ಸಪ್ತ ಸಾಗರ ವಾರ್ತೆ ವಿಜಯಪುರ, ಅ. 16:
ಕೃಷಿ ಹೊಂಡದಲ್ಲಿ ಜಾರಿ ಬಿದ್ದು
ಓರ್ವ ಬಾಲಕ ಸೇರಿ ಮೂವರು ಮಕ್ಕಳು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದ ಮಾದೇವಿ ನಗರದಲ್ಲಿ ನಡೆದಿದೆ.
ಶಿವಮ್ಮ ರಾಜೂ ರಾಠೋಡ್ (8) , ಕಾರ್ತಿಕ ವಿಶ್ವಾ ರಾಠೋಡ್ (7) ಹಾಗೂ
ಸ್ವಪ್ನಾ ರಾಜೂ ರಾಠೋಡ್ (12) ಮೃತಪಟ್ಟ ಮಕ್ಕಳು.
ಕುರಿಗಳ ಜೊತೆಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದ ಮಕ್ಕಳು
ಆಟವಾಡುವ ವೇಳೆ ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ನೀರು ಕುಡಿದು ಸಾವನ್ನಪ್ಪಿದ್ದಾರೆ.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಸ್ಥಳಕ್ಕೆ ವಿಜಯಪುರ ತಹಸೀಲ್ದಾರ ಚನಗೊಂಡ ಹಾಗೂ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳ ಸಾವು


