
ವಿಜಯಪುರ ಜ್ಞಾನ ಯೋಗಾಶ್ರಮದಲ್ಲಿ ಗುರು ಪೌರ್ಣಿಮೆ
ಸಪ್ತಸಾಗರ ವಾರ್ತೆ ವಿಜಯಪುರ, ಜು. 10: ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ನಗರದ ಜ್ಞಾನ ಯೋಗಾಶ್ರಮದಲ್ಲಿ ಗುರುವಾರ ಗುರು ಪೂರ್ಣಿಮೆಯನ್ನು ಶ್ರದ್ಧೆ, ಭಕ್ತಿಯಿಂದ ಆಚರಿಸಲಾಯಿತು.ಆಶ್ರಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಆಯೋಜನೆ ಮಾಡಲಾಗಿತ್ತು. ನಸುಕಿನಲ್ಲಿಯೇ ಭಕ್ತರ ದಂಡು ಸಹಸ್ರಾರು ಸಂಖ್ಯೆಯಲ್ಲಿ ಆಶ್ರಮಕ್ಕೆ ಆಗಮಿಸಿ ನಡೆದಾಡುವ ದೇವರು ಸಿದ್ದೇಶ್ವರ ಸ್ವಾಮಿಗಳು ಹಾಗೂ ವೇದಾಂತ ಕೇಸರಿ ಮಲ್ಲಿಕಾರ್ಜುನ ಸ್ವಾಮಿಜೀಗಳನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದರು.ಇದೇ ವೇಳೆ ನಡೆದಾಡುವ ದೇವರು ಸಿದ್ದೇಶ್ವರ ಶ್ರೀಗಳನ್ನು ಸ್ಮರಿಸಿದ ಭಕ್ತರು, ಕೋಟಿ ಜಪಯಜ್ಞದಲ್ಲಿ ಭಾಗವಹಿಸಿ ಕೋಟಿ…