ಸಪ್ತಸಾಗರ ವಾರ್ತೆ ವಿಜಯಪುರ, ಅ. 16:
ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ನಿಮಿತ್ತ ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಯು ಜಿಲ್ಲೆಗೆ ಬುಧವಾರ ವಿಜಯಪುರಕ್ಕೆ ಆಗಮಿಸಿದ ವಿಜಯ ಜ್ಯೋತಿ ಯಾತ್ರೆಯ ರಥಕ್ಕೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ. ಆನಂದ ಕೆ ಹಾಗೂ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಅವರು ಪೂಜೆ ಸಲ್ಲಿಸಿ ಕಿತ್ತೂರ ರಾಣಿ ಚನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ನೆರವೇರಿಸಿದರು.
ವೀರ ರಾಣಿ ಚನ್ನಮ್ಮ ಅವರ ಧೈರ್ಯ, ಶೌರ್ಯ ಮತ್ತು ಹೋರಾಟದ ಸ್ಫೂರ್ತಿಯನ್ನು ವಿಜಯ ಜ್ಯೋತಿ ಯಾತ್ರೆ ಮೂಲಕ ಜನರಿಗೆ ತಿಳಿಸಿಕೊಡುವುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ ಕೆ ಹೇಳಿದರು.
ವಿಜಯ ಜ್ಯೋತಿ ಯಾತ್ರೆಯ ಮೆರವಣಿಗೆಯು ವಿವಿಧ ಜಾನಪದ ಕಲಾ ತಂಡಗಳಿಂದ ಜಿಲ್ಲಾಧಿಕಾರಿ ಕಚೇರಿಯಿಂದ ಆರಂಭಗೊಂಡು ನಗರದ ವಿವಿಧ ಪ್ರಮುಖ ರಸ್ತೆಗಳಲ್ಲಿ ಸಾಗಿತು. ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರಕ್ಕೆ ಆಗಮಿಸಿದ ರಥ ಯಾತ್ರೆಯನ್ನು ಬೆಳಗಾವಿ ಜಿಲ್ಲೆಯ ಅಥಣಿಗೆ ಬೀಳ್ಕೊಡಲಾಯಿತು. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಅಕ್ಟೋಬರ್ 23 ರಿಂದ 25ರವರೆಗೆ ನಡೆಯಲಿರುವ ಕಿತ್ತೂರ ಉತ್ಸವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುವ ಈ ವಿಜಯ ಜ್ಯೋತಿ ಯಾತ್ರೆಯನ್ನು ಜಿಲ್ಲೆಯಿಂದ ಬೆಳಗಾವಿ ಜಿಲ್ಲೆಗೆ ಬೀಳ್ಕೊಡಲಾಯಿತು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿ, ಡಿವೈಎಸ್‌ಪಿ ಬಸವರಾಜ್ ಯಲಿಗಾರ, ನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜೆ.ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ಶಿವಾನಂದ ಬ್ಯಾಹಟ್ಟಿ ಪ್ರಮುಖರಾದ, ಬಿ. ಎಂ. ಪಾಟೀ¯ಲ, ಗುರುಶಾಂತ ನಿಡೋಣ,ಎಸ್.ವಿ.ಪಾಟೀಲ,ನಿಂಗನಗೌಡ ಸೋಲಾಪೂರ,ಸುರೇಶ ಬಿರಾದಾರ, ಸಂಜುಗೌಡ ಪಾಟೀಲ, ಶ್ರೀಶೈಲ ಮುಳಜಿ, ಶೋಭಾ ಬಿರಾದಾರ, ಸಿದ್ಧನಗೌಡ ಪೊಲೀಸ್ ಪಾಟೀಲ,ನಿಂಗಪ್ಪ ಸಂಗಾಪೂರ,ಬಸನಗೌಡ ಬಿರಾದಾರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಿತ್ತೂರು ರಾಣಿ ಚೆನ್ನಮ್ಮ ವಿಜಯಜ್ಯೋತಿ ಯಾತ್ರೆಗೆ ಜಿಲ್ಲಾಡಳಿತದಿಂದ ಸ್ವಾಗತ-ಬೀಳ್ಕೊಡುಗೆ


