ನಾಳೆ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ ನ.29:
ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪಿನ ಮನೆಯವರೆಗೆ ಅಳವಡಿಸಿರುವ ಮುಖ್ಯ ಏರು ಕೊಳವೆ ಮಾರ್ಗದಲ್ಲಿ ನೀರು ಸೋರುವಿಕೆಯಾಗುತ್ತಿರುವ ದುರಸ್ತಿ ಕಾಮಗಾರಿಯನ್ನು ಜಲ ಮಂಡಳಿಯಿಂದ ಕೈಗೊಳ್ಳಲಾಗುತ್ತಿರುವ ಹಿನ್ನಲೆಯಲ್ಲಿ ನ.30ರಂದು ವಿಜಯಪುರ ನಗರಕ್ಕೆ ಕೊಲ್ಹಾರ ಶುದ್ಧ ಕುಡಿಯುವ ನೀರಿನ ಘಟಕದಿಂದ ನೀರು ಸರಬರಾಜು ಆಗುವ ಪ್ರದೇಶಗಳಿಗೆ ನೀರು ಸರಬರಾಜುವಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಜಲಮಂಡಳಿಯೊಂದಿಗೆ ಸಹಕರಿಸುವಂತೆ ಜಲಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Share this