಸಾರವಾಡ ಹಾಗೂ ಹೊನಗನಹಳ್ಳಿ ಗ್ರಾಮದ ವ್ಯಾಪ್ತಿಯ ಸೇತುವೆ, ವಿಜಯಪುರ ತಾಲೂಕು ವ್ಯಾಪ್ತಿಯ ಹಿಟ್ಟಿನಹಳ್ಳಿ ಗ್ರಾಮದ ಹತ್ತಿರ ಇರುವ ಸೇತುವೆಗಳ ಹೂಳು…


