ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 27:
ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಬಂಗಾರಮ್ಮ ಸಜ್ಜನ ಕ್ಯಾಂಪಸ್‌ ನಲ್ಲಿ ಬಿ. ಎಂ. ಪಾಟೀಲ ಫೌಂಡೇಶನ್ ಫಾರ್ ಇನೊವೆಷನ್ ಆ್ಯಂಡ್ ಇನಕ್ಯೂಬೇಶನ್ ನ್ನು ಬೆಂಗಳೂರು ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭಾವ ಚರಮೂರ್ತಿ ಶಿವರುದ್ರ ಮಹಾಸ್ವಾಮಿ ರವಿವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಮಾತನಾಡಿ, ಇದು ಹೊಸ ಆವಿಷ್ಕಾರ ಮತ್ತು ಸ್ಟಾರ್ಟ್‌ಅಪ್ ಎಕೋಸಿಸ್ಟಮ್‌ಗೆ ಮೊದಲ ಮೈಲಿಗಲ್ಲು ಆಗಿದೆ ಎಂದು ಹೇಳಿದರು.
ಈ ಕೇಂದ್ರವು ನಾವೀನ್ಯತೆ, ಉದ್ಯಮಶೀಲತೆ ಮತ್ತು ಪ್ರಾದೇಶಿಕ ಅಭಿವೃದ್ಧಿಗೆ ನೂತನ ವೇದಿಕೆಯಾಗಲಿದೆ. ನೂರಾರು ಹೊಸ ಯುವ ಉದ್ಯಮಿಗಳ ಕನಸುಗಳನ್ನು ಸಾಕಾರಗೊಳಿಸಲು ಪೂರಕವಾಗಲಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ಫೌಂಡೇಶನ್ ನಿರ್ದೇಶಕ ಹಾಗೂ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಮಾತನಾಡಿ, ಈ ಕೇಂದ್ರವು ಮುಂದಿನ ದಿನಗಳಲ್ಲಿ ವಿಜ್ಞಾನ, ಆರೋಗ್ಯ, ಕೃಷಿ, ತಂತ್ರಜ್ಞಾನ ಮತ್ತು ಇತರ ಕ್ಷೇತ್ರಗಳಲ್ಲಿ ಹೊಸ ಕಂಪನಿಗಳ ಪ್ರಾರಂಭಕ್ಕೆ ಮತ್ತು ನಾವೀನ್ಯತೆಯ ತಂತ್ರಜ್ಞಾನ ಆಧಾರಿತ ಪ್ಲಾಟ್‌ಫಾರ್ಮ್ ಆಗಿ ಬೆಳೆಯಲಿದೆ ಎಂದು ವಿಶ್ವಾಸ ವ್ಯಕ್ಯಪಡಿಸಿದರು.
ಈ ಸಂದರ್ಭದಲ್ಲಿ ತಮಿಳುನಾಡಿನ ನಾಗಸಂದ್ರ ಜಂಗಮ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು, ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಎಂ. ಪಾಟೀಲ, ಸಮಕುಲಾಧಿಪತಿ ವೈ. ಎಂ. ಜಯರಾಜ, ಕುಲಪತಿ ಡಾ. ಅರುಣ ಇನಾಮದಾರ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಡಾ. ಮಹಾಂತೇಶ ಬಿರಾದಾರ, ಸಂಸ್ಥೆಯ ಪದಾಧಿಕಾರಿಗಳು, ಫೌಂಡಡಶನ್ ನ ಆಶೀಶ ಕುಲಕರ್ಣಿ, ಅಧಿಕಾರಿಗಳು, ಗಣ್ಯರು ಮುಂತಾದವರು ಉಪಸ್ಥಿತರಿದ್ದರು.

Share