ಸಪ್ತಸಾಗರ ವಾರ್ತೆ, ವಿಜಯಪುರ,ನ.12:
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ,ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ನವೆಂಬರ್ 13 ಹಾಗೂ 14ರಂದು ಎರಡು ದಿನಗಳ “ಟೆಕ್ನಾಲಜಿ ಕ್ಲಿನಿಕ್ಸ್” – ಅರಿವು ಮೂಡಿಸುವ ಕಾರ್ಯಕ್ರಮವನ್ನು ಅಥಣಿ ರಸ್ತೆಯಲ್ಲಿರುವ ಹೊಟೇಲ್ “ಪ್ರವಾಸ” ದಲ್ಲಿ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 10-30ಕ್ಕೆ ಕಾರ್ಯಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಅಧ್ಯಕ್ಷ ಡಾ. ಕೆ.ಎಚ್.ಮುಂಬಾರೆಡ್ಡಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ ವಿ ಕೇರ್ ಸೊಸಾಯಿಟಿಯ ಅನಿತಾ ರಾವ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಸಿದ್ಧಯ್ಯ ಬಿ., ಎಸ್‍ಐಡಿಬಿಐ ಬ್ಯಾಂಕ್ ವ್ಯವಸ್ಥಾಪಕ ಅಮೀತ ಪಂಡಿತ್, ವಿಠ್ಠಲಗೌಡ ಬಿರಾದಾರ, ಸಿಡಾಕ್ ಜಂಟಿ ನಿರ್ದೇಶಕ ಸುಪ್ರೀತ್ ಬಳ್ಳಾರಿ, ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಂಗಾಧರ ದೇಸಾಯಿ ಅವರು ಭಾಗವಹಿಸಲಿದ್ದಾರೆ.
ಆಸಕ್ತ ಉದ್ದಿಮೆದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Editor
Rudrappa B Asangi
Editor
Managing Editor
Chetan Asangi
Managing Editor


